fbpx
ದೇವರು

ಉತ್ತರಾಯಣ ಪುಣ್ಯಕಾಲದ ಶುಭದಿನ- ಮಕರ ಸಂಕ್ರಾಂತಿ ಹಬ್ಬ

ಉತ್ತರಾಯಣ ಪುಣ್ಯಕಾಲದ ಶುಭದಿನ- ಮಕರ ಸಂಕ್ರಾಂತಿ ಹಬ್ಬ

ಸಂಕ್ರಾಂತಿ ಮುಖ್ಯವಾಗಿ ದಕ್ಷಿಣ ಭಾರತದಲ್ಲಿ ಆಚರಿಸಲಾಗುವ ಒಂದು ಹಬ್ಬ. ಪೈರು ತೆಗೆಯುವ ಸಂದರ್ಭದಲ್ಲಿ ಆಚರಿಸಲಾಗುವ ಸಂಕ್ರಾಂತಿ ಹಬ್ಬ ಸಮೃದ್ಧಿಯ ಸಂಕೇತ. ಸಂಕ್ರಾಂತಿಯನ್ನು ಧಾರ್ಮಿಕ ತತ್ವಗಳಿಂದ ಸ್ವತಂತ್ರವಾಗಿ ಆಚರಿಸಲಾಗುತ್ತದೆ ಯಾದರೂ ವೇದಾಂಗ ಜ್ಯೋತಿಷಶಾಸ್ತ್ರದ ತಳಹದಿ ಹೊಂದಿರುವುದರಿಂದ ಮುಖ್ಯವಾಗಿ ಹಿಂದೂ ಧರ್ಮದವರಿಂದ ಆಚರಿಸಲ್ಪಡುತ್ತದೆ. ಕರ್ನಾಟಕ, ಆಂಧ್ರ ಪ್ರದೇಶ ಮತ್ತು ತಮಿಳುನಾಡುಗಳ ಮುಖ್ಯ ಹಬ್ಬಗಳಲ್ಲಿ ಸಂಕ್ರಾಂತಿಯೂ ಒಂದು.

ಅನಾದಿ ಕಾಲದಿಂದ ನಡೆದುಕೊಂಡು ಬರುತ್ತಿರುವ ಶಾಸ್ತ್ರ ಸಂಪ್ರದಾಯಗಳ ಪ್ರಕಾರ ಸೂರ್ಯನು ಧನು ರಾಶಿಯಿಂದ ಮಕರ ರಾಶಿಯನ್ನು ಪ್ರವೇಶಿಸುವುದನ್ನೇ ಮಕರ ಸಂಕ್ರಾಂತಿ ಎಂದು ಕರೆಯಲಾಗುತ್ತದೆ.

ಸನಾತನ ಹಿಂದೂ ಧರ್ಮದ ಬುನಾದಿಯಾಗಿರುವ ವೇದಗಳ ಅಂಗಗಳೆಂದೇ ಪ್ರಸಿದ್ಧವಾಗಿರುವ ಆರು ವೇದಾಂಗಗಳಲ್ಲಿ ಒಂದಾದ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಸೂರ್ಯನು ನಿರಯಣ ಮಕರ ರಾಶಿಯನ್ನು ಪ್ರವೇಶಿಸಿದಾಗ, “ಮಕರ ಸಂಕ್ರಾಂತಿ”ಯಾಗುತ್ತದೆ. ಈ ಕಾಲವು ಪ್ರತಿವರ್ಷ ಗ್ರೆಗೋರಿಯನ್ ಪಂಚಾಂಗದ ಜನವರಿ 14ರ ಸುಮಾರಿಗೆ ಬರುತ್ತದೆ.

ಹಿಂದೆ, ಈ ಕಾಲವೇ ಉತ್ತರಾಯಣ ಅಥವಾ ಸೂರ್ಯನ ಉತ್ತರ ದಿಕ್ಕಿನ ಪಯಣದ ಆರಂಭವನ್ನು ಸೂಚಿಸುವ ಕಾಲವೂ ಆಗಿತ್ತಾದ್ದರಿಂದ ಭೂಮಿಯ ಉತ್ತರಾರ್ಧಗೋಳದಲ್ಲಿ ಚಳಿ-ಬೆಚ್ಚನೆಯ ವಾತಾವರಣ ಆರಂಭವಾಗಿ, ಬೆಳೆ ಕಟಾವಿನ ಕಾಲವೂ ಆಗಿತ್ತು.

