Awareness

ಪಟಾಕಿ ಹಚ್ಚುವ ಮುನ್ನ ಮುನ್ನೆಚ್ಚರಿಕೆಯ ಕ್ರಮಗಳು

 

ದೀಪದಿಂದ ದೀಪ ಹಚ್ಚಿ ಜಗತ್ತನ್ನು ಬೆಳಗಿಸುವ ಶಕ್ತಿ ಹಣತೆಗಿದೆ. ಬೇಕಾಬಿಟ್ಟಿ ಹಣ ವೆಚ್ಚಮಾಡಿ ಎಲ್ಲೆಂದರಲ್ಲಿ ಪಟಾಕಿ ಸಿಡಿಸಿ ಪರಿಸರ ಮಾಲಿನ್ಯ ಮಾಡಬಾರದೆಂಬ ಮನವನ್ನು ರೂಡಿಸಿಕೊಳ್ಳುತ್ತಿಲ್ಲ ಏಕೆ? ಅಜಾಗರೂಕತೆಯಿಂದ ಪಟಾಕಿ ಸಿಡಿಸಿ ಕಣ್ಣು ಕಳೆದುಕೊಂಡು ಆಸ್ಪತ್ರೆಯಲ್ಲಿ ಒದ್ದಾಡುವ ಪುಟ್ಟ ಮಕ್ಕಳನ್ನು ಕಂಡಾಗ ಪಟಾಕಿ ಬೇಡವೆಂದು ಅನಿಸದಿರದು. ಏನೇ ಆದರೂ ಹಿಂದಿನ ಸಂಭ್ರಮ ಇಂದಿನ ಮಕ್ಕಳಲ್ಲಿ ಕಾಣಲು ಸಾಧ್ಯವಿಲ್ಲ.

ಪ್ರಕಾರ ದೀಪಾವಳಿ ಸಂದರ್ಭದಲ್ಲಿ ಸಾವಿರಾರು ಕೋಟಿ ರೂಪಾಯಿಗಳ ಮೌಲ್ಯದ ಸಿಡಿಮದ್ದನ್ನು ಸಿಡಿಯಲಾಗುತ್ತದೆ. ದೀಪಾವಳಿ ಸಂಭ್ರಮ ಮತ್ತು ಸಂತಸದ ಪ್ರತೀಕವಾಗಿದ್ದರೂ, ಈ ಪಟಾಕಿ, ಸಿಡಿಮದ್ದು ಮತ್ತು ಬಾಣ ಬಿರುಸುಗಳಿಂದ ಆಗುವ ಅನಾಹುತ ಮತ್ತು ದುರಂತಗಳಿಗೆ ಏಣೆಯೇ ಇಲ್ಲ. ಅತಿಯಾದ ಸದ್ದು ಮಾಡುವ ಅಪಾಯಕಾರಿ ಪಟಾಕಿಗಳನ್ನು ಸರಕಾರ ನಿಷೇಧಿಸಿದೆ.ಈ ಸಂಬಂಧವಾಗಿ ಸ್ಪೋಟಕಗಳ ಕಾಯ್ದೆ ಮತ್ತು ನಿಯಮಗಳು ಎಂಬ ಕಾನೂನೇ ಇದ್ದರೂ ಜನರು ಮತ್ತು ವ್ಯಾಪಾರಿಗಳು ಈ ಕಾನೂನನ್ನು ಪರಿಪಾಲಿಸದಿರುವುದು ಬಹುದೊಡ್ಡ ದುರಂತವೇ ಸರಿ. ಸರಕಾರ ಕೂಡ ಈ ಕಾನೂನನ್ನು ಪರಿಣಾಮಕಾರಿಯಾಗಿ ಜಾರಿಮಾಡದಿರುವುದು ದುರದೃಷ್ಟಕರ ವಿಚಾರವಾಗಿದೆ.

