fbpx
ದೇವರು

ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನದ ಸಮಯ ಬದಲಾವಣೆ.

ದೇಶ ವಿದೇಶಗಳಿಂದ ದಿನನಿತ್ಯ ಲಕ್ಷಾಂತರ ಭಕ್ತರನ್ನು ಸೆಳೆಯುವ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನಕ್ಕೆ ಭಕ್ತರಿಗೆ ನಿಗದಿಯಾಗಿರುವ ಸಮಯವನ್ನು ಪರಿಷ್ಕರಿಸಲಾಗಿದೆ.

ಧರ್ಮಸ್ಥಳವು ಧಾರ್ಮಿಕ ಸಹಬಾಳ್ವೆಗೆ ಉದಾಹರಣೆಯಾಗಿದೆ. ಧರ್ಮಸ್ಥಳ ದಕ್ಷಿಣ ಕನ್ನಡ ಜಿಲ್ಲೆಯ ಒಂದು ಧಾರ್ಮಿಕ ತಾಣ. ಈ ದೇವಾಲಯವು ದಾನ ಧರ್ಮಕ್ಕೆ ಪ್ರಸಿದ್ಧವಾಗಿ ಮತ್ತು ಭಕ್ತರಿಗೆ ನೈತಿಕ – ಸಾಂಸ್ಕೃತಿಕ ಕೇಂದ್ರವಾಗಿ ಯಕ್ಷಗಾನದ ನಾಡಿನ ಚರಿತ್ರೆಯನ್ನೂ ಅಲಂಕರಿಸುತ್ತಿದೆ. ಮಂಜುನಾಥಸ್ವಾಮಿ ದೇವಾಲಯವಿರುವ ಈ ಊರು ಬಹಳ ಪ್ರಸಿದ್ಧ. ಶ್ರವಣ ಬೆಳಗೊಳದಂತೆ ಬಾಹುಬಲಿಯ ಪ್ರತಿಮೆ ಕೂಡ ಇರುವುದು. ಸುಮಾರು ಏಳು ನೂರು ವರುಷಗಳ ಇತಿಹಾಸ ಇರುವ ಇದು ನೇತ್ರಾವತಿ ನದಿಯ ದಡದಲ್ಲಿದೆ. ಇಲ್ಲಿಯ ಆರಾಧ್ಯ ದೈವ ಮಂಜುನಾಥ ಸ್ವಾಮಿಯನ್ನು ಮಂಗಳೂರಿನ ಕದ್ರಿ ಎಂಬಲ್ಲಿಂದ ತಂದು ಉಡುಪಿಯ ಯತಿಗಳಾದ ಶ್ರೀ ವಾದಿರಾಜರು ಪ್ರತಿಷ್ಠಾಪಿಸಿದರು ಎಂದು ಪ್ರತೀತಿ ಇದೆ. ಈ ದೇವಾಲಯವು ದಾನ ಧರ್ಮಕ್ಕೆ ಪ್ರಸಿದ್ಧವಾಗಿ ಮತ್ತು ಭಕ್ತರಿಗೆ ನೈತಿಕ – ಸಾಂಸ್ಕೃತಿಕ ಕೇಂದ್ರವಾಗಿ ಯಕ್ಷಗಾನದ ನಾಡಿನ ಚರಿತ್ರೆಯನ್ನೂ ಅಲಂಕರಿಸುತ್ತಿದೆ.

ಬೆಳಗ್ಗೆ 6.30ರಿಂದ ಮಧ್ಯಾಹ್ನ 2.30ರ ವರೆಗೆ, ಸಂಜೆ 5ರಿಂದ ರಾತ್ರಿ 8.30ರವರೆಗೆ ಸಮಯ ನಿಗದಿ ಮಾಡಲಾಗಿದೆ. ರವಿವಾರ, ಸೋಮವಾರ, ವಿಶೇಷ ಜನಸಂದಣಿ ಇರುವ ದಿನಗಳಲ್ಲಿ ಬೆಳಗ್ಗೆ 6.30ರಿಂದ ಮಧ್ಯಾಹ್ನ 4 ಗಂಟೆ ವರೆಗೆ, ಸಂಜೆ 5.30ರಿಂದ ರಾತ್ರಿ 9 ಗಂಟೆ ವರೆಗೆ ಭಕ್ತರು ದೇವರ ದರ್ಶನಕ್ಕೆ ದೇವಾಲಯ ಪ್ರವೇಶಿಸಬಹುದಾಗಿದೆ.

