fbpx
Editor's Pick

ಹಿಂದೂ ಸಂಪ್ರದಾಯಗಳ 10 ಹಲವು ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ

1.ಹೆಂಗಸರು ಏಕೆ ಕಾಲುಂಗುರವನ್ನು ಹಾಕಿಕೊಳ್ಳುತ್ತಾರೆ:

11402680_508285672659005_9079551724764796390_n

ಕಾಲುಂಗುರ ಹಾಕಿಕೊಳ್ಳುವುದು ಕೇವಲ ಮದುವೆಯಾಗಿದ್ದೇವೆ ಎಂದು ತೋರಿಸಲಷ್ಟೇ ಅಲ್ಲ. ಅದರ ಹಿಂದೆ ವೈಜ್ಞಾನಿಕ ಕಾರಣವು ಸಹ ಇದೆ. ಅದೇನೆಂದರೆ ಸಾಮಾನ್ಯವಾಗಿ ಹೆಂಗಸರು ತಮ್ಮ ಕಾಲಿನ ಎರಡನೆ ಬೆರಳಿಗೆ ಈ ಕಾಲುಂಗುರವನ್ನು ಹಾಕಿಕೊಳ್ಳುತ್ತಾರೆ. ಇದರಲ್ಲಿರುವ ನರವು ನೇರವಾಗಿ ಗರ್ಭಾಶಯ ಮತ್ತು ಹೃದಯವನ್ನು ಸಂಪರ್ಕಿಸುತ್ತದೆ. ಇದಕ್ಕೆ ಕಾಲುಂಗುರವನ್ನು ಹಾಕಿಕೊಳ್ಳುವುದರಿಂದ ಗರ್ಭಾಶಯವು ಸದೃಢಗೊಳ್ಳುತ್ತದೆ. ಇದರಿಂದ ಗರ್ಭಕೋಶಕ್ಕೆ ನಿರಂತರವಾಗಿ ರಕ್ತ ಪೂರೈಕೆಯು ಸರಾಗವಾಗಿ ಸಾಗುತ್ತದೆ ಮತ್ತು ಋತು ಚಕ್ರವು ಯಾವುದೇ ದೋಷಗಳಿಲ್ಲದೆ ನಡೆಯುತ್ತದೆ. ಬೆಳ್ಳಿಯು ಅತ್ಯುತ್ತಮವಾದ ವಾಹಕವಾಗಿದ್ದು, ಇದು ಭೂಮಿಯಲ್ಲಿನ ಧೃವೀಯ ಶಕ್ತಿಗಳನ್ನು ಎಳೆದುಕೊಂಡು ಅದನ್ನು ದೇಹಕ್ಕೆ ರವಾನಿಸುತ್ತದೆ.

2.ನಾವೇಕೆ ತುಳಸಿ ಗಿಡಗಳನ್ನು ಪೂಜಿಸುತ್ತೇವೆ:

faa41780f230e576864591ae6c368843

ಹಿಂದೂ ಧರ್ಮವು “ತುಳಸಿ” ಗಿಡಕ್ಕೆ ಮಾತೃ ಸ್ಥಾನವನ್ನು ನೀಡಿ ಗೌರವಿಸಿದೆ. ” ಪವಿತ್ರ ತುಳಸಿ” ಎಂದು ಸಹ ಕರೆಯಲ್ಪಡುವ ತುಳಸಿಯು ಭಾರತದಲ್ಲಿಯಷ್ಟೇ ಅಲ್ಲದೆ ಪ್ರಪಂಚದ ಇತರ ಭಾಗಗಳಲ್ಲು ಸಹ ಪೂಜ್ಯನೀಯ ಸ್ಥಾನವನ್ನು ಪಡೆದು, ಧಾರ್ಮಿಕವಾಗಿ ಮತ್ತು ಆಧ್ಯಾತ್ಮಿಕವಾಗಿ ಪರಿಗಣಿಸಲ್ಪಡುತ್ತಿದೆ. ವೇದ ಕಾಲದ ಋಷಿ ಮುನಿಗಳಿಗೆ ಇದರ ಪ್ರಯೋಜನಗಳು ಚೆನ್ನಾಗಿ ತಿಳಿದಿದ್ದವು. ಆದ್ದರಿಂದಲೇ ಅವರು ಇದಕ್ಕೆ ಮಾತೃ ಸ್ಥಾನವನ್ನು ನೀಡಿ, ಪ್ರತಿಯೊಬ್ಬರ ಮನೆಯಲ್ಲಿ ಇದನ್ನು ಬೆಳೆಯಬೇಕೆಂಬ ಸಂದೇಶವನ್ನು ರವಾನಿಸಿದರು. ಹೀಗಾಗಿ ಇಂದು ಅಕ್ಷರಸ್ಥರು ಮತ್ತು ಅನಕ್ಷರಸ್ಥರು ಎಂಬ ಬೇಧ ಭಾವವಿಲ್ಲದೆ ಎಲ್ಲರ ಮನೆಯಲ್ಲೂ ತುಳಸಿಯನ್ನು ನಾವು ಕಾಣಬಹುದು. ಇದನ್ನು ನಾವು ಮನೆಯಲ್ಲಿ ಬೆಳೆಸುವ ಮೂಲಕ ಈ ಸಸ್ಯವನ್ನು ನಾವು ಸಂರಕ್ಷಿಸುತ್ತಿದ್ದೇವೆ, ಏಕೆಂದರೆ ಇದು ಮನುಕುಲದ ಸಂಜೀವಿನಿ ಎಂಬ ಕಾರಣಕ್ಕಾಗಿ. ತುಳಸಿಯಲ್ಲಿ ಔಷಧೀಯ ಗುಣಗಳ ಆಗರವೇ ಅಡಗಿರುವುದು ಎಲ್ಲರಿಗು ತಿಳಿದ ವಿಚಾರವೇ. ಇದೊಂದು ಅದ್ಭುತವಾದ ಆಂಟಿ ಬಯೋಟಿಕ್. ಪ್ರತಿದಿನ ಚಹಾ ಜೊತೆಗೆ ತುಳಸಿಯನ್ನು ಸೇವಿಸುವುದರಿಂದ ರೋಗ ನಿರೋಧಕ ಶಕ್ತಿಯು ಹೆಚ್ಚಾಗುತ್ತದೆ ಹಾಗು ಕುಡಿಯುವವರಿಗೆ ರೋಗಗಳು ಕಾಡುವ ಅಪಾಯವಿರುವುದಿಲ್ಲ. ಆತನ ಆರೋಗ್ಯ ಸ್ಥಿತಿ ಸಮತೋಲನದಲ್ಲಿರುವುದರ ಜೊತೆಗೆ, ಆತನ ಆಯುಸ್ಸು ಸಹ ಹೆಚ್ಚಾಗುತ್ತದೆ. ತುಳಸಿ ಸಸ್ಯಗಳನ್ನು ಮನೆಯಲ್ಲಿ ಇರಿಸಿಕೊಳ್ಳುವುದರಿಂದ ಮನೆಯೊಳಗೆ ಸೊಳ್ಳೆ ಮುಂತಾದ ಕೀಟಗಳು ಪ್ರವೇಶಿಸುವುದನ್ನು ತಡೆಗಟ್ಟಬಹುದು. ನಂಬಿಕೆಗಳ ಪ್ರಕಾರ ಹಾವುಗಳು ಸಹ ತುಳಸಿ ಗಿಡದ ಬಳಿಗೆ ಹೋಗುವ ಧೈರ್ಯವನ್ನು ಮಾಡುವುದಿಲ್ಲವಂತೆ. ಬಹುಶಃ ಅದಕ್ಕೆ ಇರಬೇಕು ಪ್ರಾಚೀನ ಕಾಲದ ಜನರು ತುಳಸಿಯನ್ನು ತಮ್ಮ ಮನೆಯ ಸಮೀಪದಲ್ಲಿ ಬೆಳೆಸುತ್ತಿದ್ದುದು.

