fbpx
Karnataka

ಜಾರ್ಜ್ ಮತ್ತೆ ಸಂಪುಟಕ್ಕೆ ಸೇರ್ಪಡೆಗೆ ಹೈಕಮಾಂಡ್ ಒಪ್ಪಿಗೆ ನೀಡಿದೆ

ಬೆಂಗಳೂರು: ಕಾವೇರಿ ವಿವಾದ ಕುರಿತು ತಮಿಳುನಾಡಿಗೆ ನೀರು ಬಿಡುಗಡೆ ಸಂಬಂಧ ಸುಪ್ರೀಂ ಕೋರ್ಟ್ ಆದೇಶ, ಸರ್ವಪಕ್ಷ ಸಭೆಯ ನಿರ್ಧಾರ ಕಾನೂನು ತಜ್ಞರ ಸಲಹೆ ಕುರಿತು ವಿಶೇಷ ಅಧಿವೇಶನ ಕರೆದಿರುವ ಬಗ್ಗೆಯು ಅವರಿಗೆ ಮಾಹಿತಿ ನೀಡಿದರು.

ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪವನ್ನು ಎದುರಿಸಿದ್ದ ಕೆ.ಜೆ ಜಾರ್ಜ್ ಅವರಿಗೆ ಸಿಐಡಿ ಕ್ಲೀನ್ ಚೀಟ್ ನೀಡಿದ್ದು ಅವರನ್ನು ಮತ್ತೆ ಸಂಪುಟಕ್ಕೆ ಸೇರಿಸಿಕೊಳ್ಳಲು ಹೈಕಮಾಂಡ್ ಸಮ್ಮತಿ ಸೂಚಿಸಿದೆ.

ಕಾವೇರಿ ವಿವಾದ ಕುರಿತು ಕೇಂದ್ರ ಸಚಿವರೊಂದಿಗೆ ಚರ್ಚೆಗೆ ದೆಹಲಿಗೆ ತೆರಳಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಹೈಕಮಾಂಡ್ ಜತೆಯೂ ಚರ್ಚಿಸಿ ಕೆ.ಜೆ.ಜಾರ್ಜ್ ಸಂಪುಟಕ್ಕೆ ಮರು ಸೇರ್ಪಡೆ ಬಗ್ಗೆ ಒಪ್ಪಿಗೆ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ದೆಹಲಿಯಲ್ಲಿ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರನ್ನು ಭೇಟಿ ಮಾಡಿ, ತಮಿಳುನಾಡಿಗೆ ನೀರು ಬಿಡುಗಡೆ ಸಂಬಂಧ ಸುಪ್ರೀಂ ಕೋರ್ಟ್ ಆದೇಶ, ಸರ್ವಪಕ್ಷ ಸಭೆಯ ನಿರ್ಧಾರ ಕಾನೂನು ತಜ್ಞರ ಸಲಹೆ ಕುರಿತು ವಿಶೇಷ ಅಧಿವೇಶನ ಕರೆದಿರುವ ಬಗ್ಗೆಯು ಅವರಿಗೆ ಮಾಹಿತಿ ನೀಡಿದರು. ಆನಂತರ ಜಾರ್ಜ್ ಸೇರ್ಪಡೆ ಕುರಿತು ಚರ್ಚಿಸಿದರು ಎನ್ನಲಾಗಿದೆ.

ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಜಾರ್ಜ್ ಹೆಸರು ಬಲವಾಗಿ ಕೇಳಿಬಂದಿತ್ತು. ಅವರು ರಾಜಿನಾಮೆ ನೀಡಬೇಕೆಂಬ ಒತ್ತಡ ಕೂಡ ಬಂದಿತ್ತು. ಹಾಗಾಗಿ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು.

ಸಿಐಡಿ ಪ್ರಕರಣದ ತನಿಖೆ ನಡೆಸಿ ಜಾರ್ಜ್ ಅವರಿಗೆ ಕ್ಲೀನ್ ಚೀಟ್ ನೀಡಿದೆ. ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ಹೈ ಕಮಾಂಡ್ ಸೋನಿಯಾ ಗಾಂಧಿ, ದಿಗ್ವಿಜಯ್ ಸಿಂಗ್ ಸಮ್ಮತಿ ಸೂಚಿಸಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top