ಕೇರಳದ ಇತರ ದೇವಾಲಯಗಳ ರೀತಿ ಧರ್ಮಸ್ಥಳ ದೇವಾಲಯದ ಒಳವೃತ್ತ, ಮರದ ಕಟ್ಟಿಗೆಯನ್ನು ಬಳಸಿ ಕಟ್ಟಲಾಗಿದೆ. ಈ ದೇವಾಲಯದ ಬಗ್ಗೆ ಇರುವ ಅಸಾಮಾನ್ಯ ವಿಷಯವೆಂದರೆ ಜೈನ ಧರ್ಮದವರು ಆಡಳಿತ ನಿರ್ವಹಿಸುತ್ತಾರೆ ಮತ್ತು ಪೂಜೆಯನ್ನು ಮಾಧ್ವ  ಕ್ರಮದಲ್ಲಿ ಹಿಂದೂ ಪುರೋಹಿತರು ಆಯೋಜಿಸುತ್ತಾರೆ. ಭಕ್ತರು ಬೆಳಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆ ಮತ್ತು ಸಂಜೆ 6.30 ರಿಂದ 8.30ರ ವರೆಗೆ ಧರ್ಮಸ್ಥಳ ದೇವಾಲಯಕ್ಕೆ ಭೇಟಿ ನೀಡಬಹುದು.

WhatsApp Image 2016-08-29 at 1.23.11 PM

ಈ ಗ್ರಾಮವು ಹಲವಾರು ಪ್ರಾಚೀನ ಹಸ್ತಪ್ರತಿಗಳ ಭಂಡಾರವಾಗಿದೆ. ಇವೆಲ್ಲವುಗಳನ್ನು ಧರ್ಮಸ್ಥಳದ ಒಂದು ಪುರಾತತ್ವ ಜಾಗದಲ್ಲಿ  ಸಂಗ್ರಹಿಸಲ್ಪಟ್ಟಿದ್ದು ಮತ್ತು ಇಲ್ಲಿನ ವಸ್ತುಸಂಗ್ರಹಾಲಯದಲ್ಲಿ ಸಂರಕ್ಷಣೆ ಮಾಡಲಾಗಿದೆ. ಹಲವಾರು ವಿಂಟೇಜ್ ಕಾರು ಪ್ರೇಮಿಗಳನ್ನು ಆಕರ್ಷಿಸುವ ಒಂದು ಅನನ್ಯ ಕಾರ್ ಮ್ಯೂಸಿಯಂ ಕೂಡ ಇದೆ.

ಧರ್ಮಸ್ಥಳವು ದಕ್ಷಿಣ ಕನ್ನಡದ ಮಲೆನಾಡು ಪ್ರದೇಶದಲ್ಲಿದೆ.ಜಿಲ್ಲಾ ಕೇಂದ್ರವಾದ ಮಂಗಳೂರಿನಿಂದ ೭೫ ಕಿ.ಮೀ.ದೂರದಲ್ಲಿದೆ.ಮಂಗಳೂರಿಗೆ ದೇಶದ ಎಲ್ಲಾ ಭಾಗಗಳಿಂದ ರಸ್ತೆ,ರೈಲು ಮತ್ತು ವಿಮಾನ ಯಾನ ಸೌಕರ್ಯಗಳಿದ್ದು ಧರ್ಮಸ್ಥಳಕ್ಕೆ ಕೂಡಾ ಉತ್ತಮ ಸಾರಿಗೆ ಸೌಕರ್ಯಗಳಿವೆ. ಧರ್ಮಸ್ಥಳವು ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಉಜಿರೆಯಿಂದ ಕೇವಲ ೯ ಕಿ.ಮೀ ದೂರದಲ್ಲಿದೆ.ಬೆಂಗಳೂರಿನಿಂದ ಶಿರಾಡಿ ಘಾಟಿಯಾಗಿ ರಸ್ತೆಯಲ್ಲಿ ಹಾಗೂ ರೈಲಿನಲ್ಲಿ ಸುಬ್ರಹ್ಮಣ್ಯ ರಸ್ತೆ ನಿಲ್ದಾಣದಿಂದ ಇಲ್ಲಿಗೆ ಆಗಮಿಸಬಹುದಾಗಿದೆ. ಇಲ್ಲಿಂದ ಸಮೀಪದ ಇತರ ಯಾತ್ರಾಕ್ಷೇತ್ರಗಳಾದ ಸುಬ್ರಹ್ಮಣ್ಯ,ಉಡುಪಿ,ಕೊಲ್ಲೂರು,ಕಟೀಲು ಮುಂತಾದೆಡೆಗೆ ಹೇರಳ ಸಾರಿಗೆ ಸೌಕರ್ಯವಿದೆ.

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top