3. ಚರಣ ಸ್ಪರ್ಶದ ಹಿಂದಿನ ವೈಜ್ಞಾನಿಕ ವಿವರಣೆ:

download

ಸಾಮಾನ್ಯವಾಗಿ ನಾವು ಚರಣ ಸ್ಪರ್ಶ ಮಾಡುವ ವ್ಯಕ್ತಿಯು ನಮಗಿಂತ ವಯಸ್ಸಾದವರು ಅಥವಾ ಧಾರ್ಮಿಕ ಹಿನ್ನಲೆಯ ವ್ಯಕ್ತಿಗಳು ಆಗಿರುತ್ತಾರೆ. ಯಾವಾಗ ಅವರು ನಿಮ್ಮ ನಮಸ್ಕಾರವನ್ನು ಸ್ವೀಕರಿಸುತ್ತಾರೋ, ಈ ಕ್ರಿಯೆಯು ನಿಮ್ಮ ಅಹಂ ಅನ್ನು ದಾಟಿಕೊಂಡು ಬಂದಿರುತ್ತದೆ ( ಇದನ್ನೇ ಶ್ರದ್ಧೆ ಎಂದು ಕರೆಯುತ್ತಾರೆ). ನಿಮ್ಮ ಚರಣ ಸ್ಪರ್ಶವನ್ನು ಸ್ವೀಕರಿಸುವ ಅವರ ಹೃದಯವು ಧನಾತ್ಮಕ ಆಲೋಚನೆಗಳಿಂದ ಮತ್ತು ಶಕ್ತಿಯಿಂದ ನಿಮ್ಮನ್ನು ಹರಸುತ್ತದೆ (ಇದನ್ನು ಕರುಣಾ ಎಂದು ಕರೆಯುತ್ತಾರೆ). ಇದು ನಿಮ್ಮನ್ನು ಅವರ ಕೈ ಮತ್ತು ಕಾಲ್ಬೆರಳುಗಳ ಮೂಲಕ ತಲುಪುತ್ತದೆ. ಈ ಒಂದು ಪ್ರಕ್ರಿಯೆಯು ಆ ಸ್ಥಳದಲ್ಲಿ ಶಕ್ತಿ ಸಂಚಯವನ್ನು ಹೆಚ್ಚಿಸುತ್ತದೆ ಮತ್ತು ಲೌಕಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಹಾಗು ಎರಡು ಮನಸ್ಸು, ಹೃದಯಗಳನ್ನು ಬೆಸೆಯುತ್ತದೆ. ಇದೇ ಕ್ರಿಯೆಯನ್ನು ಹಸ್ತ ಲಾಘವ ಮಾಡುವ ಮೂಲಕ ಹಾಗು ಅಪ್ಪಿಕೊಳ್ಳುವ ಮೂಲಕ ಸಹ ಮಾಡಬಹುದು. ಮೆದುಳಿನಿಂದ ಆರಂಭವಾಗುವ ನರಗಳು ನಿಮ್ಮ ಇಡೀ ದೇಹದ ತುಂಬಾ ಹರಡಿಕೊಂಡಿರುತ್ತವೆ. ಈ ನರಗಳು ನಿಮ್ಮ ಕೈಬೆರಳು ಮತ್ತು ಕಾಲು ಬೆರಳುಗಳಲ್ಲಿ ಅಂತ್ಯವಾಗಿರುತ್ತದೆ.ಯಾವಾಗ ನೀವು ನಿಮ್ಮ ಕೈಬೆರುಳಿನ ತುದಿಯನ್ನು ಇತರರ ಪಾದದ ಮೇಲೆ ಸ್ಪರ್ಶಿಸುತ್ತೀರೋ, ಆಗ ಎರಡು ದೇಹದ ನಡುವೆ ಒಂದು ಬಗೆಯ ವಿದ್ಯುತ್ಪ್ರವಾಹವು ಹರಿಯುತ್ತದೆ. ಆಗ ನಿಮ್ಮ ಬೆರಳು ಮತ್ತು ಹಸ್ತಗಳು ಈ ವಿದ್ಯುತ್ ಶಕ್ತಿಯ ” ಧಾರಕಗಳಾಗಿ” ಕಾರ್ಯನಿರ್ವಹಿಸುತ್ತವೆ. ನಿಮ್ಮಿಂದ ಚರಣ ಸ್ಪರ್ಶಕ್ಕೆ ಒಳಗಾಗುವ ವ್ಯಕ್ತಿಯ ಕಾಲುಗಳು ಆಗ ಶಕ್ತಿಯನ್ನು ” ನೀಡುವ” ಅಂಶವಾಗಿ ಗುರುತಿಸಲ್ಪಡುತ್ತದೆ.

