fbpx
ದೇವರು

ಮಕರ ಸಂಕ್ರಾಂತಿಯಂದು ಮಕರಜ್ಯೋತಿಗೆ ಹೆಚ್ಚಿನ ಮಹತ್ವ

ಮಕರ ಸಂಕ್ರಾಂತಿಯಂದು ಮಕರಜ್ಯೋತಿಗೆ ಹೆಚ್ಚಿನ ಮಹತ್ವ

ಮಕರ ಜ್ಯೋತಿ ಕೇರಳದಲ್ಲಿ ಮಕರ ಸಂಕ್ರಾಂತಿಯಂದು ಶಬರಿಮಲೆಯಲ್ಲಿ ಕಾಣುವ ಮಕರಜ್ಯೋತಿಗೆ ಹೆಚ್ಚಿನ ಪ್ರಾಧಾನ್ಯತೆ ಇದೆ. ಅಯ್ಯಪ್ಪ ವೃತಾಧಾರಿಗಳಾದ ಜನರು ಶಬರಿಮಲೆಗೆ ತೆರಳಿ ತಮ್ಮ ಸ್ವಾಮಿಯ ಪಾದಕ್ಕೆರಗಿ ಮಕರ ಜ್ಯೋತಿಯ ದರ್ಶನ ಪಡೆದರೆ ಜನ್ಮ ಸಾರ್ಥಕವಾಗುವುದೆಂಬ ನಂಬಿಕೆಯಿಂದಾಗಿ ಲಕ್ಷೋಪಲಕ್ಷ ಜನರು ಈ ಜ್ಯೋತಿಯ ದರ್ಶನಕ್ಕಾಗಿ ವರ್ಷಂಪ್ರತಿ ಶಬರಿಮಲೆ ಸನ್ನಿಧಾನಕ್ಕೆ ಆಗಮಿಸುತ್ತಾರೆ.

ಮಕರ ಜ್ಯೋತಿಗೆ “ಮಕರ ವಿಳಕ್ಕು” ಎಂದು ಕರೆಯಲ್ಪಡುವ ಈ ಜ್ಯೋತಿಯು ಶಬರಿಮಲೆಯ ಬೆಟ್ಟದಿಂದ ಮೂರು ಬಾರಿ ಗೋಚರವಾಗುತ್ತದೆ.

ಕೇರಳದ ಶಬರಿಮಲೆ

ಮಕರ ಸಂಕ್ರಾಂತಿಯಂದು ಕೇರಳದ ಶಬರಿಮಲೆಯಲ್ಲಿ ಕಾಣುವ ಮಕರಜ್ಯೋತಿಗೆ ಹೆಚ್ಚಿನ ಪ್ರಾಧಾನ್ಯತೆ ಇದೆ. ಅಯ್ಯಪ್ಪ ವೃತಾಧಾರಿಗಳಾದ ಜನರು ಶಬರಿಮಲೆಗೆ ತೆರಳಿ ತಮ್ಮ ಸ್ವಾಮಿಯ ಪಾದಕ್ಕೆರಗಿ ಮಕರ ಜ್ಯೋತಿಯ ದರ್ಶನವನ್ನು ಪಡೆದರೆ ಜನ್ಮ ಸಾರ್ಥಕವಾಗುವುದೆಂಬ ನಂಬಿಕೆ ಯಿಂದಾಗಿ ಲಕ್ಷೋಪಲಕ್ಷ ಜನರು ಈ ಜ್ಯೋತಿಯ ದರ್ಶನಕ್ಕಾಗಿ ವರ್ಷಂಪ್ರತಿ ಶಬರಿಮಲೆ ಸನ್ನಿಧಾನಕ್ಕಾಗಮಿಸುತ್ತಾರೆ. ಮಕರ ವಿಳಕ್ಕು”ಎಂದು ಕರೆಯಲ್ಪಡುವ ಈ ಜ್ಯೋತಿಯು ಶಬರಿಮಲೆಯ ಬೆಟ್ಟದಿಂದ ಮೂರು ಬಾರಿ ಗೋಚರವಾಗುತ್ತದೆ. ಶಬರಿಮಲೆಗೆ ತೆರಳಿದ ವೃತಧಾರಿಗಳು ಇದನ್ನು ವೀಕ್ಷಿಸಿದರೆ ಜೀವನ ಪಾವನ ಎಂಬ ನಂಬಿಕೆಯೂ ಇದೆ. ದೇಶದ ವಿವಿಧೆಡೆ ಬೇರೆ ಬೇರೆ ಹೆಸರುಗಳಲ್ಲಿ ಸಂಕ್ರಾಂತಿಯನ್ನು ಆಚರಿಸಲಾಗುತ್ತದೆ.

ಅಂತೂ ಇದು ವೈಜ್ಞಾನಿಕವಾಗಿ ಸಾಬೀತಾಗಿ ಲ್ಲವಾದರೂ, ಪ್ರಸ್ತುತ ಕಾಲದಲ್ಲಿಯೂ ಆಧ್ಯಾತ್ಮಿಕತೆಯ ಕುರುಹನ್ನು ತೋರಿಸುತ್ತದೆ ಎನ್ನುತ್ತಾರೆ ಭಕ್ತರು. ಒಟ್ಟಿನಲ್ಲಿ ಸೂರ್ಯನು ಮಕರ ರಾಶಿಗೆ ಪ್ರವೇಶಿಸಿ ಲೋಕದ ಕಾರಿರುಳನ್ನು ಹೋಗಲಾಡಿಸುವಂತೆ ಜನರು ಈ ಕಾಲದಲ್ಲಿ ಪುಣ್ಯ ಕಾರ್ಯಗಳಲ್ಲಿಯೂ ಆಧ್ಯಾತ್ಮಿಕ ಚಿಂತೆಗಳಲ್ಲಿಯೂ ತಮ್ಮನ್ನು ತೊಡಗಿಸಿಕೊಂಡು ಮುಕ್ತಿ ಮಾರ್ಗದಲ್ಲಿ ಸಾಗುವಂತೆ ಈ ಆಚರಣೆಯು ಪ್ರೇರಣೆಯನ್ನು ನೀಡುತ್ತದೆ.

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top