fbpx
ಉಪಯುಕ್ತ ಮಾಹಿತಿ

ಹಿಂದುಳಿದ ವರ್ಗದ(OBC) ಜನಾಂಗದವರಿಗೆ ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಈ ಹೊಸ ಯೋಜನೆಗಳ ಸೌಲಭ್ಯಗಳನ್ನು ಪಡೆದುಕೊಳ್ಳಿ…

ಹಿಂದುಳಿದ ವರ್ಗದ(OBC) ಜನಾಂಗದವರಿಗೆ ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಈ ಹೊಸ ಯೋಜನೆಗಳ ಸೌಲಭ್ಯಗಳನ್ನು ಪಡೆದುಕೊಳ್ಳಿ…

ರಾಜ್ಯ ಸರ್ಕಾರ 2017-18ನೇ ಸಾಲಿನಲ್ಲಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ವತಿಯಿಂದ ಹಿಂದುಳಿದ ವರ್ಗದ(OBC) ಜನಾಂಗದವರಿಗೆ ಅನುಷ್ಠನಗೊಳಿಸಿರುವ ಹಲವು ಉತ್ತಮ ಯೋಜನೆಗಳಲ್ಲಿ ಇವು ತುಂಬಾ ಪ್ರಮುಖವಾಗಿದೆ. ಹಾಗಿದ್ದರೆ ಈ ಯೋಜನೆಗಳ ಸೌಲಭ್ಯವನ್ನು ಪಡೆದುಕೊಳ್ಳುವುದು ಹೇಗೆ, ಸಾಮಾನ್ಯ ಅರ್ಹತೆಗಳೇನು, ಕುರಿತು ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ನೋಡಿ.

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದಿಂದ ಹಿಂದುಳಿದ ವರ್ಗಗಳ ಜನರ ಆರ್ಥಿಕ ಅಭಿವೃದ್ಧಿಗಾಗಿ 2017-18ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಕೆಳಕಂಡ ಯೋಜನೆಗಳಲ್ಲಿ ಸೌಲಭ್ಯ ಪಡೆಯ ಬಯಸುವವರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನಿಗದಿತ ಅರ್ಜಿ ನಮೂನೆಗಳನ್ನು ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಛೇರಿಯಲ್ಲಿ ಅಥವಾ ಆಯಾ ತಾಲ್ಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ವಿಸ್ತರಣಾಧಿಕಾರಿಗಳ ಕಛೇರಿಯಲ್ಲಿ ಅರ್ಜಿ ಪಡೆಯಬಹುದಾಗಿದೆ.ಒಂದು ಬಾರಿ ನಿಗಮದ ಯಾವುದಾದರು ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

2017-18 ಸಾಲಿನಲ್ಲಿಹಿಂದುಳಿದ ವರ್ಗದ(OBC) ಜನಾಂಗದವರಿಗೆ ಅನುಷ್ಠನಗೊಳಿಸಿರುವ ಹೊಸ ಯೋಜನೆಗಳೆಂದರೆ.

1.ಚೈತನ್ಯ ಸಬ್ಸಿಡಿ ಕಂ ಸಾಫ್ಟ್ ಲೋನ್ ಯೋಜನೆ.
2.ಅರಿವು ಶೆಕ್ಷಣಿಕ ಸಾಲ ಯೋಜನೆ.
3.ಗಂಗಾಕಲ್ಯಾಣ ನೀರಾವರಿ ಯೋಜನೆ
4.ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಬಡ್ಡಿರಹಿತ ಸಾಲ ಯೋಜನೆ
5 .ಡಿ.ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ:
6​.ಸಾಂಪ್ರದಾಯಿಕ ಕುಶಲಕರ್ಮಿಗಳು ಮತ್ತು ವೃತ್ತಿ ಕುಸುಬುದಾರರಿಗೆ ಸಾಲ ಮತ್ತು ಸಹಾಯಧನ
7.ಕರ್ನಾಟಕ ಅಲೆಮಾರಿ ಅರೆಅಲೆಮಾರಿ ಅಭಿವೃದ್ಧಿ ಮಂಡಳಿ ಒದಗಿಸುವ ಮೊತ್ತದಿಂದ ಅನುಷ್ಟಾನ ಗೊಳಿಸುವ ಕಾರ್ಯಕ್ರಮಗಳು

ನಿಗಮದ ಯೋಜನೆಗಳಲ್ಲಿ ಸೌಲಭ್ಯ ಪಡೆಯಲು ಹೊಂದಿರಬೇಕಾದ ಸಾಮಾನ್ಯ ಆರ್ಹತೆಗಳು
(1) ಅರ್ಜಿದಾರರು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ ಸೇರಿದವರಾಗಿರಬೇಕು.(ವಿಶ್ವಕರ್ಮ ಅದರ ಉಪ ಸಮುದಾಯಗಳನ್ನು ಮತ್ತು ಮತಿಯ ಅಲ್ಪಸಂಖ್ಯಾತರನ್ನು ಹೊರತುಪಡಿಸಿ)
(2) ರಾಜ್ಯ ಸರ್ಕಾರದ ಯೋಜನೆಗಳಿಗೆ ಅವರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ.40,000/-ಗಳು ಪಟ್ಟಣ ಪ್ರದೇಶದವರಿಗೆ ರೂ.55,000/-ಗಳ ಒಳಗಿರಬೇಕು,
(3) ರಾಷ್ಟ್ರೀಯ ಹಿಂದುಳಿದ ವರ್ಗಗಳ ಹಣಕಾಸು ಮತ್ತು ಅಭಿವೃದ್ಧಿ ನಿಗಮದ ಯೋಜನೆಗಳಿಗೆ ಅರ್ಜಿದಾರರ ಮತ್ತು ಅವರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ.98,000/-ಗಳು ಪಟ್ಟಣ ಪ್ರದೇಶದವರಿಗೆ ರೂ.1,20,000/-ಗಳು.
(4) ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ಮಿತಿಯಲ್ಲಿರಬೇಕು.
(5) ಅರ್ಜಿದಾರರು ಆಧಾರ್ ಸಂಖ್ಯೆ ಹೊಂದಿರಬೇಕು. (6)ಅರ್ಜಿದಾರರ ಐ.ಎಫ್.ಸಿ. ಕೋಡ್ ಹೊಂದಿರುವ ರಾಷ್ಟ್ರೀಕೃತ/ಗ್ರಾಮೀಣ ಬ್ಯಾಂಕ್ ಖಾತೆಗಳನ್ನು ಹೊಂದಿರಬೇಕು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

1 Comment

1 Comment

Leave a Reply

Your email address will not be published. Required fields are marked *

To Top