ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ಹಾಗೂ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಖಾಲಿ ಇರುವ ಸಹಾಯಕ, ಕಿರಿಯ ಎಂಜಿನಿಯರ್ ಮತ್ತು ಲೆಕ್ಕಾಧಿಕಾರಿ ಹುದ್ದೆಗಳ ನೇಮಕಕ್ಕೆ ಕಳೆದ ಸೆಪ್ಟೆಂಬರ್ನಲ್ಲಿ ಅಧಿಸೂಚನೆ ಹೊರಡಿಸಿ, ಅರ್ಜಿ ಆಹ್ವಾನಿಸಲಾಗಿತ್ತು. ಇದೀಗ ಈ ಹುದ್ದೆಗಳಿಗೆ ಮತ್ತೊಂದು ಬಾರಿ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಅವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಸಲು ಇನ್ನೂ ಎರಡು ದಿನ ಕಾಲಾವಕಾಶ ಇದೆ.
ಖಾಲಿ ಹುದ್ದೆಗಳು: 1,921
ಒಟ್ಟು 1921 ಹುದ್ದೆಗಳನ್ನು ಈ ನೇಮಕದ ಮೂಲಕ ಭರ್ತಿ ಮಾಡಲಾಗುತ್ತಿದೆ. ಈ ಹಿಂದಿನ ಅಧಿಸೂಚನೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದಾದರೂ ಒಂದು ಹುದ್ದೆಗೆ ಒಂದೇ ಕಂಪನಿಗೆ ಅರ್ಜಿ ಸಲ್ಲಿಸುವ ಅವಕಾಶವಿದೆ ಎಂದು ತಿಳಿಸಲಾಗಿತ್ತು. ಆದರೆ, ಕೆಲ ಅಭ್ಯರ್ಥಿಗಳು ಒಂದೇ ಹುದ್ದೆಗೆ ಒಂದೇ ಕಂಪನಿಯಲ್ಲಿ ಅಥವಾ ಒಂದಕ್ಕಿಂತ ಹೆಚ್ಚು ಕಂಪನಿಗಳಲ್ಲಿ ಒಂದಕ್ಕಿಂತ ಹೆಚ್ಚು ಅರ್ಜಿಗಳನ್ನು ಸಲ್ಲಿಸಿರುವುದರಿಂದ ಅಭ್ಯರ್ಥಿಗಳಿಗೆ ಸಮರ್ಪಕವಾಗಿ ಅರ್ಜಿ ಸಲ್ಲಿಸಲು ಮತ್ತೊಂದು ಅವಕಾಶ ನೀಡಲಾಗಿದೆ ಎಂದು ಕೆಪಿಟಿಸಿಎಲ್ ತಿಳಿಸಿದೆ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಇನ್ನೂ ಎರಡು ದಿನ ಕಾಲಾವಕಾಶ
ಹೊಸ ಅಧಿಸೂಚನೆಯ ಪ್ರಕಾರ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್, ಸಹಾಯಕ ಎಂಜಿನಿಯರ್ ಮತ್ತು ಸಹಾಯಕ ಲೆಕ್ಕಾಧಿಕಾರಿ ಹುದ್ದೆಗಳಿಗೆ ಅಕ್ಟೋಬರ್ 24ರೊಳಗೆ ಮತ್ತು ಕಿರಿಯ ಎಂಜಿನಿಯರ್, ಸಹಾಯಕ ಮತ್ತು ಕಿರಿಯ ಸಹಾಯಕ ಹುದ್ದೆಗಳಿಗೆ ಅಕ್ಟೋಬರ್ 26ರೊಳಗೆ ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ.
ಅರ್ಹತೆಗಳೇನಿರಬೇಕು?
ಸಹಾಯಕ ಎಂಜಿನಿಯರ್ ಮತ್ತು ಸಹಾಯಕ ಕಾರ್ಯನಿರ್ವಾಹಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದಾದರೂ ಅಂಗೀಕೃತ ವಿವಿಯಿಂದ ಬಿ.ಇ ಪದವಿ ಅಥವಾ ಎಎಂಐಇ (ಭಾರತ) ನಡೆಸುವ ಎಲೆಕ್ಟ್ರಿಕಲ್/ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ವಿಭಾಗದ ಪರೀಕ್ಷೆಯಲ್ಲಿ ಅರ್ಹತೆ ಪಡೆದಿರಬೇಕು. ಅಂತೆಯೇ ಸಿವಿಲ್ ವಿಭಾಗದಲ್ಲಿ ಸಹಾಯಕ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಸಿವಿಲ್ ವಿಭಾಗದಲ್ಲಿ ಬಿ.ಇ ಪದವಿ ಅಥವಾ ಎಎಂಐಇಯ ಎ ಮತ್ತು ಬಿ (ಸಿವಿಲ್) ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು. ಕಿರಿಯ ಎಂಜಿನಿಯರ್ಗಳ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಡಿಪ್ಲೊಮಾ (ಎಲೆಕ್ಟ್ರಿಕಲ್ ಎಂಜಿನಿಯರಿಂಗ್ ಆಫ್ ಎ ಪಾಲಿಟೆಕ್ನಿಕ್) ಪಡೆದರೆ ಸಾಕು. ಇನ್ನು ಸಹಾಯಕ ಲೆಕ್ಕಾಧಿಕಾರಿ ಹುದ್ದೆಗಳ ಆಕಾಂಕ್ಷಿಗಳು ಫೈನಾನ್ಸ್ ವಿಭಾಗದಲ್ಲಿ ಎಂ.ಕಾಂ / ಎಂ.ಬಿ.ಎ ಅಥವಾ ಐಸಿಡಬ್ಲ್ಯೂಎ/ಸಿ.ಎ. ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ 18ರಿಂದ 35 ವರ್ಷದೊಳಗಿರಬೇಕು.
ಸೂಚನೆ
* ಆನ್ಲೈನ್ನಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ
*ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ನೇಮಕ
*ರಾಜ್ಯದ 8ರಿಂದ 10 ಕಡೆ ಪರೀಕ್ಷಾ ಕೇಂದ್ರ ಇರಲಿದೆ.
* ಹೆಲ್ಪ್ ಲೈನ್ : 080-22211527/22392668
* ಮಾಹಿತಿಗೆ ವೆಬ್:
www.kptcl.com, www.bescom.org, www.hescom.in, www.cescmysore.org ಮತ್ತು www.gescom.in
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
