fbpx
ದೇವರು

ಗಣೇಶನನ್ನು ಹಿಂದೆಯಿಂದ ಏಕೆ ದರ್ಶನ ಮಾಡಬಾರದು ಗೊತ್ತಾ?

ಗಣೇಶನನ್ನು ಹಿಂಭಾಗದಿಂದ ದರ್ಶನ ಮಾಡಬಾರುದು ಯಾಕೆ?

 

 

 

 

 

ಶ್ರೀ ಗಣೇಶ ಹಿಂದೂ ಧರ್ಮದ ಪ್ರಮುಖ ದೇವತೆಗಳಲ್ಲಿ ಒಬ್ಬ. ನಮ್ಮ ಭಾರತೀಯ ಪರಂಪರೆಯಲ್ಲಿ ಎಲ್ಲಕ್ಕಿಂತಲೂ, ಎಲ್ಲರಿಗಿಂತಲೂ ಮೊದಲ ಪೂಜೆಸುವ ದೇವರು. ಜನಜೀವನದ ಎಲ್ಲ ಶುಭಕಾರ್ಯಗಳಲ್ಲೂ-ವಿದ್ಯಾಭ್ಯಾಸ, ವಿವಾಹ, ಉಪನಯನ, ಗೃಹಪ್ರವೇಶ, ಇತ್ಯಾದಿ-ಮೊದಲ ಪುಜೆಯನ್ನು ಇಂದಿಗೂ ಭಾವುಕರು ಗಣಪತಿಗೆ ಸಲ್ಲಿಸುತ್ತಾರೆ. ನಿತ್ಯ ಆತನ ದರ್ಶನ ಮಾಡುವುದರಿಂದ ಮನಸ್ಸು ಶಾಂತವಾಗಿರುತ್ತದೆ. ಎಲ್ಲ ಕಾರ್ಯಗಳು ಯಶಸ್ವಿಯಾಗಿ ನೆರವೇರುತ್ತವೆ.

ಸಾಮಾನ್ಯವಾಗಿ ನಾವು ಗಣಪತಿಯ ಮೂರ್ತಿಯ ಪೂಜೆಗೆ ಮೊದಲು ಸಗಣಿಯಿಂದ ಮಾಡಿ ಅದರ ಮೇಲೆ ಗರಿಕೆಯನ್ನಿಟ್ಟು ಅದನ್ನು ಪಿಳ್ಳೇರಾಯನೆಂದು ಕರೆದು ಅದಕ್ಕೆ ಪೂಜಿಸುವರು. ಹಾಗೆ ಪೂಜೆ ಮಾಡುವಾಗ ಮತ್ತು ದೇವಸ್ಥಾನದಲ್ಲಿ ಗಣೇಶನ ಹಿಂಬದಿಯನ್ನು ಮಾತ್ರ ನೋಡಬಾರದು ಕಾರಣ ಶಾಸ್ತ್ರಗಳಲ್ಲಿ ಗಣೇಶನ ಹಿಂಭಾಗ ನೋಡುವುದನ್ನು ನಿಷೇಧಿಸಲಾಗಿದೆ ಅಂದರೆ ಗಣೇಶನನ್ನು ಹಿಂಭಾಗದಿಂದ ದರ್ಶನ ಮಾಡಬಾರುದು ಎಂದರ್ಥ.

 

 

 

 

ಗಣೇಶನ ಶರೀರದ ಪ್ರತಿಯೊಂದು ಅಂಗಾಂಗವೂ ತನ್ನದೇ ಆದ ಮೌಲ್ಯ ಮತ್ತು ವೈಶಿಷ್ಟ್ಯಗಳನ್ನು ಹೊಂದಿದೆ. ಆನೆ ತಲೆಯಲ್ಲಿ ನಂಬಿಕೆ, ಬುದ್ಧಿವಂತಿಕೆ ಮತ್ತು ವಿವೇಚನೆ ಅಡಗಿದೆ. ದಂತ, ಸಾಮರ್ಥ್ಯವನ್ನು ಸೂಚಿಸುತ್ತದೆ. ಕಿವಿ ವಿವೇಕದ ಸಂಕೇತ. ಸೊಂಡಿಲು, ಸತ್ಯ ಮತ್ತು ಮಿಥ್ಯೆಗಳ ನಡುವಣ ವ್ಯತ್ಯಾಸವನ್ನು ಸೂಚಿಸುತ್ತದೆ ಹೀಗೆ ಪ್ರತಿಯೊಂದು ಭಾಗದಲ್ಲಿಯೂ ಜೀವನ ಹಾಗೂ ಬ್ರಹ್ಮಾಂಡದ ಅಂಶಗಳು ಅಡಗಿವೆ. ಆದರೆ ಗಣೇಶನ ಹಿಂಬದಿಯನ್ನು ಮಾತ್ರ ನೋಡಬಾರದು.

 

 

 

 

ಕಾರಣ, ಗಣೇಶನ ಹಿಂಭಾಗದಲ್ಲಿ ದಾರಿದ್ರ್ಯ ನೆಲೆಸಿದೆಯಂತೆ. ಗಣೇಶನ ಹಿಂಭಾಗವನ್ನು ದರ್ಶನ ಮಾಡುವ ವ್ಯಕ್ತಿ ಎಂತಹ ಶ್ರೀಮಂತನಾಗಿರಲಿ ಆತನಿಗೆ ಬಡತನ ಬರಲಿದೆಯಂತೆ. ಹಾಗಾಗಿ ಗಣೇಶನ ಹಿಂಭಾಗವನ್ನು ನೋಡುವಂತಿಲ್ಲ. ಗೊತ್ತಿಲ್ಲದೆ ನೋಡಿದಲ್ಲಿ ಗಣೇಶನಿಗೆ ಕ್ಷಮೆ ಕೋರಿ, ಪ್ರಾರ್ಥನೆ ಮಾಡಿದ್ರೆ ಎಲ್ಲ ಪಾಪಗಳು ಪರಿಹಾರವಾಗಲಿದೆ ಎಂದು ಶಾಸ್ತ್ರದಲ್ಲಿ ಹೇಳಲಾಗಿದೆ.

ಅಷ್ಟೇ ಅಲ್ಲ, ಶಿವಪುರಾಣದಲ್ಲಿ ಹೇಳಿರುವಂತೆ ಗಣಪತಿಯನ್ನು ತುಳಸೀ ದಳದಲ್ಲಿ ಪೂಜಿಸಬಾರದಂತೆ. ಏಕೆಂದರೆ ತುಳಸಿಯ ದರ್ಶನ ಮತ್ತು ಗಂಧಗಳು ಗಣೇಶ ದೇವರಿಗೆ ಸಂಬಂಧಪಟ್ಟ ಒಳಕೇಂದ್ರಗಳನ್ನು ಮುಚ್ಚುತ್ತವೆ. ಕೇತಕೀ ಪುಷ್ಪದ ಸ್ಪರ್ಶವು ಶಿವನ ದರ್ಶನಕ್ಕೆ ಸಂಬಂಧಪಟ್ಟ ಕೇಂದ್ರಗಳ ಪ್ರಭಾವ ವನ್ನು ಕಡಿಮೆ ಮಾಡುತ್ತದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top