ದೇಶವನ್ನು ಅಭಿವೃದ್ಧಿ ಪತದಲ್ಲಿ ಮುನ್ನಡೆಸಲು ಮುಂದಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರು ಭ್ರಷ್ಟಾಚಾರ, ಕಪ್ಪುಹಣ, ನಕಲಿ ನೋಟುಗಳ ಚಲಾವಣೆ ತಡೆಗೆ ದಿಟ್ಟ ಹೆಜ್ಜೆಯನ್ನು ಇಟ್ಟಿದ್ದಾರೆ. 500-1000 ನೋಟುಗಳ ಬದಲಾವಣೆಗೆ 50 ದಿನಗಳ ಕಾಲಾವಕಾಶ ನೀಡಲಾಗಿದ್ದು ಅಷ್ಟರಲ್ಲಿ ನೋಟುಗಳನ್ನು ಬ್ಯಾಂಕ್ ಹಾಗೂ ಅಂಚೆ ಕಚೇರಿಗಳಲ್ಲಿ ಬದಲಾಯಿಸಿಕೊಳ್ಳಬಹುದಾಗಿದೆ.
ಯಾವ ಯಾವ ಜಾಗಗಳಲ್ಲಿ (ನ. 11ರ ಮಧ್ಯರಾತ್ರಿ ತನಕ) 500-1000 ನೋಟುಗಳನ್ನು ಸ್ವೀಕರಿಸಬಹುದು ಎಂದು ತಿಳಿಯೋಣವೇ:
- ಸರ್ಕಾರಿ ಹಾಸ್ಪಿಟಲ್
- ಪೆಟ್ರೋಲ್ ಬಂಕ್‍ಗಳು
- ರಿಟೇಲ್ ಔಟ್ ಲೆಟ್
- ಶವಗಾರಗಳು
- ಶವಸಂಸ್ಕಾರ ಕೇಂದ್ರ
ಹಲವು ಪೆಟ್ರೋಲ್ ಬಂಕ್‍ಗಳಲ್ಲಿ ಮತ್ತು ರಾಷ್ಟ್ರೀಯ ಹೆದ್ದಾರಿಗಳ ಅಕ್ಕಪಕ್ಕದಲ್ಲಿರುವ ಫ್ಲಾಜಾಗಳಲ್ಲಿ ಈ ನೋಟುಗಳನ್ನು ಸ್ವೀಕರಿಸುತ್ತಿಲ್ಲ ಎಂಬ ದೂರುಗಳು ಕೇಳಿಬಂದಿವೆ. ಈ ಬಗ್ಗೆ ಕೇಂದ್ರ ಸರ್ಕಾರ ಸೂಕ್ಷ್ಮವಾಗಿ ಅವಲೋಕಿಸಿ ಕಠಿಣವಾದ ನಿರ್ಧಾರ ಕೈಗೊಂಡಿದೆ. ಕೇಂದ್ರ ಸರ್ಕಾರ ಮಂಗಳವಾರ ಮಧ್ಯರಾತ್ರಿಯಿಂದಲೇ ರೂ. 500, 1000 ಮುಖಬೆಲೆಯ ನೋಟುಗಳ ಚಲಾವಣೆ ರದ್ದುಪಡಿಸಿದ ನಂತರ ಸಾರ್ವಜನಿಕರು ಪೆಟ್ರೋಲ್ ಬಂಕ್‍ಗಳು ಮತ್ತು ಎಟಿಎಂಗಳಿಗೆ ಮುಗಿಬಿದ್ದರು. ಈ ಹಿನ್ನೆಲೆಯಲ್ಲಿ ಕೆಲ ಬಂಕ್‍ಗಳಲ್ಲಿ ನೋಟುಗಳನ್ನು ಸ್ವೀಕರಿಸಲು ನಿರಾಕರಿಸಿದರು ಎಂದು ಹೇಳಲಾಗಿದೆ. ಸಾರ್ವಜನಿಕರಿಂದ ಈ ದೂರುಗಳು ಕೇಳಿಬಂದಾಗ ಜನರ ನೆರವಿಗೆ ಧಾವಿಸಿರುವ ಕೇಂದ್ರ ಸರ್ಕಾರ ಬಂಕ್‍ಗಳಿಗೆ ಸೂಚನೆ ನೀಡಿದೆ. ಒಂದು ವೇಳೆ ಬಂಕ್‍ಗಳಲ್ಲಿ 500, 1000 ಮುಖಬೆಲೆಯ ನೋಟುಗಳನ್ನು ನಿರಾಕರಿಸಿದರೆ ಅಂತಹ ಬಂಕ್‍ಗಳ ಪರವಾನಗಿಗಳನ್ನು ಯಾವುದೇ ಮುಲಾಜಿಲ್ಲದೆ ರದ್ದುಪಡಿಸಲಾಗುವುದು ಎಂದು ಸಚಿವ ಧರ್ಮೇಂದ್ರ ಪ್ರಧಾನ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಬಂಕ್‍ಗಳಲ್ಲಿ ನೋಟುಗಳನ್ನು ಸ್ವೀಕರಿಸಲು ನಿರಾಕರಿಸಿದರೆ ಅಂಥವರು ಕಂಡುಬಂದರೆ ದೂರು ನೀಡಿ.
@dpradhanbjp shell refusing to take 500 and 1000 pic.twitter.com/3mX0FTYMGf
— Sandeep P (@sarpame) November 10, 2016
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
