fbpx
Karnataka

ವಿವಿಧ ಕನ್ನಡಪರ ಸಂಘಟನೆಗಳಿಂದ ಇಂದು ಹೊಸೂರು-ಕರ್ನಾಟಕ ಗಡಿ ಬಂದ್..

ಬೆಂಗಳೂರು: ಕಾವೇರಿ ಸಂಬಂಧ ತಮಿಳುನಾಡು ಸರ್ಕಾರದ ಧೋರಣೆಯನ್ನು ಖಂಡಿಸಿ ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಗಡಿ ಬಂದ್ಮಾಡಲಿದ್ದಾರೆ ಎಂದು ತಿಳಿಸಿದರು.

ಕನ್ನಡಪರ ಒಕ್ಕೂಟಗಳು  ಬೆಳಿಗ್ಗೆ 11 ಗಂಟೆಗೆ ಅತ್ತಿಬೆಲೆಯಿಂದ ಬಾರಿ ಮೆರವಣಿಗೆಯಲ್ಲಿ ತೆರಳಿ ಗಡಿ ಬಂದ್ ಮಾಡಿದ್ದಾರೆ. ತಮಿಳುನಾಡಿಗೆ ಬಿಟ್ಟಿರುವ ನೀರನ್ನ ಕೂಡಲೆ ನಿಲ್ಲಿಸಬೇಕು, ಪ್ರಧಾನಿ ಮಧ್ಯೆ ಪ್ರವೇಶಿಸಬೇಕು, ರಾಜ್ಯ ಲೋಕಸಭಾ ಸದಸ್ಯರು ಸಕ್ರಿಯರಾಗುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಲು ಕನ್ನಡಪರ ಸಂಘಟನೆಗಳ ನಿರ್ಧಾರ ಕೈ ಗೊಂಡಿವೆ ಎಂದು ವಾಟಳ್ ನಾಗರಾಜ್ ಮಾದ್ಯಮಗಳಿಗೆ ತಿಳಿಸಿದರು.

ತಮಿಳುನಾಡಿಗೆ ಕಾವೇರಿ ನದಿ ನೀರು ಹಸಿರುವುದನ್ನು ನಿಲ್ಲಿಸುವಂತೆ ಆಗ್ರಹಿಸಿ ಸೆ.19ರಂದು ಹೊಸೂರು ರಸ್ತೆ-ಕರ್ನಾಟಕ ಗಡಿ ಬಂದ್‌ ಮತ್ತು ಸೆ. 20ರಂದು ಚಾಮರಾಜನಗರ ಗಡಿ ಬಂದ್‌ ಮಾಡುವುದಾಗಿ ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್‌ ನಾಗರಾಜ್‌ ಹೇಳಿದ್ದಾರೆ.

ಮಾಧ್ಯಮದವರೊಂಗಿಗೆ ಮಾತನಾಡಿದ ಅವರು, ತಮಿಳುನಾಡಿಗೆ ಕಾವೇರಿ ನೀರು ಹರಿಯುತ್ತಿದ್ದರೂ ವಿನಾ ಕಾರಣ ತಮಿಳುನಾಡು ಬಂದ್‌ ಮಾಡಲಾಗಿದೆ. ಅಲ್ಲಿನ ಮುಖ್ಯಮಂತ್ರಿ ಜಯಲಲಿತಾ ಅವರು ನೀರಿಗಿಂತ ಹೆಚ್ಚಾಗಿ ರಾಜಕೀಯ ಹೋರಾಟ ಮಾಡುತ್ತಿದ್ದಾರೆ. ಇದನ್ನು ಖಂಡಿಸಿ ಎರಡು ದಿನ ಗಡಿ ಬಂದ್‌ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದರು.

ರಾಜಕೀಯ ಪಕ್ಷಗಳು ಮತ್ತು ರಾಜ್ಯದ ಸಂಸದರ ವಿರುದ್ಧ ಕಿಡಿ ಕಾರಿದ ಅವರು, ಬಿಜೆಪಿ, ಕಾಂಗ್ರೆಸ್‌,ಜೆಡಿಎಸ್‌ ಸಂಸದರಿಗೆ ರೈತರ ಸಮಸ್ಯೆ ಬೇಕಿಲ್ಲ. ಕುಡಿಯುವ ನೀರಿಗೆ ಮುಂದಿನ ದಿನಗಳಲ್ಲಿ ಆಗುವ ತೊಂದರೆಯ ಅರಿವಿಲ್ಲ. ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಮಧ್ಯಸ್ಥಿಕೆ ವಹಿಸುವಂತೆ ಪ್ರಧಾನಿಗೆ ಮನವಿ ಮಾಡಿದರೆ ರಾಜ್ಯದ ಬಿಜೆಪಿ ಸಂಸದರು, ಪ್ರಧಾನಿ ಏಕೆ ಮಧ್ಯಪ್ರವೇಶ ಮಾಡಬೇಕು ಎಂದು ಪ್ರಶ್ನಿಸುವಂತ ಕೆಟ್ಟ ರಾಜಕೀಯ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೂಡಲೇ ರಾಜ್ಯದ ಸಂಸದರು, ಕೇಂದ್ರ ಸಚಿವರು ಪ್ರಧಾನಿಯವರ ಮನವೊಲಿಸಿ, ಮಧ್ಯಸ್ಥಿಕೆ ವಹಿಸಲು ಕರೆತರಬೇಕು. ಈ ವಿಚಾರದಲ್ಲಿ ಪಕ್ಷಾತೀತವಾಗಿ ಎಲ್ಲರೂ ಒಗ್ಗಟ್ಟು ಪ್ರದರ್ಶಿಸಬೇಕು. ಕಾವೇರಿ ಜತೆಗೆ ಮಹದಾಯಿ ವಿವಾದ ಇತ್ಯರ್ಥಪಡಿಸಬೇಕು. ಇಲ್ಲದಿದ್ದರೆ ಎಲ್ಲ ಸಂಸದರ ಮನೆ ಮುಂದೆಯೂ ಕನ್ನಡ ಪರ ಸಂಘಟನೆಗಳು ತೀವ್ರ ಪ್ರತಿಭಟನೆ ನಡೆಸಲಿವೆ ಎಂದು ಎಚ್ಚರಿಸಿದರು. ಪತ್ರಿಕಾಗೋಷ್ಠಿಯಲ್ಲಿ ಕರವೇ ರಾಜ್ಯಾಧ್ಯಕ್ಷ ಪ್ರವೀಣ್‌ಶೆಟ್ಟಿ, ಕನ್ನಡ ಪರ ಸಂಘಟನೆಗಳ ಮುಖಂಡರಾದ ಕೆ.ಆರ್‌.ಕುಮಾರ್‌.ಶಿವರಾಮೇಗೌಡ, ಗಿರೀಶ್‌ಗೌಡ ಮತ್ತಿತರರು ಇದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top