ಮೊಳಕೆ ಕಾಳು ತಿಂದರೆ ಉಪಯೋಗಗಳು
ಮೊಳಕೆ ಕಾಳು ತಿಂದರೆ ಆರೋಗ್ಯಕ್ಕೆ ಉತ್ತಮ ಎಂದು ನಮಗೆ ಗೊತ್ತೇ . ಮೊಳಕೆ ಕಾಳು ಯಾವೆಲ್ಲಾ ರೀತಿಯಲ್ಲಿ ನಮ್ಮ ಆರೋಗ್ಯಕ್ಕೆ ಉತ್ತಮ ಎನ್ನುವುದನ್ನು ನೋಡೋಣ ಬನ್ನಿ.
*ಜೀರ್ಣಕ್ರಿಯೆಗೆ ಅನುಕೂಲ:
ಅಜೀರ್ಣತೆಯ ಸಮಸ್ಯೆಯಿಂದ ಬಳಲುತ್ತಿರುವವರು ಪ್ರತಿದಿನ ಮೊಳಕೆ ಕಾಳು ತಿನ್ನುವುದು ಒಳ್ಳೆಯದು. ಇದರಲ್ಲಿರುವ ಜೀವಸತ್ವಗಳು ಆಹಾರವನ್ನು
ಸರಿಯಾಗಿ ಜೀರ್ಣವಾಗಲು ಸಹಕರಿಸುತ್ತದೆ.
*ರಕ್ತ ಪರಿಚಲನೆಗೆ ಸಹಕಾರಿ:
ರಕ್ತ ಪರಿಚಲನೆಗೆ ಮೊಳಕೆ ಕಾಳಿನ ಸೇವನೆ ಉತ್ತಮ.ಇದರಲ್ಲಿ ಕಬ್ಬಿಣ ಮತ್ತು ತವರದ ಅಂಶ ಸಾಕಷ್ಟಿದ್ದು, ದೇಹದಲ್ಲಿ ಕೆಂಪು ರಕ್ತ ಕಣಗಳ ಸಂಖ್ಯೆ ಎಷ್ಟು
ಬೇಕೋ ಅಷ್ಟು ಇರುವಂತೆ ನೋಡಿಕೊಳ್ಳುತ್ತದೆ.
*ಬೊಜ್ಜು ಕರಗಿಸಲು
ಬೊಜ್ಜನ್ನು ಕರಗಿಸಿ ದೇಹದ ತೂಕವನ್ನು ಇಳಿಸಲು ಡಯಟ್ ಮಾಡುವವರಮ ಆಹಾರದಲ್ಲಿ ಮೊಳಕೆ ಕಾಳು ಇರಲೇ ಬೇಕು. ಇದರಲ್ಲಿ ಫೈಬರ್ ಅಂಶ
ಸಾಕಷ್ಟಿದ್ದು, ಹೊಟ್ಟೆ ತುಂಬಿರುವಂತೆ ಮಾಡುತ್ತದೆ. ಇದರಿಂದಾಗಿ ಆಗಾಗ ತಿನ್ನಬೇಕಾಗುವುದಿಲ್ಲ. ನಾಲಿಗೆ ಮೇಲೂ ಕಡಿವಾಣ ಹಾಕಬಹುದು.
*ನಿಶ್ಯಕ್ತಿಯನ್ನು ಕಡಿಮೆಮಾಡುತ್ತದೆ:
ಮೊಳಕೆ ಕಾಳಿನಲ್ಲಿ ವಿಟಮಿನ್ ಸಿ ಅಂಶ ಸಾಕಷ್ಟಿರುವುದರಿಂದ ರೋಗ ನಿರೋಧಕ ಶಕ್ತಿಯಿದೆ. ರೋಗನಿರೋಧಕ ಶಕ್ತಿ ಇರುವುದರಿಂದ ನಿಶ್ಯಕ್ತಿಯನ್ನು ಕಡಿಮೆ ಮಾಡುತ್ತದೆ.
*ಪುರುಷರಲ್ಲಿ ವೀರ್ಯಾಣುಗಳ ಹೆಚ್ಚಳ:
ಮೊಳಕೆಗಳನ್ನು ಹೆಚ್ಚಾಗಿ ಸೇವಿಸುವುದರಿಂದ ಪುರುಷರಲ್ಲಿ ವೀರ್ಯಾಣುಗಳ ಉತ್ಪತ್ತಿಯು ದ್ವಿಗುಣವಾಗುತ್ತದೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
