ಚಿಕ್ಕಬಳ್ಳಾಪುರ: ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಡಿ.31ರ ಸಂಜೆ 4 ರಿಂದ ಜನವರಿ 1ರವರೆಗೆ ನಂದಿ ಗಿರಿಧಾಮಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ.
ಹೊಸ ವರ್ಷಾಚರಣೆಗಾಗಿ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ನಂದಿ ಗಿರಿಧಾಮಕ್ಕೆ ಬರಲು ಇಚ್ಛಿಸುತ್ತಾರೆ. ಅಲ್ಲಲ್ಲಿ ಗುಂಪು ಗುಂಪಾಗಿ ತಿರುಗಾ ಡುತ್ತಾರೆ. ಮದ್ಯಸೇವನೆ ಮಾಡುವುದು, ಪರಿಸರಕ್ಕೆ ಹಾನಿ ಉಂಟು ಮಾಡುವುದು ಸೇರಿದಂತೆ ಇತರೆ ಅಹಿತಕರ ಘಟನೆಗಳಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇರುತ್ತದೆ.
ಹೊಸ ವರ್ಷಾಚರಣೆ ಹಿನ್ನಲೆ ಡಿ.31 ಸಂಜೆ 4ರಿಂದ ಜ.1 ರವರೆಗೆ ನಂದಿ ಗಿರಿಧಾಮಕ್ಕೆ ಪ್ರವೇಶ ನಿಷೇಧ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ನಿಷೇಧ ಹೇರಲಾಗಿದೆ ಜಿಲ್ಲಾ ಪ್ರಭಾರ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ. ಅಕ್ರಮವಾಗಿ ಗಿರಿಧಾಮ ಪ್ರವೇಶಿಸಲು ಯತ್ನಿಸಿದವರ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ಅವರು ಹೇಳಿದ್ದಾರೆ.
ಡಿ.31ರ ರಾತ್ರಿಗೆ ಗಿರಿಧಾಮದ ಹೋಟೆಲ್ ಗಳಲ್ಲಿ ರೂಮುಗಳನ್ನು ಕಾಯ್ದಿರಿಸಿರುವವರು ಅಂದು 6 ಗಂಟೆಯೋಳಗೆ ಬೆಟ್ಟದ ಮೇಲಿರಬೇಕು. ನಮತರ ಪ್ರವೇಶ ನಿರ್ಬಂಧಿಸಲಾಗುತ್ತದೆ. ರೆವೆನ್ಯೂ ಇಲಾಖೆ, ತೋಟಗಾರಿಕೆ ಇಲಾಖೆಯವರು ವಿಶೇಷ ಅಧಿಕಾರಿಯನ್ನು ನೇಮಿಸಿದ್ದು ಈ ಬಾರಿಯ ಹೊಸ ವರ್ಷಾಚರಣೆಯಂದು ಪೊಲೀಸ್ ಹದ್ದಿನ ಕಣ್ಣು ಎಲ್ಲೆಡೆ ಇರುತ್ತದೆ. ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಪಾರ್ಕಿಂಗ್ ವ್ಯವಸ್ಥೆ ಹಾಗೂ ಟ್ರಾಫಿಕ್ ನಿಯಂತ್ರಿಸಲು ಪೊಲೀಸರನ್ನು ನೇಮಿಸಲಾಗಿದೆ ಹಾಗೂ ಯಾವುದೇ ಅವಗಢಕ್ಕೆ ನೀಡುವುದಿಲ್ಲ ಎಂದರು.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
