fbpx
ಸಮಾಚಾರ

ಹಿರಿಯ ಕಲಾವಿದ ಶತಾಯುಷಿ ಏಣಗಿ ಬಾಳಪ್ಪ ಅವರಿಗೆ ಮೈಸೂರು ವಿವಿಯಿಂದ ಡಾಕ್ಟರೇಟ್ ಪ್ರದಾನ

ರಂಗಭೂಮಿ ಮತ್ತು ಚಲನಚಿತ್ರ ಕ್ಷೇತ್ರಗಳಲ್ಲಿ ಜೀವಮಾನದ ಸಾಧನೆ ಗುರುತಿಸಿ ಮೈಸೂರಿನ ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾನಿಲಯ ಗುರುವಾರ ಶತಾಯುಷಿ ಏಣಗಿ ಬಾಳಪ್ಪ ಅವರಿಗೆ ಗೌರವ ಡಾಕ್ಟರೇಟ್‍ ಪ್ರದಾನ ಮಾಡಿದೆ.

ಅನಾರೋಗ್ಯದ ಹಿನ್ನೆಲೆ ಅವರ ಹುಟ್ಟೂರಾದ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲ್ಲೂಕಿನ ಏಣಗಿ ಗ್ರಾಮದಲ್ಲಿನ ಅವರ ನಿವಾಸಕ್ಕೆ ತೆರಳಿದ ವಿಶ್ವವಿದ್ಯಾನಿಲಯದ ಕುಲಪತಿ ಡಾ.ಸರ್ವಮಂಗಳಾ ಶಂಕರ ಅವರು ಗೌರವ ಡಾಕ್ಟರೇಟ್ ಪ್ರದಾನ ಪ್ರದಾನ ಮಾಡಿದರು.

ರಂಗಭೂಮಿಯನ್ನೆ ನೆಚ್ಚಿಕೊಂಡಿದ್ದ ಏಣಗಿ ಬಾಳಪ್ಪ  ಅವರು ಸಾವಿರಾರು ನಾಟಕ ಪ್ರದರ್ಶನ ಮಾಡಿದ್ದು, ತಮ್ಮ ವಿಶಿಷ್ಟ ಗಾಯನದ ಮೂಲಕ ಗಮನ ಸೆಳೆದಿದ್ದರು. ಅಲ್ಲದೆ ಚಲನಚಿತ್ರ ದಲ್ಲಿ ತನ್ನದೆ ಛಾಪು ಪುಡಿಸಿದ್ದರು. ಸಮಾರಂಭದಲ್ಲಿ ಹಿರಿಯ ನಾಟಕಕಾರರು, ಸಾಹಿತಿಗಳು ಸೇರಿದಂತೆ ಹಲವು  ಗಣ್ಯರು ಭಾಗಿಯಾಗಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top