4. ಭಾರತೀಯ ಮಹಿಳೆಯರು ಏಕೆ ಬಳೆಗಳನ್ನು ಧರಿಸುತ್ತಾರೆ:

c6f129d0084657ba6d6184980da4bf60

ಸಾಮಾನ್ಯವಾಗಿ ಮನುಷ್ಯರಲ್ಲಿ ಮೊಣಕೈ ಭಾಗವು ಅತಿ ಹೆಚ್ಚು ಸಕ್ರಿಯವಾಗಿರುವ ಭಾಗವಾಗಿದೆ. ಇದರ ಜೊತೆಗೆ ಇದೇ ಭಾಗದಲ್ಲಿನ ನಾಡಿಯನ್ನು ಪರೀಕ್ಷಿಸಿಯೇ ಜನರಿಗೆ ಬರುವ ವಿವಿಧ ಕಾಯಿಲೆಗಳನ್ನು ಗುರುತಿಸಬಹುದು. ಮಹಿಳೆಯರು ಬಳೆಗಳನ್ನು ತಮ್ಮ ಅಂಗೈಗೆ ಧರಿಸಿಕೊಳ್ಳುವುದು ತಿಳಿದ ವಿಚಾರವೇ. ಇದರಿಂದ ಬಳೆಗಳ ನಿರಂತರ ಘರ್ಷಣೆಯು ಈ ಭಾಗದ ಮೇಲೆ ಆಗುತ್ತಿರುತ್ತದೆ. ಆಗ ಇದು ದೇಹದಲ್ಲಿನ ರಕ್ತ ಪರಿಚಲನೆಯು ಅಧಿಕಗೊಳ್ಳುತ್ತದೆ. ಕೆಲವೊಮ್ಮೆ ನಮ್ಮ ದೇಹದಲ್ಲಿ ಸೃಷ್ಟಿಯಾಗುವ ವಿದ್ಯುತ್ ನಮ್ಮ ತ್ವಚೆಯ ಮೂಲಕ ಹೊರ ಬರುತ್ತದೆ, ಆಗ ಬಳೆಗಳು ಅದನ್ನು ಎಳೆದುಕೊಂಡು ಪುನಃ ನಮ್ಮ ದೇಹಕ್ಕೆ ರವಾನಿಸುತ್ತವೆ. ಏಕೆಂದರೆ ಬಳೆಗಳು ದುಂಡಗೆ ವೃತ್ತಾಕಾರವಾಗಿ ಇರುವುದರಿಂದ ವಿದ್ಯುತ್ ಇತರ ಕಡೆ ಪ್ರವಾಹಿಸಲು ಸಾಧ್ಯವಾಗದೆ ಮರಳಿ ದೇಹಕ್ಕೆ ರವಾನೆಯಾಗುತ್ತದೆ.

5. ನಾವೇಕೆ ವಿಗ್ರಹಗಳನ್ನು ಪೂಜಿಸುತ್ತೇವೆ:

images

ಹಿಂದೂ ಧರ್ಮವು ಇತರ ಧರ್ಮಗಳಿಗಿಂತ ಹೆಚ್ಚಾಗಿ ಮೂರ್ತಿ ಪೂಜೆಯನ್ನು ಬೆಂಬಲಿಸುತ್ತದೆ. ಇದರಿಂದ ಪೂಜೆಯಲ್ಲಿ ಏಕಾಗ್ರತೆಯು ಅಧಿಕವಾಗುತ್ತದೆ ಎಂದು ಅಧ್ಯಯನಕಾರರು ಸ್ಪಷ್ಟಪಡಿಸಿದ್ದಾರೆ. ಮನೋವಿಜ್ಞಾನಿಗಳ ಪ್ರಕಾರ ಮನುಷ್ಯನು ತಾನು ನೋಡುವುದರ ಆಧಾರದ ಮೇಲೆ ಆಲೋಚನೆಗಳನ್ನು ಹೊಂದುತ್ತಾನಂತೆ. ಒಂದು ವೇಳೆ ನಿಮ್ಮ ಮುಂದೆ ಮೂರು ವಸ್ತುಗಳು ಇದ್ದಲ್ಲಿ, ಅದರಲ್ಲಿ ಯಾವ ವಸ್ತುವನ್ನು ನೋಡುತ್ತೀರಿ ಎಂಬುದರ ಮೇಲೆ ನಿಮ್ಮ ಭಾವನೆಗಳು ಬದಲಾಗುತ್ತವೆಯಂತೆ. ಈ ಕಾರಣವಾಗಿಯೇ ಪ್ರಾಚೀನ ಕಾಲದಲ್ಲಿ ಮೂರ್ತಿ ಪೂಜೆಯು ಆರಂಭಗೊಂಡಿತು. ಯಾವಾಗ ಜನರು ದೇವರನ್ನು ಮೂರ್ತಿಯ ರೂಪದಲ್ಲಿ ನೋಡಲು ಆರಂಭಿಸಿದರೋ, ಆಗಲೇ ಅವರ ಮನಸ್ಸನ್ನು ಏಕ ಚಿತ್ತದಿಂದ ದೇವರ ಮೇಲೆ ನೆಲೆಗೊಳಿಸಲು ಸಾಧ್ಯವಾಗುತ್ತ ಹೋಯಿತು. ಇದರಿಂದ ಅವರ ಧ್ಯಾನಕ್ಕೆ ಯಾವುದೇ ಭಂಗ ಬರುತ್ತಿರಲಿಲ್ಲ ಮತ್ತು ಅವರಲ್ಲಿ ಆಧ್ಯಾತ್ಮಿಕ ಶಕ್ತಿಯು ಹೆಚ್ಚಾಗುತ್ತ ಹೋಗುತ್ತಿತ್ತು.

