fbpx
ದೇವರು

ಸಂಕಷ್ಟ ಹರ ಚತುರ್ಥಿಯ ಮಹತ್ವವೇನು?

ಸಂಕಷ್ಟ ಹರ ಚತುರ್ಥಿಯ ಮಹತ್ವವೇನು?

ವಕ್ರತುಂಡ ,ಗಜವದನ, ಗಣೇಶ, ವಿಜ್ಞ ನಿವಾರಕನೆಂದೇ ಪ್ರಸಿದ್ದ. ಇಂತಹ ವಿಜ್ಞ ನಿವಾರಕನ ಆರಾಧನೆಗಾಗಿಯೇ ಪ್ರತಿ ತಿಂಗಳಲ್ಲಿ ಒಂದು ದಿನವನ್ನು ವಿಶೇಷವಾಗಿ ನಿಗದಿ ಪಡಿಸಲಾಗಿದ್ದು.ಸಂಕಷ್ಟ ಹರ ಚತುರ್ಥಿ ಎಂದೇ ಹೆಚ್ಚು ಚಿರ ಪರಿಚಿತ.

ಪ್ರತಿ ತಿಂಗಳು ಕೃಷ್ಣ ಪಕ್ಷದ ನಾಲ್ಕನೇಯ ದಿನವನ್ನು  ಚತುರ್ಥಿಯೆಂದು ಅಂದರೆ ಸಂಕಷ್ಟ ಹರ ಚತುರ್ಥಿ ಎಂದು ಆಚರಿಸಲಾಗುತ್ತದೆ.ಸಂಕಷ್ಟ ಹರ ಚತುರ್ಥಿಯ ಮತ್ತೊಂದು ವಿಶೇಷವೇನೆಂದರೆ ಮಂಗಳವಾರದಂದು ಸಂಕಷ್ಟ ಹರ ಚತುರ್ಥಿ ಬಂದರೆ ವ್ರತಕ್ಕೆ ಮತ್ತಷ್ಟು ಹೆಚ್ಚಿನ ಮಹತ್ವವಿದ್ದು, ಅದನ್ನು ಅಂಗಾರಕ,ಕುಜ  (ಮಂಗಳ) ಚತುರ್ಥಿ ಎಂಬ ಹೆಸರಿನಲ್ಲಿ ಆಚರಣೆ ಮಾಡಲಾಗುತ್ತದೆ.

ಸಂಕಷ್ಟ ಹರ ಚತುರ್ಥಿಯ ಮಹತ್ವ.

ಸಂಕಷ್ಟ ಹರ ಚತುರ್ಥಿಯ ಆಚರಣೆಗಳಿಗೆ ಸನಾತನ ಧರ್ಮದಲ್ಲಿ ಎರಡು ಪ್ರಮುಖ ಹಿನ್ನೆಲೆಗಳಿವೆ.ಮೊದಲನೆಯದ್ದು ಚತುರ್ಥಿಯ ದಿನದಂದು ಅಂದರೆ ಯಾವ ದಿನ ಸಂಕಷ್ಟ ಹರ  ಚತುರ್ಥಿಯ ಆಚರಣೆ ನೆಡೆಸಲಾಗುತ್ತದೆಯೋ.ಆ ದಿನದಂದು ಗಣೇಶನನ್ನು ಸರ್ವೋಚ್ಚ ದೇವರು ಎಂದು ಘೋಷಿಸಲಾಯಿತು ಎಂಬುದು ಒಂದು  ನಂಬಿಕೆಯಾದರೆ, ಈ ದಿನದಂದು ಗಣೇಶ ಸ್ವತಃ  ಧರೆಗಿಳಿದು ಭಕ್ತರ ಪ್ರಾರ್ಥನೆಗಳನ್ನು ಆಲಿಸುತ್ತಾನೆ.ಆದ್ದರಿಂದ ಚತುರ್ಥಿಯ ದಿನದಂದು ಪ್ರಾರ್ಥಿಸುವವರ ಸಂಕಷ್ಟಗಳು ಸುಲಭವಾಗಿ ಬಗೆಹರಿಯುತ್ತದೆ ಎಂಬುದು ಮತ್ತೊಂದು ನಂಬಿಕೆಯಾಗಿದೆ.

ಆಚರಣೆ ಹೇಗೆ?

ಸಾಧ್ಯವಾದಲ್ಲಿ ಉಪವಾಸ ಮಾಡಬಹುದು.ಸಂಜೆಯ ಸಮಯದಲ್ಲಿ ಸ್ನಾನ ಮಾಡಿ ಗಣಪತಿಯ ಪೂಜೆ ಮಾಡಬೇಕು.ಪೂಜೆಯ ನಂತರ ರಾತ್ರಿ ಚಂದ್ರ ದರ್ಶನ ಮಾಡಿ ಆರ್ಘ್ಯವನ್ನು ಕೊಟ್ಟು,ಹೂವು ಅಕ್ಷತೆಗಳನ್ನು ಸಲ್ಲಿಸಿ ನಮಸ್ಕರಿಸಬೇಕು.

ಪೂಜೆ ಸಮಾಪ್ತಿಯಾದ ನಂತರ ಕೊನೆಗೆ ಗಣಪತಿಗೆ ನೈವೇದ್ಯವನ್ನು ಅರ್ಪಿಸಿ ಭೋಜನ ಮಾಡಬೇಕು.ಈ ರೀತಿ ಸಂಕಷ್ಟ ಚತುರ್ಥಿಯನ್ನು ಆಚರಿಸುವುದರಿಂದ ವಿಜ್ಞಗಳು ದೂರವಾಗಿ, ಮನಸ್ಸಿನ ಇಚ್ಛೆಗಳು ಈಡೇರಿ ಸಮೃದ್ಧಿ ಹೆಚ್ಚುತ್ತದೆ ಎಂಬ ನಂಬಿಕೆ ಇದೆ.

ಈ ವರ್ಷದ ಉಳಿದ 6 ತಿಂಗಳಲ್ಲಿ ಬರುವ ಸಂಕಷ್ಟ ಹರ  ಚತುರ್ಥಿಯ ದಿನಗಳು ಹೀಗಿವೆ.

ಜುಲೈ-13 ಗುರುವಾರ.

ಆಗಸ್ಟ್-11 ಶುಕ್ರವಾರ

ಸೆಪ್ಟೆಂಬರ್-10 ಭಾನುವಾರ.

ಅಕ್ಟೋಬರ್-09  ಸೋಮವಾರ.

ನವೆಂಬರ್-7 ಮಂಗಳವಾರ (ಶ್ರೇಷ್ಠ).

ಡಿಸೆಂಬರ್-7 ಗುರುವಾರ.

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top