fbpx
ಸಮಾಚಾರ

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಪ್ರತಿ ವರ್ಷ ಮಾರ್ಚಿ ೮ ರಂದು ವಿಶ್ವದೆಲ್ಲೆಡೆ ಆಚರಿಸಲಾಗುತ್ತದೆ. ಈ ದಿನದಂದು ಮಹಿಳೆಯರ ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯ ಸಾಧನೆಗಳನ್ನು ನೆನೆಯಲಾಗುತ್ತದೆ.

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ವ್ಯಾಪಕಗೊಳ್ಳುತ್ತಾ ನಡೆದಿದ್ದರೂ ಸಹ ಅದರ ಐತಿಹಾಸಿಕ ಹಿನ್ನೆಲೆಯನ್ನು ಮಸುಕು ಮಾಡುವ ಪ್ರವೃತ್ತಿಗಳು ಬೆಳೆಯುತ್ತಿವೆ. ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಎಂದರೆ ಬಂಡವಾಳಶಾಹಿ ಶೋಷಣೆಯ ವಿರುದ್ಧ ಮಹಿಳಾ ವಿಮೋಚನೆಗಾಗಿ ನಡೆದ ಸಮಾಜವಾದಿ ಹೋರಾಟದ ಪರಂಪರೆ ಎನ್ನುವುದಾಗಿದೆ.

ದೆಹಲಿ ಅತ್ಯಾಚಾರ ಘಟನೆ ಸಾಂಕೇತಿಕ ಮಾತ್ರ. ಈಗಾಗಲೇ ಸಾಕಷ್ಟು ಅತ್ಯಾಚಾರ ಪ್ರಕರಣಗಳು ನ್ಯಾಯಾಲಯಗಳಲ್ಲಿ ಇತ್ಯರ್ಥಕ್ಕೆ ಬಾಕಿ ಉಳಿದಿವೆ. ತ್ವರಿತ ನ್ಯಾಯಾಲಯಕ್ಕೆ ರವಾನಿಸಿ, ಅಪರಾಧಿಗಳಿಗೆ ಬೇಗನೇ ಶಿಕ್ಷೆ ಕೊಡುವಂತಾಗಬೇಕು. ಅದಕ್ಕಾಗಿಯೇ ಒಂದು ಕಾನೂನನ್ನು ಜಾರಿಗೊಳಿಸಬೇಕು’. ಶಿಕ್ಷಣ, ಆರ್ಥಿಕ ಸಬಲೀಕರಣ ಸಾಧಿಸಿ ಸ್ವಾವಲಂಬಿ ಬದುಕು ನಡೆಸುತ್ತಿರುವ ಮಹಿಳೆ ಇನ್ನೂ ಮೀಸಲಾತಿಯಡಿಯಲ್ಲಿ ದುಡಿಯಬೇಕಾದ ಅನಿವಾರ್ಯತೆ. ಮಹಿಳೆಯರಿಗೆ ಹಕ್ಕು, ಹಿತರಕ್ಷಣೆ, ಜಾಗತಿಕ ಮಟ್ಟದಲ್ಲಿ ತಿಳಿವಳಿಕೆ, ಶಿಕ್ಷಣ, ತರಬೇತಿ, ವಿಜ್ಞಾನ, ತಂತ್ರಜ್ಞಾನಕ್ಕೆ ನೆರವು ನೀಡಿ, ಸಮಾಜದಲ್ಲಿ ಸಮಾನತೆಯ ವೈಶಿಷ್ಟ್ಯಪೂರ್ಣ ಬದಲಾವಣೆಗಳಿಗೆ ಅವಕಾಶ ಕಲ್ಪಿಸಬೇಕು. ಉದ್ಯೋಗ ಕ್ಷೇತ್ರದಲ್ಲಿ ಹೆಣ್ಣು ಗಂಡಿಗೆ ಸರಿಸಮಾನ ಎಂದು ತೋರಿಸಿಕೊಂಡಿದ್ದರೂ, ಹಲವೆಡೆಗಳಲ್ಲಿ ಇನ್ನೂ ನಡೆಯುತ್ತಿರುವ ಲಿಂಗ ತಾರತಮ್ಯ, ಹೆಣ್ಣು ಭ್ರೂಣಹತ್ಯೆ, ಅತ್ಯಾಚಾರ ಇವುಗಳನ್ನು ತಡೆಯಬೇಕು. ವಿಶ್ವಾಸ, ಪ್ರೀತಿ, ಮಮತೆ, ನಂಬಿಕೆ, ನೈತಿಕ ಮೌಲ್ಯಗಳು ನಮ್ಮ ಸಮಾಜದ ಕಣ್ಣುಗಳಾಗಬೇಕು. ಮಹಿಳೆಯರ ಸಾಧನೆಗೆ ಪ್ರೋತ್ಸಾಹ ನೀಡಬೇಕು. ಇದಕ್ಕೆ ಪುರುಷರ ನೈತಿಕ ಬೆಂಬಲ ದೊರಕಬೇಕು.

