fbpx
ಕರ್ನಾಟಕ

ಯೋಗಿ ಆದಿತ್ಯನಾಥ್ ರಂತೆ ಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮೀಜಿಯವರನ್ನು ಕರ್ನಾಟಕದ ಮುಖ್ಯ ಮಂತ್ರಿ ಮಾಡಲು ಅಮಿತ್ ಷಾ ಸ್ಕೆಚ್.

ಯೋಗಿ ಆದಿತ್ಯನಾಥ್ ರಂತೆ ಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮೀಜಿಯವರನ್ನು ಕರ್ನಾಟಕದ ಮುಖ್ಯ ಮಂತ್ರಿ ಮಾಡಲು ಅಮಿತ್ ಷಾ ಸ್ಕೆಚ್.

 

 

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿರುವ ಕಾಂಗ್ರೆಸ್ ಪಕ್ಷದ ಸರ್ಕಾರವನ್ನು ಕಿತ್ತೊಗೆದು ಬಿಜೆಪಿ ಸರ್ಕಾರವನ್ನು ಮತ್ತೆ ಅಧಿಕಾರಕ್ಕೆ ತರಬೇಕೆಂದು ಸಂಕಲ್ಪ ತೊಟ್ಟಿರುವ ಬಿಜೆಪಿಯ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಕರ್ನಾಟಕ ರಾಜ್ಯಕ್ಕೆ ಚುನಾವಣಾ ಕಾರ್ಯತಂತ್ರಗಳನ್ನು ರೂಪಿಸುವ ಉದ್ದೇಶದಿಂದ ಬರಲು ಭೂಮಿಕೆ ಸಜ್ಜಾಗಿದೆ.

 

 

ಇದೇ ತಿಂಗಳ ಹನ್ನೆರಡನೇ ತಾರೀಕಿನಿಂದ ಬೆಂಗಳೂರಿನಲ್ಲಿ ಒಟ್ಟು ಮೂರು ದಿನಗಳ ಕಾಲ ವಾಸ್ತವ್ಯ ಹೂಡಲಿರುವ ಅಮಿತ್ ಶಾ ಅವರು ಬರೋಬ್ಬರಿ ಇಪ್ಪತ್ತೈದು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಈ ವೇಳೆ ಅನೇಕ ಮಠಾಧೀಶರು ಪತ್ರಕರ್ತರು ಹಾಗೂ ರಾಜ್ಯದ ಇನ್ನಿತರ ಪ್ರಮುಖ ವ್ಯಕ್ತಿಗಳನ್ನು ಭೇಟಿಯಾಗಳಿದ್ದಾರೆ.
ಆಗಸ್ಟ್ ಹದಿಮೂರನೇ ತಾರೀಕಿನಂದು ರಾಜಕೀಯ ವ್ಯವಹಾರಗಳ ಸಮಿತಿ ಸಭೆ ನಂತರ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಲಿದ್ದಾರೆ.ಭೇಟಿ ವೇಳೆ ಅನೇಕ ರಾಜಕೀಯ ವಿಚಾರಗಳನ್ನುಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮಿಯವರ ಜೊತೆ ಚರ್ಚಿಸಲಿದ್ದಾರೆ. ಅಮಿತ್ ಷಾ ಅವರು ಈ ಚರ್ಚೆ ನಡೆಸುತ್ತಿರುವುದು ಅನೇಕ ಅನುಮಾನಗಳಿಗೆ ಎಡೆ ಮಾಡಿಕೊಡುತ್ತಿವೆ.

 

 

ಯೋಗಿ ಆದಿತ್ಯನಾಥ್ ಅವರು ಉತ್ತರಪ್ರದೇಶದಮುಖ್ಯಮಂತ್ರಿಯಾದಂತೆ ಕರ್ನಾಟಕದಲ್ಲಿ ಶ್ರೀ ನಿರ್ಮಲಾನಂದ ಸ್ವಾಮೀಜಿಗಳನ್ನು ಮುಖ್ಯಮಂತ್ರಿಯನ್ನಾಗಿ ಮಾಡುವ ಸ್ಕೆಚ್ ಅಮಿತ್ ಶಾ ಹಾಕುತ್ತಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿದೆ.

 

 

ಈ ಹಿಂದೆ ಪ್ರದೇಶದ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ಅವರು ಪ್ರಮಾಣ ಸ್ವೀಕರಿಸುವ ಕಾರ್ಯಕ್ರಮಕ್ಕೆ ಆದಿಚುಂಚನಗಿರಿ ಮಠದ ಸ್ವಾಮೀಜಿಯವರನ್ನು ಆಹ್ವಾನಿಸಲಾಗಿತ್ತು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top