fbpx
Karnataka

ಕೆಪಿಎಸ್ಸಿ ಅಭ್ಯರ್ಥಿಗಳ ನೇಮಕಾತಿ ರದ್ದು ಆದೇಶ ವಜಾ: ಕಾನೂನು ಹೋರಾಟಕ್ಕೆ ಜಯ

ಬೆಂಗಳೂರು: 2011ರ ಕೆಪಿಎಸ್ಸಿ ನೇಮಕಾತಿ ರದ್ದುಗೊಳಿಸಿ ಕರ್ನಾಟಕ ಸರ್ಕಾರ ನೀಡಿದ್ದ ಆದೇಶವನ್ನು ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ(ಕೆಎಟಿ) ರದ್ದುಗೊಳಿಸಿದೆ. 2014ನೇ ಸಾಲಿನಲ್ಲಿ ಕೆಪಿಎಸ್ ಸಿ ನೇಮಕಾತಿ ಆದೇಶವನ್ನು ವಜಾ ಮಾಡಿ ಕೆಎಟಿ ಬುಧವಾರ ತೀರ್ಪು ನೀಡಿ, 362 ಅಭ್ಯರ್ಥಿಗಳಿಗೆ ಕೆಲಸ ಕೊಡುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.

362 ಗೆಜೆಟೆಡ್ ಪ್ರೋಬೇಷನರಿ ಹುದ್ದೆಗಲ ಭರ್ತಿಗಾಗಿ 2011ರಲ್ಲಿ ಹೊರಡಿಸಲಾಗಿದ್ದ ಅಧಿಸೂಚನೆಯನ್ನು ರದ್ದುಗೊಳಿಸುವಂತೆ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಕೆಎಟಿ ( ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ) ವಜಾಗೊಳಿಸಿದೆ. ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ರಾಜ್ಯ ಸರ್ಕಾರ 2014ರ ಕೆಪಿಎಸ್ ಸಿ ಅಭ್ಯರ್ಥಿಗಳ ನೇಮಕಾತಿ ಆದೇಶವನ್ನು ರದ್ದುಗೊಳಿಸಿತ್ತು.

ರಾಜ್ಯ ಸರ್ಕಾರ ನೇಮಕಾತಿ ರದ್ದು ಆದೇಸ ವಜಾಗೊಳಿಸಿರುವ ಕೆಎಟಿ, 2 ತಿಂಗಳೊಳಗೆ 362 ಅಭ್ಯರ್ಥಿಗಳ ನೇಮಕಾತಿ ಬಗ್ಗೆ ಆದೇಶ ಹೊರಡಿಸುವಂತೆ ಹೇಳಿದೆ. ಈ ಮೂಲಕ ಫ್ರೀಡಂ ಪಾರ್ಕ್ ನಲ್ಲಿ ಹೋರಾಟ ನಡೆಸಿದ್ದ ಕೆಪಿಎಸ್ಸಿ ಅಭ್ಯರ್ಥಿಗಳ ಕಾನೂನು ಹೋರಾಟಕ್ಕೆ ಜಯ ಸಿಕ್ಕಂತಾಗಿದೆ.

2014ನೇ ಸಾಲಿನ ಕೆಪಿಎಸ್ ಸಿ ನೇಮಕಾತಿ ರದ್ದು ಆದೇಶವನ್ನು ಪ್ರಶ್ನಿಸಿ ಕೆಪಿಎಸ್ಸಿ ಅಭ್ಯರ್ಥಿಗಳು ಕೆಎಟಿ ಮೊರೆ ಹೋಗಿದ್ದರು.

ಸರ್ಕಾರದ ನಿರ್ಧಾರ ವಿರೋಧಿಸಿ ಒಂದು ತಿಂಗಳಿನಿಂದ ಫ್ರೀಡಂಪಾರ್ಕ್ನಲ್ಲಿ ಉಪವಾಸ ಸತ್ಯಾಗ್ರಹ ನಡೆಸಿದ್ದರು. ಸಂಧಾನದ ಮೂಲಕ ಸತ್ಯಾಗ್ರಹ ವಾಪಸ್ ಪಡೆದ ಅಭ್ಯರ್ಥಿಗಳು ಕಾನೂನು ಹೋರಾಟ ಮುಂದುವರೆಸಿ, ಜಯ ಗಳಿಸಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top