ರೈತರು ತಮ್ಮ ಹೊಸ ಬೆಳೆಯಾದ ಭತ್ತ, ಕಬ್ಬು, ಎಳ್ಳು ಇತ್ಯಾದಿಗಳನ್ನು ಹೊಲಗಳಿಂದ ಮನೆಗೆ ತಂದು ಅವುಗಳನ್ನು ದಾನ ಮಾಡಿದ ನಂತರ ಸೇವಿಸುವ ಪದ್ಧತಿಯು ಪುರಾತನ ಕಾಲದಿಂದಲೇ ನಡೆದುಕೊಂಡು ಬಂದಿದೆ. ಕರ್ನಾಟಕದಲ್ಲಿ ಸಂಕ್ರಾಂತಿಗೆ ಸಂಬಂಧಪಟ್ಟ ಆಚರಣೆಗಳಲ್ಲಿ ಕಂಡು ಬರುವುದು “ಎಳ್ಳು”. ಮನೆಯಲ್ಲಿ ಎಳ್ಳನ್ನು ತಯಾರಿಸಿ ಸುತ್ತ ಮುತ್ತಲಿನ ಮನೆಗೆ ಎಳ್ಳನ್ನು ಹಂಚಿ ಶುಭಾಶಯಗಳನ್ನು ಕೋರುತ್ತಾರೆ. ಈ ಸಂಪ್ರದಾಯವನ್ನು “ಎಳ್ಳು ಬೀರುವುದು” ಎಂದು ಕರೆಯುತ್ತಾರೆ. ಸಂಕ್ರಾತಿಯ ಆಚರಣೆಯಲ್ಲಿ ಎಳ್ಳು ಬೆಲ್ಲದ ಸೇವನೆಯು ಆರೋಗ್ಯಕರವಾಗಿರುತ್ತದೆ.

ಜ್ಯೋತಿಷದ ಪ್ರಕಾರ

*ಸನಾತನ ಹಿಂದೂ ಧರ್ಮದ ಬುನಾದಿಯಾಗಿರುವ ವೇದಗಳ ಅಂಗಗಳೆಂದೇ ಪ್ರಸಿದ್ಧವಾಗಿರುವ ಆರು ವೇದಾಂಗಗಳಲ್ಲಿ ಒಂದಾದ ಜ್ಯೋತಿಷ್ಯವನ್ನು ವೇದಗಳ ಕಣ್ಣೆಂದು ಗುರುತಿಸುತ್ತಾರೆ. ವೇದದಳ ಕಾಲದಿಂದಲೂ ಶುಭಕಾರ್ಯಗಳಿಗೆ ಮುಹೂರ್ತಾದಿ ಕಾಲವನ್ನು ನಿರ್ಣಯಿಸಿ, ಗ್ರಹಗಳ ಸ್ಥಿತಿ-ಗತಿ, ರಾಶಿ-ನಕ್ಷತ್ರ, ಗ್ರಹಣ, ಅಸ್ತೋದಯಗಳನ್ನು ನಿರ್ಣಯಿಸಿ, ಶುಭಾಶುಭ ಫಲಗಳನ್ನು ತೋರುತ್ತಾ, ಹಬ್ಬ-ಹರಿದಿನಗಳನ್ನು ಋತುಗಳಿಗನುಸಾರವಾಗಿ ಲೆಕ್ಕಾಚಾರ ಹಾಕಿ ಗುರುತಿಸುತ್ತಿದ್ದ ಶಾಸ್ತ್ರವೇ ಜ್ಯೋತಿಷ.

*ಈ ಶಾಸ್ತ್ರದಂತೆ, ಸೂರ್ಯನು ನಿರ್ಯಾಣ ಮಕರರಾಶಿಯನ್ನು ಪ್ರವೇಶಿಸಿದಾಗ, “ಮಕರ ಸಂಕ್ರಾಂತಿ”ಯಾಗುತ್ತದೆ. ಈ ಕಾಲವು ಪ್ರತಿವರ್ಷ ಗ್ರೆಗೋರಿಯನ್ ಪಂಚಾಂಗದ ಜನವರಿ ೧೪ರ ಸುಮಾರಿಗೆ ಬೀಳುತ್ತದೆ. ಹಿಂದೆ, ಈ ಕಾಲವೇ ಉತ್ತರಾಯಣ ಅಥವಾ ಸೂರ್ಯನ ಉತ್ತರದಿಕ್ಕಿನ ಪಯಣದ ಆರಂಭವನ್ನು ಸೂಚಿಸುವ ಕಾಲವೂ ಆಗಿತ್ತಾದ್ದರಿಂದ ಭೂಮಿಯ ಉತ್ತರಾರ್ಧಗೋಳದಲ್ಲಿ ಚಳಿ-ಬೆಚ್ಚನೆಯ ವಾತಾವರಣ ಆರಂಭವಾಗಿ, ಬೆಳೆ ಕಟಾವಿನ ಕಾಲವೂ ಆಗಿತ್ತು.

*ಈಗ ಉತ್ತರಾಯಣ ಡಿಸೆಂಬರ್ ೨೨ಕ್ಕೇ ಆದರೂ, ಹಿಂದಿನಂತೆಯೇ ಜನವರಿ ೧೪ ರಂದು ನಡೆಯುವ ಮಕರಸಂಕ್ರಾಂತಿಯಂದೇ ಉತ್ತರಾಯಣದ ಆಚರಣೆಯೂ ನಡೆಯುತ್ತದೆ. ಮಹಾಭಾರತದ ಕಥೆಯಲ್ಲಿ ಇಚ್ಚಾ ಮರಣಿಯಾದ ಭೀಷ್ಮರು ಪ್ರಾಣ ಬಿಡಲು ಉತ್ತರಾಯಣ ಪರ್ವ ಕಾಲವನ್ನು ಕಾದಿದ್ದರು ಎಂಬ ಉಲ್ಲೆಖವಿದೆ. ಸಂಪರ್ಕದ ಹೆಸರು

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top