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಬಂಡವಾಳಶಾಹಿ, ಪುರುಷ ಪ್ರಧಾನ ಸಮಾಜದ ಸಂಕೋಲೆಗಳ ವಿರುದ್ಧ ಮತ್ತು ಮಹಿಳಾ ಉನ್ನತೀಕರಣದ ಸಂಕೇತವಾಗಿದೆ. ಭಾರತದಲ್ಲಿ ಪ್ರಜಾಸತ್ತಾತ್ಮಕ ಬೇಡಿಕೆಗಳು ಮತ್ತು ಹೋರಾಟಗಳ ಪ್ರಸ್ತುತ ಸನ್ನಿವೇಶದಲ್ಲಿ ಅಪಾರ ಸಂಖ್ಯೆಯ ಮಹಿಳೆಯರನ್ನು ಸಮಾನತೆಯ ವೇದಿಕೆ ಅಡಿಯಲ್ಲಿ ಒಗ್ಗೂಡಿಸುವ ಅಗತ್ಯವಿದೆ. ಇದನ್ನು ಯಶಸ್ವಿಗೊಳಿಸಬೇಕಾದರೆ ದುಡಿಯುವ ಮಹಿಳೆ, ದಲಿತ ಮಹಿಳೆ, ಬುಡಕಟ್ಟಿನ ಮಹಿಳೆಯರು, ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಅಸಂಘಟಿತ ವಲಯದಲ್ಲಿ ದುಡಿಯುತ್ತಿರುವ ಮಹಿಳೆಯರ ಸಮಸ್ಯೆಗಳನ್ನು ಮುಖ್ಯ ವಿಷಯವನ್ನಾಗಿ ತೆಗೆದುಕೊಳ್ಳಬೇಕು. ಅಸಮಾನತೆಯಿಂದ ಕೂಡಿರುವ ಪ್ರಸಕ್ತ ಬಂಡವಾಳಶಾಹಿ ವ್ಯವಸ್ಥೆಯನ್ನು ಬದಲಾಯಿಸಬೇಕಾದರೆ ಅವರೆಲ್ಲರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಮಾರ್ಚ್ 8ರ ಶತಮಾನೋತ್ಸವವನ್ನು ಆಚರಿಸುತ್ತಿರುವ ಪ್ರಸ್ತುತ ಸಂದರ್ಭದಲ್ಲಿ ಈ ಹೋರಾಟವನ್ನು ಮುನ್ನಡೆಸುವ ಪ್ರತಿಜ್ಞೆ ಮಾಡಬೇಕು.

ದಿನಕಳೆದಂತೆ ಅಂತರಾಷ್ಟ್ರೀಯ ಮಹಿಳೆಯರ ದಿನ ಬೆಳವಣಿಗೆಯ ಪ್ರತಿಬಿಂಬದ ಜೊತೆಗೆ ಸಾಧರಣ ಮಹಿಳೆಯ ಧೀರತನ ಮತ್ತು ಧೃಡತೆ ದೇಶ ಹಾಗು ಸಮುದಾಯದ ಇತಿಹಾಸದಲ್ಲಿ ವಹಿಸಿದ ಅಸಾಧಾರಣ ಪಾತ್ರವನ್ನ ಬಿಂಬಿಸುತ್ತಾ ಬದಲಾವಣೆಯ ಕರೆಯನ್ನ ನೀಡುತ್ತದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top