fbpx
Breaking News

ಬೆಂಗಳೂರು ನಗರದಲ್ಲಿ ಸೆಕ್ಷನ್ 144ರ ಅಡಿ ನಿಷೇಧಾಜ್ಞೆ ಜಾರಿ

ಮಂಗಳವಾರ ಮಧ್ಯಾಹ್ನ 2ಕ್ಕೆ ಸುಪ್ರೀಂ ಕೋರ್ಟ್ ಕಾವೇರಿ ವಿಚಾರಣೆಯನ್ನು ಕೈಗೆತ್ತಿಕೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ಕಾವೇರಿ ಕೊಳ್ಳದ ಜಿಲ್ಲೆಗಳಲ್ಲಿ 144ನೇ ಸೆಕ್ಷನ್ ನಿಷೇಧಾಜ್ಞೆ ಹೇರಲಾಗಿದೆ. ಇದರಿಂದ ಸಾಮಾನ್ಯ ಜೀವನಕ್ಕೆ ಏನೂ ತೊಂದರೆ ಇಲ್ಲ. ಎಲ್ಲ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೆಪ್ಟೆಂಬರ್ 27ರ ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12ರ ವರೆಗೆ ಬೆಂಗಳೂರು ನಗರದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಬೆಂಗಳೂರು ಕಮಿಷನರ್ ಎನ್.ಮೇಘರಿಕ್, ಸುಪ್ರೀಂ ಕೋರ್ಟ್ ವಿಚಾರಣೆ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ. ಶಾಂತಿ-ಸುವ್ಯವಸ್ಥೆಗೆ ಭಂಗ ತರಲು ಯತ್ನಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

 

14513687_10154180057888025_1353243868_o 14489772_10154180057883025_1970824760_o

 

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top