fbpx
Astrology

ಚರಣ ಸ್ಪರ್ಶದ ಹಿಂದಿನ ವೈಜ್ಞಾನಿಕ ಕಾರಣ

ಹಿಂದೂ ಧರ್ಮವು ಭಾರತೀಯ ಉಪಖಂಡದ ಪ್ರಧಾನ ಧರ್ಮ. ಹಿಂದೂ ಧರ್ಮವು ಅದರ ಅನುಯಾಯಿಗಳಿಂದ ಹಲವುವೇಳೆ, “ಶಾಶ್ವತ ಧರ್ಮ” ಎಂಬ ಅರ್ಥಕೊಡುವ ಒಂದು ಸಂಸ್ಕೃತ ಪದಗುಚ್ಛವಾದ, ಸನಾತನ ಧರ್ಮವೆಂದು ನಿರ್ದೇಶಿಸಲ್ಪಡುತ್ತದೆ. ಹಿಂದೂ ಧರ್ಮವು ಆಂಗಿಕವಾಗಿ ಅರಳಿದ ಮತ್ತು ಗಮನಾರ್ಹ ಜನಾಂಗೀಯ ಹಾಗೂ ಸಾಂಸ್ಕೃತಿಕ ವೈವಿಧ್ಯದಿಂದ ಗುರುತಿಸಬಹುದಾದ ಒಂದು ವಿಶಾಲವಾದ ಪ್ರದೇಶದಲ್ಲಿ ಹರಡಿದ ಒಂದು ಧಾರ್ಮಿಕ ಮುಖ್ಯವಾಹಿನಿಯನ್ನು ನಿರ್ದೇಶಿಸುತ್ತದೆ. ಹಿಂಧೂ ಸಂಪ್ರದಾಯದಲ್ಲಿ ಚರಣ ಸ್ಪರ್ಶಕ್ಕೆ ಒಂದು ವಿಶೇಷವಾದ ಸ್ಥಾನವಿದೆ.

ಸಾಮಾನ್ಯವಾಗಿ ನಾವು ಚರಣ ಸ್ಪರ್ಶ ಮಾಡುವ ವ್ಯಕ್ತಿಯು ನಮಗಿಂತ ವಯಸ್ಸಾದವರು ಅಥವಾ ಧಾರ್ಮಿಕ ಹಿನ್ನಲೆಯ ವ್ಯಕ್ತಿಗಳು ಆಗಿರುತ್ತಾರೆ. ಯಾವಾಗ ಅವರು ನಿಮ್ಮ ನಮಸ್ಕಾರವನ್ನು ಸ್ವೀಕರಿಸುತ್ತಾರೋ, ಈ ಕ್ರಿಯೆಯು ನಿಮ್ಮ ಅಹಂ ಅನ್ನು ದಾಟಿಕೊಂಡು ಬಂದಿರುತ್ತದೆ ( ಇದನ್ನೇ ಶ್ರದ್ಧೆ ಎಂದು ಕರೆಯುತ್ತಾರೆ). ನಿಮ್ಮ ಚರಣ ಸ್ಪರ್ಶವನ್ನು ಸ್ವೀಕರಿಸುವ ಅವರ ಹೃದಯವು ಧನಾತ್ಮಕ ಆಲೋಚನೆಗಳಿಂದ ಮತ್ತು ಶಕ್ತಿಯಿಂದ ನಿಮ್ಮನ್ನು ಹರಸುತ್ತದೆ (ಇದನ್ನು ಕರುಣಾ ಎಂದು ಕರೆಯುತ್ತಾರೆ). ಇದು ನಿಮ್ಮನ್ನು ಅವರ ಕೈ ಮತ್ತು ಕಾಲ್ಬೆರಳುಗಳ ಮೂಲಕ ತಲುಪುತ್ತದೆ. ಈ ಒಂದು ಪ್ರಕ್ರಿಯೆಯು ಆ ಸ್ಥಳದಲ್ಲಿ ಶಕ್ತಿ ಸಂಚಯವನ್ನು ಹೆಚ್ಚಿಸುತ್ತದೆ ಮತ್ತು ಲೌಕಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಹಾಗು ಎರಡು ಮನಸ್ಸು, ಹೃದಯಗಳನ್ನು ಬೆಸೆಯುತ್ತದೆ.

ಇದೇ ಕ್ರಿಯೆಯನ್ನು ಹಸ್ತ ಲಾಘವ ಮಾಡುವ ಮೂಲಕ ಹಾಗು ಅಪ್ಪಿಕೊಳ್ಳುವ ಮೂಲಕ ಸಹ ಮಾಡಬಹುದು. ಮೆದುಳಿನಿಂದ ಆರಂಭವಾಗುವ ನರಗಳು ನಿಮ್ಮ ಇಡೀ ದೇಹದ ತುಂಬಾ ಹರಡಿಕೊಂಡಿರುತ್ತವೆ. ಈ ನರಗಳು ನಿಮ್ಮ ಕೈಬೆರಳು ಮತ್ತು ಕಾಲು ಬೆರಳುಗಳಲ್ಲಿ ಅಂತ್ಯವಾಗಿರುತ್ತದೆ. ಯಾವಾಗ ನೀವು ನಿಮ್ಮ ಕೈಬೆರುಳಿನ ತುದಿಯನ್ನು ಇತರರ ಪಾದದ ಮೇಲೆ ಸ್ಪರ್ಶಿಸುತ್ತೀರೋ, ಆಗ ಎರಡು ದೇಹದ ನಡುವೆ ಒಂದು ಬಗೆಯ ವಿದ್ಯುತ್ಪ್ರವಾಹವು ಹರಿಯುತ್ತದೆ. ಆಗ ನಿಮ್ಮ ಬೆರಳು ಮತ್ತು ಹಸ್ತಗಳು ಈ ವಿದ್ಯುತ್ ಶಕ್ತಿಯ ” ಧಾರಕಗಳಾಗಿ” ಕಾರ್ಯನಿರ್ವಹಿಸುತ್ತವೆ. ನಿಮ್ಮಿಂದ ಚರಣ ಸ್ಪರ್ಶಕ್ಕೆ ಒಳಗಾಗುವ ವ್ಯಕ್ತಿಯ ಕಾಲುಗಳು ಆಗ ಶಕ್ತಿಯನ್ನು “ನೀಡುವ” ಅಂಶವಾಗಿ ಗುರುತಿಸಲ್ಪಡುತ್ತದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top