6. ನಾವೇಕೆ ಉಪವಾಸವಿರುತ್ತೇವೆ:

milk-and-banana-diet-934209934209

ಉಪವಾಸದ ಹಿಂದಿನ ತತ್ವವು ಆಯುರ್ವೇದದಲ್ಲಿ ಅಡಗಿದೆ. ಈ ಪ್ರಾಚೀನ ವೈಧ್ಯ ವಿಜ್ಞಾನವು ಹಲವಾರು ಕಾಯಿಲೆಗಳಿಗೆ ಮೂಲ ಕಾರಣವು ನಮ್ಮ ಜೀರ್ಣಾಂಗ ವ್ಯೂಹದಲ್ಲಿ ಬಿಡುಗಡೆಯಾಗುವ ಟಾಕ್ಸಿಕ್ ಪದಾರ್ಥಗಳೇ ಆಗಿರುತ್ತದೆ ಎಂದು ಹೇಳುತ್ತದೆ. ಈ ಟಾಕ್ಸಿಕ್ ಪದಾರ್ಥಗಳನ್ನು ನಿರಂತರವಾಗಿ ಸ್ವಚ್ಛ ಮಾಡುತ್ತ ಇರುವುದರಿಂದ ನಾವು ಆರೋಗ್ಯವಾಗಿರಬಹುದು. ಉಪವಾಸ ಮಾಡುವುದರಿಂದ ಜೀರ್ಣಾಂಗ ವ್ಯೂಹಕ್ಕೆ ಸ್ವಲ್ಪ ವಿಶ್ರಾಂತಿಯು ದೊರೆಯುತ್ತದೆ ಮತ್ತು ದೇಹದಲ್ಲಿರುವ ಅಂಗಗಳು ಸರಿಯಾಗಿ ಕಾರ್ಯ ನಿರ್ವಹಿಸುತ್ತವೆ. ಒಂದು ಉಪವಾಸವು ಆರೋಗ್ಯಕ್ಕೆ ಒಳ್ಳೆಯದು. ಈ ಅವಧಿಯಲ್ಲಿ ನಿಯಮಿತವಾಗಿ ಲಿಂಬೆ ರಸವನ್ನು ಸೇವಿಸುವುದರಿಂದ ದೇಹದಲ್ಲಿ ವಾಯು ತುಂಬಿಕೊಳ್ಳುವ ಸಮಸ್ಯೆಯು ತಲೆದೋರುವುದಿಲ್ಲ. ಆಯುರ್ವೇದದಲ್ಲಿ ಹೇಳಿರುವಂತೆ ನಮ್ಮ ದೇಹದ್ಲಲಿ ಶೇ 80% ರಷ್ಟು ನೀರು ಮತ್ತು ಶೇ.20% ರಷ್ಟು ಘನ ಪದಾರ್ಥಗಳು ಇರುತ್ತವೆ. ಭೂಮಿಯ ಮೇಲೆ ಪರಿಣಾಮ ಬೀರಿದಂತೆ ಚಂದ್ರನು ನಮ್ಮ ದೇಹದಲ್ಲಿನ ನೀರಿನಂಶದ ಮೇಲೆ ಪ್ರಭಾವ ಬೀರುತ್ತಾನೆ. ಆಗ ಜನರು ಉದ್ವೇಗ, ಕಿರಿಕಿರಿ ಮತ್ತು ಹಿಂಸಾ ಪ್ರವೃತ್ತಿಗೆ ಇಳಿಯುತ್ತಾರೆ. ಈ ಸಮಸ್ಯೆಗೆ ಉಪವಾಸವು ಪ್ರತಿ ವಿಷದಂತೆ ಕಾರ್ಯ ನಿರ್ವಹಿಸುತ್ತದೆ. ಏಕೆಂದರೆ ಇದು ನಮ್ಮ ದೇಹದಲ್ಲಿನ ಆಮ್ಲದ ಅಂಶವನ್ನು ಕಡಿಮೆ ಮಾಡುತ್ತದೆ. ಇದರಿಂದ ಜನರು ತಮ್ಮ ವಿವೇಕವನ್ನು ಉಳಿಸಿಕೊಳ್ಳಲು ಇದು ನೆರವಾಗುತ್ತದೆ. ಜೊತೆಗೆ ಕ್ಯಾನ್ಸರ್, ಹೃದ್ರೋಗ, ಮಧುಮೇಹ, ರೋಗ ನಿರೋಧಕ ಶಕ್ತಿಯಲ್ಲಿನ ನ್ಯೂನತೆಗಳನ್ನು ಹಾಗು ಇತ್ಯಾದಿಗಳನ್ನು ಇದು ಸರಿಪಡಿಸುತ್ತದೆ.