ಯಾವತ್ತೂ ಮನೆಯ ಒಳಗೆ ಪಟಾಕಿ ಸಿಡಿಮದ್ದು ಸುಡಲೇಬಾರದು. ನಾಲ್ಕು ಗೋಡೆಗಳ ನಡುವೆ ಪಟಾಕಿಯ ಜೊತೆ ಸರಸ ಯಾವತ್ತೂ ಅಪಾಯಕಾರಿ. ಮನೆಯ ಹೊರಗಡೆ ಬಯಲು ಪ್ರದೇಶದಲ್ಲಿ ಪಟಾಕಿ ಸಿಡಿಸುವುದು ಉತ್ತಮ.

1)ಮಕ್ಕಳು ಪಟಾಕಿ ಸುಡುವಾಗ ಹಿರಿಯರು ಜೊತೆಗೆ ಇರಲೇಬೇಕು. ಯಾವತ್ತೂ ಮಕ್ಕಳ ಮೇಲೆ ಒಂದು ಕಣ್ಣು ಇರಬೇಕು ಮತ್ತು ವಿಶೇಷ ಮುತುವರ್ಜಿ ಮತ್ತು ಕಾಳಜಿ ಇರಿಸಬೇಕು, ಒಮ್ಮೆ ಸಿಡಿಯಲು ಯತ್ನಿಸಿದ ಸಿಡಿಯದೇ ಇದ್ದ ಪಟಾಕಿಯನ್ನು ಪುನಃ ಸಿಡಿಸುವ ಪ್ರಯತ್ನ ಮಾಡಲೇ ಬಾರದು. ಯಾವತ್ತೂ ಉತ್ತಮ ದರ್ಜೆಯ ಗುಣಪಟ್ಟದ ಪಟಾಕಿಯನ್ನೇ ಖರೀದಿಸಿ. ಖರ್ಚು ಹೆಚ್ಚಾದರೂ ಪರವಾಗಿಲ್ಲ. ಅಗ್ಗದ ಬೆಲೆಯ ಕಳಪೆ ಗುಣಮಟ್ಟದ ಸಿಡಿಮದ್ದು ಯಾವತ್ತೂ ಅಪಾಯಕಾರಿ. ಉಚಿತವಾಗಿ ಸಿಕ್ಕಿದ ಕಳಪೆ ದರ್ಜೆಯ ಪಟಾಕಿ ಉಪಯೋಗಿಸಬೇಡಿ.

2)ಮಕ್ಕಳು ಪಟಾಕಿ ಹಚ್ಚುವಾಗ ಪರಸ್ಪರ ಚೇಷ್ಟೆ, ತುಂಟಾಟ ಮತ್ತು ಮಕ್ಕಳಾಟಿಕೆಗೆ ಅವಕಾಶ ನೀಡಬೇಡಿ. ಒಂದು ಕ್ಷಣದ ಮರೆವು ಮತ್ತು ತುಂಟಾಟ ಇನ್ನೊಬಬ್ಬರ ಜೀವಕ್ಕೆ ಅಂಧಕಾರ ತರಲೂ ಬಹುದು. ಮಕ್ಕಳಿಗೆ ಮಕ್ಕಳಿಗಾಗಿ ಮಾಡಿದ ಸಿಡಿಮದ್ದನ್ನು ಮತ್ತು ಪಟಾಕಿಗಳನ್ನು ನೀಡಬೇಕು. ಸುರುಸುರು ಕಡ್ಡಿ, ಹೂಕುಂಡ, ಭೂಚಕ್ರ, ಗುಬ್ಬಿ ಪಟಾಕಿ ಇತ್ಯಾದಿ ಕಡಿಮೆ ಸದ್ದಿನ ಮತ್ತು ಕಡಿಮೆ ಅಪಾಯವಿರುವ ಪಟಾಕಿಗಳನ್ನು ನೀಡಬೇಕು. ಅಪಾಯಕಾರಿ ಸಿಡಿಮದ್ದನ್ನು ಮಕ್ಕಳಿಂದ ದೂರವಿಡಬೇಕು.

