fbpx
News

ಇದೀಗ ಬಂದ ಸುದ್ದಿ ಬೆಂಗಳೂರು ನಗರದಾದ್ಯಂತ ನಿಷೇಧಾಜ್ಞೆ ಜಾರಿ

ಬೆಂಗಳೂರು: ಕಾವೇರಿ ನೀರು ಹಂಚಿಕೆ ಮತ್ತು ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ನಡೆದ ದೌರ್ಜನ್ಯ ಖಂಡಿಸಿ ರಾಜ್ಯದಲ್ಲಿ ವ್ಯಾಪಕ ಪ್ರತಿಭಟನೆ ನಡೆದು ಬರುತ್ತಿದೆ. ಬೆಂಗಳೂರು ನಗರದಲ್ಲಿ ಪ್ರತಿಭಟನೆಗಳು ಕಾವೇರಿದ್ದು ನಗರದಾದ್ಯಂತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

14291650_1742052366049584_7332612675081086659_n

ಬೆಂಗಳೂರಿನ ಕೆಲವು ಸೂಕ್ಷ್ಮ ಪ್ರದೇಶಗಳಲ್ಲಿ ೧೪೪ ಸೆಕ್ಷನ್ ಜಾರಿ ಮಾಡಿ ಬೆಂಗಳೂರು ನಗರ ಪೊಲೀಸ್ ಆಯಕ್ತ ಎನ್. ಎಸ್. ಮೆಘರಿಕ್ ಆದೇಶ ಹೊರಡಿಸಿದ್ದಾರೆ.

ಅದೇ ವೇಳೆ ನಗರದ ಕೆಲವು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ನಗರದಲ್ಲಿ ಪ್ರತಿಭಟನೆ ತೀವ್ರವಾಗುತ್ತಿದ್ದಂತೆ ಮುಂಜಾಗ್ರತಾ ದೃಷ್ಟಿಯಿಂದ ನಮ್ಮ ಮೆಟ್ರೋ ರೈಲು ಸಂಚಾರ ಸ್ಥಗಿತಗೊಳಿಸಲಾಗಿದೆ, ವ್ಯಾಪಾರಿಗಳು ಸ್ವಯಂ ಪ್ರೇರಿತರಾಗಿ ಅಂಗಡಿಗಳನ್ನು ಮುಚ್ಚಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top