7. ಹಣೆಗೆ ಸಿಂಧೂರ ಅಥವಾ ಕುಂಕುಮ ಹಚ್ಚುವುದು:

cul8

ಮದುವೆಯಾದ ಹೆಂಗಸರು ಹಣೆಯಲ್ಲಿ ಧರಿಸುವ ಸಿಂಧೂರವು ತನ್ನದೇ ಆದ ಪ್ರಾಮುಖ್ಯತೆಯನ್ನು ಹೊಂದಿರುತ್ತದೆ. ಏಕೆಂದರೆ ಸಿಂಧೂರವನ್ನು ಅರಿಶಿಣ-ಸುಣ್ಣ ಮತ್ತು ಪಾದರಸದ ಲೋಹಗಳನ್ನು ಸೇರಿಸಿ ಮಾಡಿರುತ್ತಾರೆ. ಪಾದರಸವು ಸ್ವಾಭಾವಿಕವಾಗಿ ರಕ್ತದ ಒತ್ತಡವನ್ನು ನಿಯಂತ್ರಿಸುವುದರ ಜೊತೆಗೆ ಲೈಂಗಿಕಾಸಕ್ತಿಯನ್ನು ಸಹ ಕೆರಳಿಸುತ್ತದೆ. ಇದರಿಂದಾಗಿಯೇ ವಿಧವೆಯರು ಸಿಂಧೂರವನ್ನು ಧರಿಸಲು ಸಂಪ್ರದಾಯ ನಿಷೇಧ ಹೇರಿರುವುದು.ಸಿಂಧೂರವನ್ನು ಹಚ್ಚಿಕೊಳ್ಳುವಾಗ ಪಿಟ್ಯುಟರಿ ಗ್ರಂಥಿಗಳವರೆಗೆ ಹಚ್ಚಿಕೊಂಡರೆ ಒಳ್ಳೆಯದು. ಏಕೆಂದರೆ ಈ ಗ್ರಂಥಿಗಳಲ್ಲಿಯೇ ನಮ್ಮ ಭಾವನೆಗಳೆಲ್ಲವು ಕ್ರೋಢೀಕರಣಗೊಳ್ಳುವುದು. ಪಾದರಸವು ಒತ್ತಡ ಮತ್ತು ಆಯಾಸವನ್ನು ಹೊಡೆದೋಡಿಸುವ ಸಾಮಥ್ರ್ಯವನ್ನು ತನ್ನಲ್ಲಿ ಹೊಂದಿದೆ.