3)ಪಟಾಕಿ ಸಿಡಿಸುವುದು ಧೈಯದ ಸಂಕೇತವಲ್ಲ. ಸಿಡಿಯುವ ಪಟಾಕಿಗಳನ್ನು ಕೈಯಲ್ಲಿ ಹೊತ್ತಿಸಬಾರದು. ಮಕ್ಕಳು ಇದನ್ನು ಧೈರ್ಯದ ಸಂಕೇತವೆಂದು ಭಾವಿಸುತ್ತಾರೆ ಮತ್ತು ಇತರ ಮಕ್ಕಳ ಮುಂದೆ ಮೊಂಡು ಧೈರ್ಯ ತೋರಿಸಲು ಹೋಗಿ ಅಪಾಯವನ್ನು ಆಹ್ವಾನಿಸುತ್ತಾರೆ. ಇದರ ಅಪಾಯ ಮತ್ತು ತೊಂದೆರೆಗಳ ಬಗ್ಗೆ ಹೆತ್ತವರು ತಿಳಿ ಹೇಳಬೇಕು.

4) ಹೂಕುಂಡ, ಭೂಚಕ್ರ ಮುಂತಾದವುಗಳನ್ನು ಕೆಳಗಿ ಬಾಗಿ ಹಚ್ಚುವಾಗ ವಿಶೇಷ ಗಮನವಿರಲಿ. ಸಿಡಿಯದ ಪಟಾಕಿಗಳನ್ನು ಕೈಯಿಂದ ಮುಟ್ಟಲು ಹೋದಾಗ ಹಠಾತ್ ಸಿಡಿಯಲೂ ಬಹುದು. ಸಿಡಿಯದ ಪಟಾಕಿಗಳನ್ನು ಪುನಃ ಬಳಸಲೇ ಬೇಡಿ. ಸುರು ಸುರು ಕಡ್ಡಿ ಹೊತ್ತಿಸುವಾಗ ಹೊರಹೊಮ್ಮುವ ಕಿಡಿಗಳ ಬಗ್ಗೆ ಗಮನವಿರಲಿ. ಬೇರೆ ಮಕ್ಕಳ ದೇಹದ ಮೇಲೆ ಮತ್ತು ಮೈ ಮೇಲೆ ಬೆಂಕಿಯ ಕಿಡಿ ಸಿಡಿದು ಬೀಳದಂತೆ ಎಚ್ಚರವಹಿಸಿ. ಮೈ ಮೇಲೆ ಬಟ್ಟೆ ಧರಿಸಿ, ಮೈ ಮುಚ್ಚಿಕೊಂಡು ಸಿಡಿಮದ್ದನ್ನು ಮತ್ತು ಪಟಾಕಿಗಳನ್ನು ಹಚ್ಚಬೇಕು. ಹತ್ತಿಯ ಅಥವಾ ಕಾಟನ್ ಬಟ್ಟೆ ಉತ್ತಮ. ನೈಲಾನ್ ಬಟ್ಟೆ ಬಳಸಬಾರದು.

5)ರಾಕೇಟ್ ಪಟಾಕಿ ಹಚ್ಚುವಾಗ ವಿಶೇಷ ಮುನ್ನೆಚ್ಚರಿಕೆ ವಹಿಸಬೇಕು. ಅವು ನೇರವಾಗಿ ಮೇಲ್ಮುಖವಾಗಿ ಹಾರುವಂತಿರಬೇಕು. ಕೈಯಲ್ಲಿ ಹಿಡಿದು ರಾಕೇಟ್‍ಗೆ ಬೆಂಕಿ ಹಚ್ಚುವುದು ಅತೀ ಅಪಾಯಕಾರಿ ಮತ್ತು ಮುರ್ಖತನದ ಪರಮಾವಧಿ.

