fbpx
ಮಾಹಿತಿ

15 ದಿನಗಳೊಳಗೆ ಎಲ್ಲಾ ಅಂಗಡಿಗಳು ಕಡ್ಡಾಯವಾಗಿ ಕನ್ನಡ ಬೋರ್ಡ್ ಹಾಕಬೇಕು.

15 ದಿನಗಳೊಳಗೆ ಎಲ್ಲಾ ಅಂಗಡಿಗಳು ಕಡ್ಡಾಯವಾಗಿ ಕನ್ನಡ ನಾಮಫಲಕವನ್ನು ಹಾಕಬೇಕು.

 

ಅಂಗಡಿ ಮತ್ತಿತರ ವಾಣಿಜ್ಯ ಸಂಸ್ಥೆಗಳ ನಾಮಫಲಕಗಳಲ್ಲಿ ಕನ್ನಡ ಬಳಸುವುದನ್ನು ಕಡ್ಡಾಯ ಮಾಡಿ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿತ್ತು. ಆದ್ರೆ ಈ ನಿಯಮವನ್ನು ಕೆಲವರು ಪಾಲಿಸುತ್ತಿರಲಿಲ್ಲ. ಈಗ ವ್ಯಾಪಾರ ಮತ್ತು ವಾಣಿಜ್ಯ ಮಳಿಗೆಗಳಲ್ಲಿ ಕನ್ನಡ ನಾಮಫಲಕವನ್ನು15 ದಿನಗಲೋಳಗಾಗಿ ಕಡ್ಡಾಯವಾಗಿ ಅಳವಡಿಸಬೇಕೆಂದು ಸರಕಾರ ಆದೇಶ ಹೊರಡಿಸಿದೆ.ಕನ್ನಡ ಅಭಿವೃದ್ಧಿ ಪ್ರಾಧಿಕಾರ ಚುರುಕು ಮುಟ್ಟಿಸಿದ ಬೆನ್ನಲ್ಲೇ ಎಚ್ಚೆತ್ತುಕೊಂಡ ಬಿಬಿಎಂಪಿ, ನಗರದ ಎಲ್ಲ ಅಂಗಡಿಮುಂಗಟ್ಟು, ಶಾಪಿಂಗ್ ಮಾಲ್ ಗಳು, ನಾಮಫಲಕ ಕನ್ನಡದಲ್ಲಿ ಬರೆಸಲು ಮಾಲೀಕರಿಗೆ 15 ದಿನಗಳ ಗಡುವು ನೀಡಿದೆ.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಎಸ್‌.ಜಿ.ಸಿದ್ಧರಾಮಯ್ಯ ಅವರು, ಆಡಳಿತದಲ್ಲಿ ಕನ್ನಡ ಸಂಪೂರ್ಣ ಅನುಷ್ಠಾನಗೊಳಿಸುವಂತೆ ಬಿಬಿಎಂಪಿ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.

ಈ ಕುರಿತು ಬಿಬಿಎಂಪಿ ಆಯುಕ್ತರಾದ ಏನ್.ಮಂಜುನಾಥ್ ಪ್ರಸಾದ್ ರವರು ‘ನಗರದ ಎಲ್ಲ ಅಂಗಡಿ, ಶಾಪಿಂಗ್‌ ಮಾಲ್‌, ವಾಣಿಜ್ಯ ಕಟ್ಟಡಗಳು ಕಡ್ಡಾಯವಾಗಿ ಕನ್ನಡದಲ್ಲಿ ನಾಮಫಲಕವನ್ನು ಅಳವಡಿಸಬೇಕು. ನಾಮಫಲಕದಲ್ಲಿ ಶೇ 60%ರಷ್ಟು ಕನ್ನಡಕ್ಕೆ ಆದ್ಯತೆ ಇರಬೇಕು. ಶೇ 40%ರಷ್ಟು ಅನ್ಯ ಭಾಷೆ ಬಳಸಬಹುದು. 15 ದಿನಗಳೊಳಗೆ ಆದೇಶ ಪಾಲಿಸದಿದ್ದರೆ ವಾಣಿಜ್ಯ ಪರವಾನಗಿ ರದ್ದುಪಡಿಸಲಾಗುತ್ತದೆ ’ ಎಂದು ತಿಳಿಸಿದ್ದಾರೆ.

ಬಿಡಿಎ(ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ) ವಿರುದ್ಧವೂ ಕಿಡಿ:
ಬಿಡಿಎ(ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ)  ಯಾ ಅಧಿಕೃತ ವೆಬ್‌ಸೈಟ್‌ ನಲ್ಲಿ ಮುಖಪುಟದಲ್ಲಿ ಇಂಗ್ಲಿಷ್‌ಗೆಆದ್ಯತೆ ಕೊಟ್ಟಿರುವುದಕ್ಕೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.15 ದಿನಗಳಲ್ಲಿ ಈ ತಪ್ಪನ್ನು ಸರಿಪಡಿಸಿ ವೆಬ್‌ಸೈಟ್‌ ಪೂರ್ಣ ಕನ್ನಡ ಭಾಷೆಯಲ್ಲಿರಬೇಕೆಂದು ಬಿಡಿಎ ಕಾರ್ಯದರ್ಶಿಗೆ ಸೂಚಿಸಿದರು.ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ನೀಡುವುದಾಗಿ ಹೇಳಿ ನಿವೇಶನ ಪಡೆದು ಇಂಗ್ಲಿಷ್‌ ಮಾಧ್ಯಮದಲ್ಲಿ ಶಾಲೆ ನಡೆಸುತ್ತಿರುವ ಶಿಕ್ಷಣ ಸಂಸ್ಥೆಗಳ ಲೈಸೆನ್ಸ್ ಅನ್ನು ಕ್ಯಾನ್ಸಲ್ ಮಾಡುವಂತೆ ಬಿಡಿಎ ಆಯುಕ್ತರಿಗೆ ಸೂಚನೆ ನೀಡಿದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

4 Comments

4 Comments

Leave a Reply

Your email address will not be published. Required fields are marked *

To Top