8. ನಾವೇಕೆ ಅರಳಿ ಮರವನ್ನು ಪೂಜಿಸುತ್ತೇವೆ:

05-1438756417-peopletree

ಅರಳಿ ಮರ” ಅಥವಾ “ಅಶ್ವತ್ಥ ವೃಕ್ಷ” ಎಂದು ಕರೆಯಲ್ಪಡುವ ಮರವನ್ನು ನಾವು ಸಾಮಾನ್ಯವಾಗಿ ಎಲ್ಲಾ ಊರುಗಳ ನಾಗರ ಕಟ್ಟೆ, ಅಶ್ವತ್ಥ ಕಟ್ಟೆ, ದೇವಾಲಯಗಳ ಬಳಿಯಲ್ಲಿ ಕಾಣುತ್ತೇವೆ. ನಿಜ ಹೇಳಬೇಕೆಂದರೆ ಇದು ಸಾಮಾನ್ಯ ಮನುಷ್ಯರಿಗೆ ನೆರಳನ್ನು ಬಿಟ್ಟರೆ ಬೇರೇನು ನೀಡುವುದಿಲ್ಲ. ಇದರಲ್ಲಿ ರುಚಿಕರವಾದ ಹಣ್ಣು ನೀಡುವುದಿಲ್ಲ. ಆದರೂ ಒಬ್ಬ ಸಾಮಾನ್ಯ ಹಳ್ಳಿಯವರು ಅಥವಾ ಜನರು ಸಹ ಇದನ್ನು ಬೆಳೆಸಿ, ಪೋಷಿಸಿ, ಇದರ ರಕ್ಷಣೆಗೆ ನಿಂತಿರುತ್ತಾರೆ ಎಂದರೆ ಅಂತಹದು ಏನಿದೆ ಈ ಮರದಲ್ಲಿ? ಹೌದು, ಇದೆ ಅದನ್ನೆ ನಮ್ಮ ಪೂರ್ವಿಕರು ಕಂಡು ಹಿಡಿದಿದ್ದು, ಈ ಮರವು ರಾತ್ರಿ ಸಮಯದಲ್ಲಿ ಸಹ ಆಮ್ಲಜನಕವನ್ನು ಬಿಡುಗಡೆ ಮಾಡುವ ಗುಣವನ್ನು ಹೊಂದಿದೆ. ಇಂತಹ ಮರವು ಮನುಕುಲಕ್ಕೆ ಅತ್ಯಾವಶ್ಯಕ ಎಂದು ಪರಿಗಣಿಸಿಯೇ, ಅಶ್ವತ್ಥ ವೃಕ್ಷಕ್ಕೆ ಇದಕ್ಕೆ ತ್ರಿಮೂರ್ತಿಗಳ ಆವಾಸ ಸ್ಥಾನವೆಂದು ಕರೆದು ಇದನ್ನು ಪೂಜಿಸಲು ತಿಳಿಸಿದ್ದಾರೆ.

9. ಕೈಗಳಿಗೆ ಮೆಹಂದಿ/ಹೆನ್ನಾವನ್ನು ಹಚ್ಚಿಕೊಳ್ಳುವುದು:

download (1)

ಕೈಗಳಿಗೆ ಅಲಂಕಾರವನ್ನು ನೀಡುವುದರ ಜೊತೆಗೆ ಮೆಹಂದಿಯು ತನ್ನಲ್ಲಿರುವ ಔಷಧೀಯ ಗುಣಗಳಿಂದ ಖ್ಯಾತಿ ಪಡೆದಿದೆ. ಮದುವೆಯು ಅತ್ಯಂತ ಒತ್ತಡಕಾರಿಯಾಗಿರುವ ಸಂಗತಿ ಎಲ್ಲರಿಗು ತಿಳಿದ ವಿಚಾರವೇ. ಈ ಒತ್ತಡವು ತಲೆನೋವು ಮತ್ತು ಜ್ವರವನ್ನು ತರಬಹುದು. ಆದ್ದರಿಂದ ಮದುವೆ ದಿನ ಹತ್ತಿರ ಬಂದಾಗ ವಧುವಿಗೆ ಮೆಹಂದಿಯನ್ನು ಹಚ್ಚುತ್ತಾರೆ. ಇದರಿಂದ ವಧುವಿಗೆ ಒತ್ತಡವು ಕಡಿಮೆಯಾಗುತ್ತದೆ ಮತ್ತು ಆಕೆಯ ದೇಹಕ್ಕೆ ಇದು ತಂಪನ್ನು ನೀಡಿ, ನರಗಳು ಒತ್ತಡಕ್ಕೆ ಒಳಗಾಗುವುದನ್ನು ತಡೆಯುತ್ತದೆ. ಆದ್ದರಿಂದಲೇ ಮೆಹಂದಿಯನ್ನು ನರಗಳು ಕೊನೆಗೊಳ್ಳುವ ಭಾಗದಲ್ಲಿ ಅಂದರೆ, ಅಂಗೈ ಮತ್ತು ಅಂಗಾಲುಗಳಿಗೆ ಹಚ್ಚುತ್ತಾರೆ.

