Karnataka

13,306 ಅತಿಥಿ ಶಿಕ್ಷಕರ ನೇಮಕಕ್ಕೆ ಸರಕಾರ ಸಿದ್ಧತೆ: ತನ್ವೀರ್ ಸೇಠ್

👇 ನಮ್ಮ ಪುಟ ಲೈಕ್ 👍 ಮಾಡಿ 👇👇

👆ನಮ್ಮ ಪೇಜ್ ಲೈಕ್ 👍 ಮಾಡಲು ಮರಿಬೇಡಿ ಫ್ರೆಂಡ್ಸ್ 👆

 

ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಕೊರತೆ ಇರುವ 22 ಸಾವಿರ ಶಿಕ್ಷಕರ ಪೈಕಿ ಪ್ರಸಕ್ತ ಸಾಲಿನಲ್ಲಿ 13,306 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು, ಜು.21- ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಕೊರತೆಯಿರುವ 22 ಸಾವಿರ ಶಿಕ್ಷಕರ ಪೈಕಿ 13,306 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವುದಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ತಿಳಿಸಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ 10 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ಒಪ್ಪಿಗೆ ಪಡೆದಿರುವೆ. ಹೆಚ್ಚುವರಿಯಾಗಿ 3,306 ಅತಿಥಿ ಶಿಕ್ಷಕರ ನೇಮಕಾತಿಗೂ ಸಮ್ಮತಿ ಕೇಳಿದ್ದೇನೆ ಎಂದು ಹೇಳಿದರು. ಇದೇ ರೀತಿ ಇನ್ನು ಮುಂದೆ ಶಿಕ್ಷಕರ ಕೊರತೆಯಾಗದಂತೆ ನೋಡಿಕೊಳ್ಳುತ್ತೇನೆ. ಪ್ರತೀ ಎರಡು ವರ್ಷದಲ್ಲಿ ನಿವೃತ್ತಿಯಾಗುವ ಶಿಕ್ಷಕರ ಸಂಖ್ಯೆ ಗಮನದಲ್ಲಿಟ್ಟುಕೊಂಡು ನೇಮಕಾತಿ ಮಾಡಲು ಕ್ರಮ ಕೈಗೊಳ್ಳುತ್ತೇವೆ.

ಇದುವರೆಗೆ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯಲ್ಲಿ ತಾಲೂಕನ್ನು ಘಟಕವನ್ನಾಗಿ ಮಾಡಿಕೊಳ್ಳಲಾಯಿತು. ಇನ್ನು ಮುಂದೆ ಜಿಲ್ಲೆಯನ್ನೇ ಒಂದು ಘಟಕವನ್ನಾಗಿ ಮಾಡಿ ಪ್ರಕ್ರಿಯೆ ನಡೆಸಲಾಗುವುದು. ಇದರಿಂದ ವರ್ಗಾವಣೆ ಗೊಂದಲ ನಿವಾರಣೆಯಾಗಲಿದೆ ಎಂದು ವಿವರಿಸಿದರು.

ಶಿಕ್ಷಣ ಹಕ್ಕು ಕಾಯ್ದೆಯಡಿ 1.15 ಲಕ್ಷ ವಿದ್ಯಾರ್ಥಿಗಳಿಗೆ, ಖಾಸಗಿ ಶಾಲೆಗಳಲ್ಲಿ ಪ್ರವೇಶ ನೀಡಲಾಗುತ್ತಿದೆ. ಆದರೆ, ಹಲವಾರು ಕಾರಣಗಳಿಂದ ಅಷ್ಟೂ ಪ್ರಮಾಣದ ಮಕ್ಕಳು ಸಿಗುತ್ತಿಲ್ಲ ಎಂದರು.ಶಾಲಾ ಮಕ್ಕಳಿಗೆ ಪ್ರಸಕ್ತ ಸಾಲಿನಲ್ಲಿ ನೀಡುವ ಪಠ್ಯ, ಸಮವಸ್ತ್ರ ಪೂರೈಕೆ ಪ್ರಕ್ರಿಯೆ ಆರಂಭವಾಗಿದೆ. ಈ ತಿಂಗಳ ಅಂತ್ಯದ ವೇಳೆಗೆ ಇದು ಪೂರ್ಣಗೊಳ್ಳಲಿದ್ದು, ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಕುಡಿಯುವ ನೀರು ಹಾಗೂ ಶೌಚಾಲಯ ವ್ಯವಸ್ಥೆ ಕಲ್ಪಿಸುವ ತ್ವರಿತ ಯೋಜನೆ ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಸರ್ಕಾರಿ ಶಾಲೆಗಳಲ್ಲಿ ತಮ್ಮದೇ ಆದ ಸಮವಸ್ತ್ರ ಬಳಸುತ್ತಿದ್ದ ಕೆಲವೆಡೆ ಡಿಡಿಪಿಐಗಳು ಭೇಟಿ ನೀಡಿ ಅದನ್ನು ತಡೆದಿದ್ದಾರೆ ಎಂದು ತಿಳಿಸಿದರು.ಶಿಕ್ಷಣ ಇಲಾಖೆಗೆ ತಾವು ಬಂದ ನಂತರ ಇಲಾಖೆ ಸುಧಾರಣೆಗೆ ಏನೇನು ಕ್ರಮ ಕೈಗೊಳ್ಳಬೇಕು ಎಂಬುದನ್ನು ಚಿಂತಿಸಿ ಆದಷ್ಟು ಬೇಗ ಅದನ್ನು ಜಾರಿಗೆ ತರುತ್ತೇವೆ. 1 ರಿಂದ 10ನೆ ತರಗತಿವರೆಗಿನ ಖಾಸಗಿ ಶಾಲೆಗಳಲ್ಲಿ ನಡೆಯುತ್ತಿರುವ ಶುಲ್ಕ ಸುಲಿಗೆ ಗಮನಕ್ಕೆ ಬಂದಿದೆ.ಜನವರಿಯಲ್ಲಿ ಶುಲ್ಕದ ಸ್ವರೂಪವನ್ನು ಪ್ರಕಟಿಸುವಂತೆ ಶಾಲೆಗಳಿಗೆ ಸೂಚಿಸಲಾಗುತ್ತದೆ. ಸರ್ಕಾರ 15 ದಿನಗಳಲ್ಲಿ ವ್ಯಾಜ್ಯ ಸರಿಪಡಿಸಲಿದೆ ಎಂದು ಹೇಳಿದರು.ಮರಳಿ ಶಾಲೆಗೆ ಬಾ ಕಾರ್ಯಕ್ರಮ ಮುಂದಿನ ತಿಂಗಳಿನಿಂದ ಆರಂಭಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

👇 ನಮ್ಮ ಪುಟ ಲೈಕ್ 👍 ಮಾಡಿ 👇👇

👆ನಮ್ಮ ಪೇಜ್ ಲೈಕ್ 👍 ಮಾಡಲು ಮರಿಬೇಡಿ ಫ್ರೆಂಡ್ಸ್ 👆

Comments

comments

Click to comment

Leave a Reply

Your email address will not be published. Required fields are marked *

To Top