fbpx
ಉದ್ಯೋಗ

ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಹತ್ತು ಸಾವಿರ ಶಾಲಾ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ

ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಸುಮಾರು 10,000 ಶಿಕ್ಷಕರ ನೇಮಕಕ್ಕೆ ಚಾಲನೆ ನೀಡಲಾಗಿದೆ.

 

ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಜಿಲ್ಲಾ ಮಟ್ಟದ ಸಂಯುಕ್ತ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರ ಮತ್ತು ಶಿಕ್ಷಕಿ ವೃಂದದ ಹುದ್ದೆಗೆ ನೇಮಕಾತಿ ಮಾಡಿಕೊಳ್ಳಲಾಗುವುದು.

 

ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೆಪ್ಟಂಬರ್ 21 ಕೊನೆಯ ದಿನವಾಗಿದೆ. ಅಕ್ಟೋಬರ್ 28 ಮತ್ತು 29 ರಂದು ಆಯಾ ಶೈಕ್ಷಣಿಕ ಜಿಲ್ಲೆಯ ವ್ಯಾಪ್ತಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ.

 

ಪರಿಶಿಷ್ಟ ಜಾತಿ, ವರ್ಗ, ಪ್ರವರ್ಗ 1 ರ ಅಭ್ಯರ್ಥಿಗಳಿಗೆ 1 ಹುದ್ದೆಗೆ 250 ರೂ., 2 ಹುದ್ದೆಗೆ 400 ರೂ., 3 ಹುದ್ದೆಗಳಿಗೆ 550 ರೂ.

 

ಶುಲ್ಕ ನಿಗದಿಪಡಿಸಲಾಗಿದೆ.

ಒಂದಕ್ಕಿಂತ ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಸುವಾಗ ಹೆಚ್ಚುವರಿ ಪರೀಕ್ಷಾ ಶುಲ್ಕವನ್ನು ಪಾವತಿಸಬೇಕು. ಇತರೆ ವರ್ಗದ ಅಭ್ಯರ್ಥಿಗಳಿಗೆ 500 ರೂ., 750 ರೂ., 1000 ರೂ. ಶುಲ್ಕ ಕಟ್ಟಬೇಕಿದೆ.

 

ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 40 ವರ್ಷ, 2 ಎ, 2 ಬಿ, 3 ಎ, 3 ಬಿ ವರ್ಗದವರಿಗೆ 43 ವರ್ಷ, ಪರಿಶಿಷ್ಟ ಜಾತಿ, ಪಂಗಡ ಹಾಗೂ ವರ್ಗ 1 ಅಭ್ಯರ್ಥಿಗಳು, ವಿಶೇಷ ಚೇತನ ಅಭ್ಯರ್ಥಿಗಳಿಗೆ 45 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21/09/2017

ಮಾಹಿತಿ ಮತ್ತು ಅರ್ಜಿ ಸಲ್ಲಿಕೆಗೆ http://schooleducation.kar.nic.in ವೆಬ್ ಸೈಟ್ ಗಮನಿಸಬಹುದಾಗಿದೆ.

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top