10. ನಮಸ್ಕಾರ ಮಾಡಲು ಎರಡು ಅಂಗೈಗಳನ್ನು ಜೋಡಿಸುವುದು:

05-1438755576-namaskar2

ಹಿಂದೂ ಸಂಪ್ರದಾಯದಲ್ಲಿ ಅತಿಥಿಗಳನ್ನು ಅಥವಾ ಹಿರಿಯರನ್ನು ಕಂಡಾಗ ಅವರನ್ನು ಸ್ವಾಗತಿಸಲು “ನಮಸ್ಕಾರ” ಮುದ್ರೆ ಎಂದರೆ ಎರಡು ಅಂಗೈಗಳನ್ನು ಜೋಡಿಸುವ ಕ್ರಿಯೆಯನ್ನು ಮಾಡಲಾಗುತ್ತದೆ. ಇನ್ನು ಇದರ ಹಿಂದಿನ ವೈಜ್ಞಾನಿಕ ಸತ್ಯಾಂಶವನ್ನು ನೋಡುವುದಾದರೆ, ನಮಗೆ ತಿಳಿದು ಬರುವುದು ಇಷ್ಟು. ಎರಡು ಕೈಗಳ ಅಂಗೈಗಳನ್ನು ಪರಸ್ಪರ ಜೋಡಿಸುವುದರಿಂದ ಹತ್ತು ಬೆರಳುಗಳು ಪರಸ್ಪರ ಕೂಡುತ್ತವೆ. ಆಗ ಕಣ್ಣು, ಕಿವಿ ಮತ್ತು ಮನಸ್ಸಿನ ಒತ್ತಡ ಕೇಂದ್ರಗಳು ಒಂದನ್ನೊಂದು ತಾಕುತ್ತವೆ ಇದರಿಂದ ನಮಗೆ ಪರಿಚಯವಾಗುವ ವ್ಯಕ್ತಿಯ ಹೆಸರನ್ನು ದೀರ್ಘಕಾಲ ನಾವು ನೆನಪಿನಲ್ಲಿ ಇಟ್ಟುಕೊಳ್ಳಲು ಸಾಧ್ಯವಾಗುತ್ತದೆ. ಇದರ ಜೊತೆಗೆ ನಾವು ದೈಹಿಕವಾಗಿ ಆ ವ್ಯಕ್ತಿಯನ್ನು ಸ್ಪರ್ಶಿಸಲು ಹೋಗದ ಕಾರಣ, ಯಾವುದೇ ಕೀಟಾಣುಗಳು ಸಹ ನಮ್ಮ ಸಂಪರ್ಕಕ್ಕೆ ಬರುವುದಿಲ್ಲ.

ಪ್ರಕಾಶ್.ಕೆ.ನಾಡಿಗ್
ಶಿವಮೊಗ್ಗ

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

2 Comments
Hemavathi says:

ನಮ್ಮ ಸಂಸ್ಕೃತಿ ನಿಜವಾಗಲೂ ಶ್ರೀಮಂತ.. ಹಿಂದೂಗಳಾಗಿರುವುದಕ್ಕೆ ನಿಜಕ್ಕೂ ನಮಗೆ ಹೆಮ್ಮೆ ಅನಿಸುತ್ತಿದೆ…ನಮ್ಮ ಸಂಸ್ಕೃತಿ ನಿಜವಾಗಲೂ ಶ್ರೀಮಂತ.. ಹಿಂದೂಗಳಾಗಿರುವುದಕ್ಕೆ ನಿಜಕ್ಕೂ ನಮಗೆ ಹೆಮ್ಮೆ ಅನಿಸುತ್ತಿದೆ…

To Top