ಒಟ್ಟು ಹುದ್ದೆ: 47
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಡಿಸೆಂಬರ್ 05, 2016
ಮಾಹಿತಿಗೆ ದೂ: 08226-223170.
ಇಮೇಲ್ ವಿಳಾಸ: deo.cnagar@gmail.com
ವೆಬ್ಸೈಟ್ ವಿಳಾಸ: www.chamarajanagar-va.kar.nic.in
ಚಾಮರಾಜನಗರ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಖಾಲಿ ಇರುವ ಗ್ರಾಮಲೆಕ್ಕಿಗರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಕಂದಾಯ ಇಲಾಖೆ ಉದ್ದೇಶಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಹುದ್ದೆಗಳ ವಿವರ: ಒಟ್ಟು 47 ಹುದ್ದೆಗಳಿದ್ದು, ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ.
ಶೈಕ್ಷಣಿಕ ಅರ್ಹತೆ: ಅರ್ಜಿ ಸಲ್ಲಿಸಲು ಕನಿಷ್ಠ ವಿದ್ಯಾರ್ಹತೆ ಪಿಯುಸಿ ಅಥವಾ 12ನೇ ತರಗತಿ(ಸಿಬಿಎಸ್ಇ).
ಆಯ್ಕೆ ಹೇಗೆ?
ಅಭ್ಯರ್ಥಿಯು ದ್ವಿತೀಯ ಪಿಯುಸಿ/ಸಿಬಿಎಸ್ಇ/ಐಸಿಎಸ್ಇ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಶೇಕಡವಾರು ಮೆರಿಟ್ ಆಧಾರದಲ್ಲಿ ಮೀಸಲಾತಿಗೆ ಅನುಗುಣವಾಗಿ ಆಯ್ಕೆ ಮಾಡಲಾಗುತ್ತದೆ.
ವಯೋಮಿತಿ:
ಸಾಮಾನ್ಯ ವರ್ಗದವರಿಗೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ ವಯೋಮಿತಿ 35 ವರ್ಷವಾಗಿದೆ. ಪ್ರವರ್ಗ 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ ಮತ್ತು ಪ.ಜಾ/ಪ.ಪಂ/ಪ್ರವರ್ಗ-1 ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 40 ವರ್ಷ ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ:
ಸಾಮಾನ್ಯ ವರ್ಗದವರಿಗೆ 200 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಪ.ಜಾ/ಪ.ಪಂ/ಪ್ರವರ್ಗ-1ಕ್ಕೆ 100 ರೂ. ನಿಗದಿಪಡಿಸಲಾಗಿದೆ. ಬ್ಯಾಂಕ್ ಶುಲ್ಕ 30 ರೂ. ನೀಡಬೇಕು. ಅಭ್ಯರ್ಥಿಗಳು ಅರ್ಜಿ ಮತ್ತು ಬ್ಯಾಂಕ್ ಶುಲ್ಕವನ್ನು ಚಲನ್ ಮೂಲಕ ಎಸ್ಬಿಎಂ ಬ್ಯಾಂಕ್ ಡಿಒಸಿ ಬ್ರಾಂಚ್, ಚಾಮರಾಜನಗರದ ಬ್ಯಾಂಕ್ ಖಾತೆ ಸಂಖ್ಯೆ 64050010864ಕ್ಕೆ ಜಮಾ ಮಾಡಬೇಕು. ಐಎಫ್ಎಸ್ಐ ಕೋಡ್. ಎಸ್ಬಿಎಂವೈ0040700. ಹೆಚ್ಚಿನ ಮಾಹಿತಿಗೆ ಚಾಮರಾಜನಗರ ಜಿಲ್ಲಾ ವೆಬ್ಸೈಟ್ಗೆ ಭೇಟಿ ನೀಡಿ.
* ಚಾಮರಾಜನಗರ ಜಿಲ್ಲೆಯಲ್ಲಿ ಇರುವ ಹುದ್ದೆಗಳನ್ನು ನೇರ ನೇಮಕದ ಮೂಲಕ ಭರ್ತಿ
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
