News

PSI ರೂಪಾ ಆತ್ಮಹತ್ಯೆ ಯತ್ನ ಪ್ರಕರಣ….

👇 ನಮ್ಮ ಪುಟ ಲೈಕ್ 👍 ಮಾಡಿ 👇👇

👆ನಮ್ಮ ಪೇಜ್ ಲೈಕ್ 👍 ಮಾಡಲು ಮರಿಬೇಡಿ ಫ್ರೆಂಡ್ಸ್ 👆

ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಇಬ್ಬರು ಡಿವೈಎಸ್ಪಿಗಳು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಗಳು ಇನ್ನೂ ಕಣ್ಣಮುಂದಿರುವಾಗಲೇ ಬೆಂಗಳೂರಿನಲ್ಲಿ ಮಹಿಳಾ ಪಿಎಸ್ಐವೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿಲಾಗಿದ್ದು, ಅವರ ಆರೋಗ್ಯ ಈಗ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ವಿಜಯನಗರ ಠಾಣೆಯ ಮಹಿಳಾ ಪಿಎಸ್‌ಐ ರೂಪ ರಾಜಾಜಿನಗರದ ಪೊಲೀಸ್ ಕ್ವಾಟ್ರಸ್‌ನಲ್ಲಿ ಸಮವಸ್ತ್ರದಲ್ಲೇ ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. 25 ಮಾತ್ರೆಗಳನ್ನು ರೂಪಾ ನುಂಗಿದ್ದಾರೆ. 15 ಪ್ಯಾರಸಿಟಮಾಲ್, 10 ಡಾರ್ಟ್ ಮಾತ್ರೆಗಳನ್ನು ಸೇವಿಸಿದ್ದಾರೆ ಎನ್ನಲಾಗಿದೆ. ಆತ್ಮಹತ್ಯೆ ಯತ್ನಕ್ಕೆ ನಿಜವಾದ ಕಾರಣ ಏನೆಂದು ತಿಳಿದುಬಂದಿಲ್ಲ.

ಸದ್ಯ ತೀವ್ರ ಅಸ್ವಸ್ಥಗೊಂಡಿರುವ ರೂಪಾರನ್ನು ರಾಜಾಜಿನಗರದ ಸುಗುಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ರೂಪಾ ಸ್ಥಿತಿ ಗಂಭೀರವಾಗಿದೆ. ರೂಪಾರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಮಧ್ಯಾಹ್ನ 2.30ಕ್ಕೆ ಠಾಣೆಯಿಂದ ಕ್ವಾಟ್ರಸ್‌ಗೆ ತೆರಳಿದ್ದ ರೂಪಾ ಆ ಬಳಿಕ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ಹಿರಿಯ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಆತ್ಮಹತ್ಯೆಗೆ ಕಾರಣವೇನು?

ಪೊಲೀಸ್ ಇನ್ಸ್‌ಪೆಕ್ಟರ್‌ವೊಬ್ಬರು ಪ್ರಕರಣವೊಂದರ ಸಂಬಂಧ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ರೂಪಾ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ನಿನ್ನೆ ಮಧ್ಯಾಹ್ನ ಒಂದು ಗಂಟೆ ಕಾಲ ಇನ್ಸ್‌ಪೆಕ್ಟರ್‌ವೊಬ್ಬರು ರೂಪಾರನ್ನು ವಿಚಾರಣೆ ನಡೆಸಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.

ಆದರೆ ಈ ಬಗ್ಗೆ ತಮಗೆ ಮಾಹಿತಿ ಇಲ್ಲ, ತನಿಖೆ ನಡೆಸಲಾಗುವುದು ಎಂದು ಆಸ್ಪತ್ರೆಗೆ ಭೇಟಿ ನೀಡಿದ್ದ ಹೆಚ್ಚುವರಿ ಪೊಲೀಸ್ ಆಯುಕ್ತ ಚರಣ್ ರೆಡ್ಡಿ ಹೇಳಿದ್ದಾರೆ.

ಪರಮೇಶ್ವರ್ ಹೇಳಿಕೆ–  ಪೊಲೀಸರು ಆತ್ಮಸ್ಥೈರ್ಯ ಕಳೆದುಕೊಳ್ಳಬಾರದು. ಏನೇ ಸಮಸ್ಯೆ ಇದ್ದರು ಹಿರಿಯ ಅಧಿಕಾರಿಗಳ ಜೊತೆ ಮಾತನಾಡಿ ನಿಮ್ಮೊಂದಿಗೆ ಸರ್ಕಾರ ಇದೆ  ಎಂದು ಹೇಳಿದರು. ಹಾಗೂ ಪೊಲೀಸ್ ಇಲಾಖೆಯಲ್ಲಿ ವಿಶೇಷ ಬದಲಾವಣೆ ಮಾಡ್ತಿದ್ದೀನಿ ಮತ್ತು ಏನೇ ಸಮಸ್ಯೆಗಳಿದ್ರು ನನಗೆ ಅಧಿಕಾರಿಗಳು ಮಾಹಿತಿ ನೀಡಬಹುದು ಎಂದು ತಿಳಿಸಿದರು.ಪ್ರತಿ ಶುಕ್ರವಾರ ನಡೆಯುವ ಪರೇಡ್ ನಲ್ಲಿ ಪೊಲೀಸರ ಸಮಸ್ಯೆಗಳನ್ನ ಹೇಳಿಕೊಳ್ಳಬೇಕು ಹಾಗೂ ಪೊಲೀಸರು ಆತ್ಮಸ್ಥೈರ್ಯ ಹೆಚ್ವಿಸುವ ಸಲುವಾಗಿ ವಿಶೇಷ ಕಾರ್ಯಕ್ರಮಗಳನ್ನ ಹಮ್ಮಿಕೊಳ್ಳಲಾಗಿದೆ. ಯಾರು ಕೂಡ ಆತ್ಮಹತ್ಯೆ ಮಾಡಿಕೊಳ್ಳಬಾರದು ಸರ್ಕಾರದ ಪರವಾಗಿ ಹಾಗು ಗೃಹ ಇಲಾಖೆಯ ಸಚಿವ ನಾಗಿ ಹೇಳುತ್ತಿದ್ದೇನೆ ನಿಮ್ಮ ಸಮಸ್ಯೆಗಳೂ ಏನೇ ಇದ್ದರೂ ನನ್ನ ಬಳಿ ಬಂದು ಹೇಳಿ ಎಂದು ಡಾ.ಜಿ.ಪರಮೇಶ್ವರ ಸ್ಪಷ್ಟಪಡಿಸಿದ್ದಾರೆ.

 

Comments

comments

Click to comment

Leave a Reply

Your email address will not be published. Required fields are marked *

To Top