ಉದ್ಯೋಗ

ಬಳ್ಳಾರಿ ಜಿಲ್ಲಾ ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

👇 ನಮ್ಮ ಪುಟ ಲೈಕ್ 👍 ಮಾಡಿ 👇👇

👆ನಮ್ಮ ಪೇಜ್ ಲೈಕ್ 👍 ಮಾಡಲು ಮರಿಬೇಡಿ ಫ್ರೆಂಡ್ಸ್ 👆

ಬಳ್ಳಾರಿ: ಬಳ್ಳಾರಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಜುಲೈ 21, 2016 ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿವಸವಾಗಿದೆ.

3 ಶೀಘ್ರಲಿಪಿಗಾರರು, 3 ಬೆರಳಚ್ಚುಗಾರರು ಹಾಗೂ 1 ಬೆರಳಚ್ಚು ನಕಲುಗಾರರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ನೇಮಕಾತಿ ಅಧಿಸೂಚನೆ ಜೊತೆಯಲ್ಲಿ ನೀಡಿರುವ ಅರ್ಜಿಯನ್ನು ಕಂಪ್ಯೂಟರ್ ಮೂಲಕ ಅಥವ ಬೆರಳಚ್ಚು ಮಾಡಿ ಎಲ್ಲಾ ಅಂಕಣಗಳನ್ನು ಭರ್ತಿ ಮಾಡಿ ಅಭ್ಯರ್ಥಿಯು ಸಲ್ಲಿಸಬಹುದಾಗಿದೆ.

ವಿದ್ಯಾರ್ಹತೆ : ಶೀಘ್ರಲಿಪಿಗಾರರು : ಎಸ್‌ಎಸ್‌ಎಲ್‌ಸಿ/ತತ್ಸಮಾನ ಪರೀಕ್ಷೆ ಮತ್ತು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯವರು ನಡೆಸುವ ಕನ್ನಡ, ಇಂಗ್ಲಿಷ್ ಎರಡೂ ಭಾಷೆಯಲ್ಲೂ ಹಿರಿಯ ಶ್ರೇಣಿ ಬೆರಳಚ್ಚು ಮತ್ತು ಶೀಘ್ರಲಿಪಿ/ತತ್ಸಮಾನ ಪರೀಕ್ಷೆಯಲ್ಲಿ ಪಾಸಾಗಿರುವ ಬೇಕು. ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ನಿಗದಿ ಪಡಿಸಿದ ವಿದ್ಯಾರ್ಹತೆಯನ್ನು ಪಡೆದಿರಬೇಕು.

ಬೆರಳಚ್ಚುಗಾರರು : ಎಸ್‌ಎಸ್‌ಎಲ್‌ಸಿ/ತತ್ಸಮಾನ ಪರೀಕ್ಷೆ ಮತ್ತು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯವರು ನಡೆಸುವ ಕನ್ನಡ, ಇಂಗ್ಲಿಷ್ ಎರಡೂ ಭಾಷೆಯಲ್ಲೂ ಹಿರಿಯ ಶ್ರೇಣಿ ಬೆರಳಚ್ಚು ಮತ್ತು ಶೀಘ್ರಲಿಪಿ/ತತ್ಸಮಾನ ಪರೀಕ್ಷೆಯಲ್ಲಿ ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ವಿದ್ಯಾರ್ಹತೆಯನ್ನು ಪಡೆದಿರಬೇಕು.

ಬೆರಳಚ್ಚು ನಕಲುಗಾರರು : ಎಸ್‌ಎಸ್‌ಎಲ್‌ಸಿ/ತತ್ಸಮಾನ ಪರೀಕ್ಷೆ ಮತ್ತು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯವರು ನಡೆಸುವ ಕನ್ನಡ, ಇಂಗ್ಲಿಷ್ ಎರಡೂ ಭಾಷೆಯಲ್ಲೂ ಹಿರಿಯ ಶ್ರೇಣಿ ಬೆರಳಚ್ಚು ಮತ್ತು ಶೀಘ್ರಲಿಪಿ ಅಥವ ತತ್ಸಮಾನ ಪರೀಕ್ಷೆಯಲ್ಲಿ ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ವಿದ್ಯಾರ್ಹತೆಯನ್ನು ಪಡೆದಿರಬೇಕು.

ಅರ್ಜಿ ಸಲ್ಲಿಸ ಬೇಕಾದ ವಿಳಾಸ : ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಬಳ್ಳಾರಿ – 583101.

ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಜುಲೈ 21ರ ಸಂಜೆ 5 ಗಂಟೆಯೊಳಗೆ ಅರ್ಜಿ ತಲುಪುವಂತೆ ಕಳುಹಿಸಬೇಕು.

ಅರ್ಜಿ ನಮೂನೆ, ಮೀಸಲಾತಿ ವಿವರ ಸೂಚನೆಗಳು ಮತ್ತು ಹೆಚ್ಚಿನ ವಿವರ http://ecourts.gov.in/india/Karnataka/ballari/recruitment ನಲ್ಲಿ ಲಭ್ಯವಿದೆ

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

👇 ನಮ್ಮ ಪುಟ ಲೈಕ್ 👍 ಮಾಡಿ 👇👇

👆ನಮ್ಮ ಪೇಜ್ ಲೈಕ್ 👍 ಮಾಡಲು ಮರಿಬೇಡಿ ಫ್ರೆಂಡ್ಸ್ 👆

Comments

comments

Click to comment

Leave a Reply

Your email address will not be published. Required fields are marked *

To Top