ಪಟಾಕಿ ಹಚ್ಚುವ ಸಮಯದಲ್ಲಿ ಮಕ್ಕಳು ಜೇಬುಗಳಲ್ಲಿ ಮತ್ತು ಇನ್ನೊಂದು ಕೈಯಲ್ಲಿ ನಾಲ್ಕೈದು ಪಟಾಕಿ ಇಟ್ಟುಕೊಳ್ಳಬಾರದು. ಯಾವುದೇ ಪಟಾಕಿಯ ಕಿಡಿ ತಗಲಿದಲ್ಲಿ ಜೀವಕ್ಕೂ ಸಂಚಕಾರ ಬರಬಹುದು ಒಮ್ಮೆಗೆ ಒಂದೇ ಪಟಾಕಿ ಎಂಬ ನಿಯಮ ಕಡ್ಡಾಯವಾಗಿ ಪಾಲಿಸಸಬೇಕು.

6)ಮಕ್ಕಳು ಮತ್ತು ಹೆತ್ತವರು ಪಟಾಕಿ ಸುಡುವಾಗ ಚಪ್ಪಲಿ ಧರಿಸಲೇಬೇಕು. ಮಕ್ಕಳೂ ಅವಸರದಲ್ಲಿ ಬರಿಗಾಲಲ್ಲಿ ಓಡಾಡುವಾಗ ಭೂಚಕ್ರ, ಸುರುಸುರುಬತ್ತಿ ಮತ್ತು ಹೂಕುಂಡ ಮುಂತಾದವುಗಳು ಸುಟ್ಟು ಹೋದ ಬಳಿಕವೂ ಬಿಸಿಯಾಗಿರುತ್ತದೆ. ಬರಿಗಾಲಿಗೆ ಬೆಂಕಿ ತಗಲಿ ಸುಟ್ಟು ಗಾಯವಾಗಬಹುದು ಮಕ್ಕಳು ಬಳಸಿದ ಪಟಾಕಿಗಳನ್ನು ಒಂದು ಸುರಕ್ಷಿತ ಮೂಲೆಯಲ್ಲಿ ರಾಶಿ ಹಾಕುವುದು ಉತ್ತಮ. ಅದೇ ರೀತಿ ಪಟಾಕಿ ಹಚ್ಚುವ ಸಮಯದಲ್ಲಿ ಒಂದೆರಡು ಬಕೇಟ್ ನೀರನ್ನು ಇಟ್ಟುಕೊಳ್ಳುವುದು ಅತೀ ಅಗತ್ಯ. ಹಾಗೆಯೇ ಪಟಾಕಿ ಸುಡುವ ಸಮಯದಲ್ಲಿ ಯಾವುದೇ ಕ್ಷಣದಲ್ಲಿ ಅಪಾಯ ಸಂಭವಿಸಬಹುದು. ಆ ಕಾರಣದಿಂದ ಪ್ರಥಮ ಚಿಕಿತ್ಸೆ ಸಾಧನೆಗಳನ್ನು ಸಿದ್ಧವಾಗಿಟ್ಟುಕೊಳ್ಳಬೇಕು. ಯಾವುದೇ ರೀತಿಯ ನಿರ್ಲಕ್ಷ ಪ್ರಾಣಕ್ಕೆ ಸಂಚಕಾರ ತರಬಹುದು. ಸಾಕಷ್ಟು ಮುಂಜಾಗರಕತೆ ವಹಿಸಿದ್ದಲ್ಲಿ ದೊಡ್ಡ ಅನಾಹುತವನ್ನು ತಡೆಗಟ್ಟಬಹುದು. ಒಟ್ಟಿನಲ್ಲಿ ದೀಪಾವಳಿಯ ಸಂತಸ, ಸಂಭ್ರಮ ಮತ್ತು ಸುಡುಮದ್ದುಗಳ ಬರಾಟೆಯ ನಡುವೆ ಹೆತ್ತವರು, ಹಿರಿಯರು ತಮ್ಮ ಜವಾಬ್ದಾರಿ ಮತ್ತು ಹೊಣೆಗಾರಿಕೆಯನ್ನು ನಿಭಾಯಿಸಿದ್ದಲ್ಲಿ ಬೆಳಕಿನ ಹಬ್ಬ ದೀಪಾವಳಿ ಎಲ್ಲರ ಬದುಕಿಗೂ ಬೆಳಕಿನ ಸಿಂಚನ ನೀಡಬಹುದು. ಇಲ್ಲವಾದಲ್ಲಿ ಬೆಳಕಿನ ಹಬ್ಬ ಕೆಲವರ ಬಾಳಿಗೆ ಶಾಶ್ವತ ಅಂಧಕಾರವನ್ನು ತರಲೂಬಹುದು ಎಂಬ ಕಟು ಸತ್ಯದ ಅರಿವು ಎಲ್ಲರಿಗೂ ಇದ್ದಲ್ಲಿ ದೀಪಾವಳಿಯ ಆಚರಣೆ ಹೆಚ್ಚು ಮೌಲ್ಯಪೂರ್ಣವಾಗಬಹುದು.

