fbpx
ಕರ್ನಾಟಕ

ಡಿಕೆಶಿ ಮನೆ ಮೇಲೆ ಐಟಿ ದಾಳಿ ನಡೆಸಲು ಮುಖ್ಯ ಕಾರಣ ಬಹಿರಂಗ ???

ಡಿಕೆಶಿ ಮನೆ ಮೇಲೆ ಐಟಿ ದಾಳಿ ನಡೆಸಲು ಮುಖ್ಯ ಕಾರಣ???

ಇಂಧನ ಸಚಿವ ಡಿ.ಕೆ ಶಿವಕುಮಾರ್‌ ಅವರ ನಿವಾಸ ಹಾಗೂ ಗುಜರಾತ್ ಕಾಂಗ್ರೆಸ್‌ ಶಾಸಕರು ವಾಸ್ತವ್ಯ ಹೂಡಿರುವ ಈಗಲ್‌ಟನ್‌ ಗಾಲ್ಫ್‌ ರೆಸಾರ್ಟ್‌ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ಇವತ್ತು ಬೆಳಿಗ್ಗೆ ದಾಳಿ ನಡೆಸಿದ್ದಾರೆ.


ದೆಹಲಿಯ ನಿವಾಸ ಮತ್ತು ಬೆಂಗಳೂರಿನ ಸದಾಶಿವ ನಗರದಲ್ಲಿರುವ ಡಿ.ಕೆ ಶಿವಕುಮಾರ್ ನಿವಾಸದ ಮೇಲೆ ಇಂದು ಬೆಳಗ್ಗೆ 7 ಗಂಟೆಗೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.ಡಿ.ಕೆಶಿ ಸಹೋದರ ಸಂಸದ ಡಿ.ಕೆ ಸುರೇಶ್ ಮನೆ ಸೇರಿದಂತೆ ಸುಮಾರು 39 ಕಡೆಗಳಲ್ಲಿ ಐಟಿ ಇಲಾಖೆ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಇದೇವೇಳೆ ಕಳೆದ ಕೆಲವು ದಿನಗಳಿಂದ ಗುಜರಾತ್ ನ ಕಾಂಗ್ರೆಸ್ ಶಾಸಕರು ವಾಸ್ತವ್ಯ ಹೂಡಿದ್ದ ಈಗಲ್ ಟನ್ ರೆಸಾರ್ಟ್ ಮೇಲೂ ಐಟಿ ದಾಳಿ ನಡೆದಿದೆ.

ಸದ್ಯ ಬಂದಿರುವ ಮಾಹಿತಿಯ ಪ್ರಕಾರ ಡಿಕೆಶಿ ಮನೆ ದಾಳಿ ನಡೆಸಲು 3 ದಿನದ ಹಿಂದೆಯೇ ಪ್ಲಾನ್ ಮಾಡಲಾಗಿತ್ತು.ಇಂದು ಗುಜರಾತ್ ಕಾಂಗ್ರೆಸ್ ಶಾಸಕರಿಗೆ ಇವತ್ತು ಗಿಫ್ಟ್ ಕೊಡುವ ಕಾರ್ಯಕ್ರಮ ನಿಗದಿಯಾಗಿತ್ತು. ಡಿಕೆಶಿ ಯಾವ ಗಿಫ್ಟ್ ನೀಡಲಿದ್ದರು ಎಂಬ ವಿಚಾರ ಯಾರಿಗೂ ತಿಳಿದಿರಲಿಲ್ಲವಂತೆ. ಹಾಗಾಗಿ ಡಿಕೆಶಿ ಮನೆಮೇಲೆ ಐಟಿ ದಾಳಿ ನಡೆಸಲಾಗಿದೆ ಎನ್ನಲಾಗುತ್ತಿದೆ. ದಾಳಿ ವೇಳೆ ದೆಹಲಿ ನಿವಾಸವೊಂದರಲ್ಲೇ 11 ಕೋಟಿ ರೂ ನಗದು ಪತ್ತೆಯಾಗಿದ್ದು ಇನ್ನು ಪತ್ತೆಯಾಗುವ ನಿರೀಕ್ಷೆಯಿದೆ ಎಂದು ಐಟಿ ಅಧಿಕಾರಿಗಳು ಹೇಳಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top