fbpx
Food

ರೇಷನ್ ಗಾಗಿ ಇನ್ನು ಪೋಸ್ಟ್ ಆಫೀಸ್ ಮುಂದೆನೂ ನಿಲ್ಲಬಹುದು !!

ಪವಿತ್ರ ಗಂಗಾ ಜಲವನ್ನು ವಿತರಿಸಿ ಯಶಸ್ಸು ದೊರೆತಿದ್ದ ರಿಂದ ಮತ್ತೊಂದು ದಿಟ್ಟ ಹೆಜ್ಜೆ ಇಟ್ಟಿರುವ ಅಂಚೆ ಇಲಾಖೆ ಸಬ್ಸಿಡಿ ದರದಲ್ಲಿ ಬೇಳೆ ಕಾಳು ಗಳನ್ನು ಗ್ರಾಹಕರಿಗೆ ವಿತರಿಸಲಿಸಲು ಯೋಜನೆ ರೂಪಿಸಿದೆ.

ಈ ವಿನೂತನ ಯೋಜನೆಗೆ ಕೇಂದ್ರ ಸರ್ಕಾರ ಕೆಲವೇ ವಾರಗಳಲ್ಲಿ ಚಾಲನೆ ನೀಡಲಿದೆ. ಕೇಂದ್ರ ಸರ್ಕಾರದ ಗೋದಾಮುಗಳಲ್ಲಿ ಸಂಗ್ರಹಿಸಿಡಲಾಗಿದ್ದ ಬೇಳೆ ಕಾಳು ಗಳ ತಮ್ಮ ದಾಸ್ತಾನನ್ನು ಕೊಂಡೊಯ್ಯುವ ವಿಚಾರದಲ್ಲಿ ರಾಜ್ಯ ಸರ್ಕಾರಗಳು ಹೆಚ್ಚಿನ ಆಸಕ್ತಿ ತೋರದ ಕಾರಣ ಕೇಂದ್ರ ಸರ್ಕಾರ ಅಂಚೆ ಕಚೇರಿಗಳ ಮೂಲಕ ಬೇಳೆ ಕಾಳುಗಳನ್ನು ವಿತರಿಸಲು ಯೋಜನೆ ಸಿದ್ಧಪಡಿಸಿದೆ ಎಂದು ಹೇಳಲಾಗಿದೆ.

ಈ ಕುರಿತು ಈಗಾಗಲೇ ನಾವು ಅಂಚೆ ಕಚೇರಿ ಜೊತೆ ಮಾತುಕತೆ ನಡೆಸಿದ್ದೇವೆ. ಯೋಜನೆಯ ಆರಂಭಿಕ ಕ್ರಮವಾಗಿ ಕೆಲವು ಅಂಚೆ ಕಚೇರಿಗಳಲ್ಲಿ ಸಬ್ಸಿಡಿ ದರದಲ್ಲಿ ಕಡ್ಲೆಕಾಳು (ಕಾಬೂಲ್) ಪೂರೈಸಲು ಚಿಂತನೆ ನಡೆದಿದೆ ಎಂದು ಗ್ರಾಹಕರ ವ್ಯವಹಾರಗಳ ಇಲಾಖೆ ಕಾರ್ಯ ದರ್ಶಿ ಹೇಮ್‌ಪಾಂಡೆ ಹೇಳಿದ್ದಾರೆ.

ಅಗತ್ಯ ವಸ್ತುಗಳ ದಾಸ್ತಾನು ಮತ್ತು ದರಗಳ ಕುರಿತು ಅಂತರ ಸಚಿವಾಲಯ ಮಟ್ಟದ ಸಮಿತಿ ಶುಕ್ರವಾರ ಸಭೆಯಲ್ಲಿ ಚರ್ಚಿಸಿ ನಿರ್ಧರಿಸಲಾಗಿದೆ ಎಂದು ಗ್ರಾಹಕರ ವ್ಯವಹಾರಗಳ ಸಚಿವಾಲಯ ತಿಳಿಸಿದೆ. ರಾಜ್ಯಗಳಲ್ಲಿ ನ್ಯಾಯಬೆಲೆ ಅಂಗಡಿಗಳು ಇಲ್ಲದ ಕಡೆ ಬೇಳೆ ಕಾಳುಗಳ ವಿತರಣೆಗೆ ಅಂಚೆ ಜಾಲವನ್ನು ಬಳಸಿಕೊಳ್ಳಲು ಸರ್ಕಾರ ತೀರ್ಮಾನಿಸಿದೆ. ಅಂಚೆ ಕಚೇರಿಗಳಲ್ಲಿ ಬೇಳೆ ಕಾಳುಗಳ ಪೊಟ್ಟಣಗಳನ್ನು ದಾಸ್ತಾನು ಮಾಡುವ ಕುರಿತಂತೆ ಕೆಲವೇ ದಿನಗಳಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತೇವೆ ಎಂದು ಪಾಂಡೆ ಹೇಳಿದ್ದಾರೆ.

ಈಗಾಗಲೇ ಭಾರತೀಯ ರಾಷ್ಟ್ರೀಯ ಸಹಕಾರ ಗ್ರಾಹ ಕರ ಒಕ್ಕೂಟ (ಎನ್‌ಸಿಸಿಎಫ್) ದೆಹಲಿಯಲ್ಲಿ ಮೊಬೈಲ್ ವಾಹನಗಳ ಮೂಲಕ ಬೇಳೆ ಕಾಳುಗಳನ್ನು ಮಾರಾಟ ಮಾಡುತ್ತಿದೆ. ಇದೇ ಸಂಸ್ಥೆ ಮೂಲಕ ವಿನೂತನ ಯೋಜನೆಯನ್ನು ಜಾರಿಗೆ ತರಬಹುದೇ ಎಂಬುದನ್ನು ಪರಿಶೀಲಿಸಲಾಗುತ್ತದೆ ಎಂದು ಹೇಳಿದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top