ಸ್ಟ್ರಾಂಡರ್ಡ್‌ ಕಂಪೆನಿ ಬಳಸುವ ಗೊಂಬೆ, ಗಣೇಶ, ರಾಧಾಕೃಷ್ಣ ಚಿತ್ರ­ಗ­ಳನ್ನು ಬೇರೆ ಕಂಪೆನಿಗಳು ಬಳಸಿ­ಕೊಂಡು ಗಿಫ್ಟ್‌ ಬಾಕ್ಸ್‌ ಸಿದ್ದಪಡಿಸುತ್ತಿವೆ. ಶಿವಕಾ-­ಶಿ­ಯಿಂದ ಸ್ಫೋಟಕವನ್ನು ಕೆ.ಜಿ.ಗೆ ₨ 200, 300ಕ್ಕೆ ಕೊಟ್ಟು ತರಲಾಗು­ತ್ತಿದೆ. ಇವುಗಳಿಂದ ೨೦ ವಿಧದ ಪಟಾಕಿ­ಗಳಿರುವ ಗಿಫ್ಟ್‌ ಬಾಕ್ಸ್‌ ಸಿದ್ದಪಡಿಸಿ ₨ 40, 50ಕ್ಕೆ ಮಾರಾಟ ಮಾಡಲಾ­ಗುತ್ತಿದೆ. ಇದನ್ನು ಮಕ್ಕಳು ಬಳಸಿದಾಗ ಇನ್ನಿಲ್ಲದ ಅನಾಹುತಗಳು ಸಂಭವಿ­ಸುತ್ತವೆ ಎಂದರು. ಸ್ಟ್ಯಾಂಡರ್ಡ್‌ ಕಂಪೆನಿ ತಯಾರಿಸುವ ಪಟಾಕಿಗಳಲ್ಲಿ ಸ್ಥಳ, ಕಂಪೆನಿ ಹೆಸರು, ತೂಕ, ಎಚ್ಚರಿಕೆ ಸಂದೇಶ ನಮೂ­ದಾಗಿ­ರುತ್ತದೆ. ಇದನ್ನು ಜನರು ಗಮನಿಸಬೇಕು.

ಪರವಾನಗಿ ಅಗತ್ಯ: ಪಟಾಕಿ ಮಾರಾಟ ಮಾಡಲು ಜಿಲ್ಲಾಡಳಿತದಿಂದ ಕಡ್ಡಾಯ­ವಾಗಿ ಪರವಾನಗಿ ಪಡೆಯಬೇಕು. ಆದರೆ ನಕಲಿ ಕಂಪೆನಿಗಳು ಇದ್ಯಾವು­ದನ್ನೂ ಪಡೆಯದೇ ಸಣ್ಣ ಪುಟ್ಟ ಅಂಗಡಿ, ಅನಧಿಕೃತ ಮಳಿಗೆಗಳಲ್ಲಿ ಮಾರಾಟ ಮಾಡುತ್ತಿವೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top