fbpx
ಕರ್ನಾಟಕ

ಕರ್ನಾಟಕದಿಂದಲೇ ಪ್ರಿಯಾಂಕಾ ಗಾಂಧಿ ರಾಜಕೀಯ ಪ್ರವೇಶ? ಕರ್ನಾಟಕವನ್ನೇ ಆಯ್ಕೆ ಮಾಡಿಕೊಂಡಿದ್ದು ಈ ಕಾರಣಕ್ಕೆ!

ಕರ್ನಾಟಕದಿಂದಲೇ ಪ್ರಿಯಾಂಕಾ ಗಾಂಧಿ ರಾಜಕೀಯ ಪ್ರವೇಶ? ಕರ್ನಾಟಕವನ್ನೇ ಆಯ್ಕೆ ಮಾಡಿಕೊಂಡಿದ್ದು ಈ ಕಾರಣಕ್ಕೆ!

 

 

 

ದೇಶದಲ್ಲಿ ಸೋತು ಸುಣ್ಣವಾಗಿರುವ ಕಾಂಗ್ರೆಸ್ ಪಕ್ಷದ ಪುನಶ್ಚೇತನಕ್ಕೆ ಕರ್ನಾಟಕವನ್ನೇ ಭೂಮಿಕೆ ಮಾಡಿಕೊಳ್ಳಲು ನಿರ್ಧರಿಸಿರುವ ಎಐಸಿಸಿ, ಇಂದಿರಾಗಾಂಧಿ ಹಾಗೂ ಸೋನಿಯಾಗಾಂಧಿಗೆ ರಾಜಕಾರಣದಲ್ಲಿ ಭದ್ರ ಬುನಾದಿ ನೀಡಿದ್ದ ಕರ್ನಾಟಕದಲ್ಲಿ ಪ್ರಿಯಾಂಕ ಗಾಂಧಿ ಅವರನ್ನು ರಾಜಕೀಯ ಪ್ರವೇಶ ಮಾಡಿಸಲು ನಿರ್ಧಾರ ಮಾಡಿದೆ.

 

 

ಮುಂಬರುವ 2019ರ ಲೋಕಸಭೆ ಚುನಾವಣೆಗೆ ಬಿಜೆಪಿ ತಯಾರಿ ನಡೆಸಿದ್ದು, ಪ್ರಧಾನಿ ನರೇಂದ್ರ ಮೋದಿ ರಾಜ್ಯದ ಸಂಸದರ ಸಭೆ ನಡೆಸಿರುವ ಬೆನ್ನಲ್ಲೆ ಕಾಂಗ್ರೆಸ್ ಪಕ್ಷ ಲೋಕಸಭೆ ಚುನಾವಣೆಗೆ ಜೂನಿಯರ್ ಇಂದಿರಾ ಗಾಂಧಿ ಎಂದೇ ಹೆಸರಾಗಿರುವ ಪ್ರಿಯಾಂಕಾ ಗಾಂಧಿಯನ್ನು ಕರ್ನಾಟಕದಿಂದ ಕಣಕ್ಕಿಳಿಸಲು ಮುಂದಾಗಿದೆ ಎಂದು ತಿಳಿದುಬಂದಿದೆ

 

 

ಈ ಹಿಂದೆ ಭಾರೀ ಕುತೂಹಲ ಕೆರಳಿಸಿದ್ದ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಇಂದಿರಾಗಾಂಧಿ ಗೆಲುವು ಸಾಧಿಸಿದ್ದರು. ಮತ್ತು ಬಳ್ಳಾರಿಯಲ್ಲಿ ಸುಷ್ಮಾ ಸ್ವರಾಜ್ ವಿರುದ್ದ ಸೋನಿಯಾ ಗಾಂಧಿ ಸ್ಪರ್ಧಿಸಿದ್ದಾಗ ಸೋನಿಯಾ ಗಾಂಧಿ ಗೆಲುವು ಸಾಧಿಸಿದ್ದರು.ಈ ಎಲ್ಲ ಅಂಶಗಳನ್ನು ಗಮನದಲ್ಲಿಟ್ಟುಕೊಂಡಿರುವ ಕಾಂಗ್ರೆಸ್ ಪಕ್ಷ ಪ್ರಿಯಾಂಕ ಗಾಂಧಿಯವರನ್ನು ಕರ್ನಾಟಕದಿಂದ ಕಣಕ್ಕಿಳಿಸಲು ನಿರ್ಧರಿಸಿದೆ ಎನ್ನಲಾಗಿದೆ.

 

 

ಪ್ರಿಯಾಂಕಾ ಗಾಂಧಿಯವರು ನೋಡುವುದಕ್ಕೆ ಥೇಟ್ ಇಂದಿರಾ ಅವರಂತೆಯೇ ಇದ್ದಾರೆ ಹಾಗು ರಾಹುಲ್‍ಗಿಂತಲೂ ಜನ ಪ್ರಿಯಾಂಕಾ ಅವರನ್ನು ಹೆಚ್ಚು ಇಷ್ಟಪಡುತ್ತಾರೆ. ಹಾಗಾಗಿ ಮುಂಬರುವ ಚುನಾವಣೆಗೆ ಕರ್ನಾಟಕದಿಂದ ಪ್ರಿಯಾಂಕ ಅವರನ್ನು ಕಣಕ್ಕಿಳಿಸುವ ಮೂಲಕ ಕಾಂಗ್ರೆಸ್ ವರ್ಚಸ್ಸು ಹೆಚ್ಚಿಸುವ ಚಿಂತನೆ ಪಕ್ಷದಲ್ಲಿ ನಡೆದಿದೆ.ಅಲ್ಲದೆ ಹಲವಾರು ಬಾರಿ ಕಾಂಗ್ರೆಸ್ ಪಕ್ಷದ ಹಲವು ಪ್ರಯೋಗಗಳಿಗೆ ಕರ್ನಾಟಕ ಭೂಮಿಕೆಯಾಗಿ ಯಶಸ್ವಿಯಾಗಿದೆ. ಈಗ ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಪಕ್ಷವನ್ನು ಪುನಶ್ಚೇತನಗೊಳಿಸಲು, ಪಕ್ಷ ಬಲಿಷ್ಠವಾಗಿರುವ ಕರ್ನಾಟಕದಲ್ಲಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.

 

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top