fbpx
ಧರ್ಮ

“ನಾನು ಬದುಕಿರುವವರೆಗೂ ಹಿಂದೂ ರಾಷ್ಟ್ರವಾಗಲು ಬಿಡೋದಿಲ್ಲ ” HD ದೇವೇಗೌಡ ಗುಡುಗು.

“ನಾನು ಬದುಕಿರುವವರೆಗೂ ಹಿಂದೂ ರಾಷ್ಟ್ರವಾಗಲು ಬಿಡೋದಿಲ್ಲ ” HD ದೇವೇಗೌಡ ಗುಡುಗು.

 

 

“ಪ್ರಧಾನಿ ನರೇಂದ್ರ ಮೋದಿ ಅವರು ಭಾರತವನ್ನು ಹಿಂದೂ ದೇಶವನ್ನವಾಗಿ ಮಾಡಲು ಹೊರಟಿದ್ದಾರೆ. ಆದರೆ ನನ್ನ ಜನ್ಮ ಇರೋವವರೆಗೆ ನನ್ನ ಕರ್ನಾಟಕವನ್ನು ಹಿಂದೂ ರಾಜ್ಯವನ್ನಾಗಿ ಮಾಡಲು ಬಿಡುವುದಿಲ್ಲ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ್ದಾರೆ..

 

 

ಇಂದು ಕಲಬುರಗಿ ಜಿಲ್ಲೆಯ ಶಹಾಪುರದಲ್ಲಿ ಜೆಡಿಎಸ್ ಸಮಾವೇಶದಲ್ಲಿ ಭಾಗವಹಿಸಿದ್ದ ಜೆಡಿಎಸ್ ಕಾರ್ಯಕತರನ್ನು ಉದ್ದೇಶಿಸಿ HD ದೇವೇಗೌಡರು, ರಾಜ್ಯದಲ್ಲಿ ಜನತೆ ಸುಖ ಶಾಂತಿಯಿಂದ ನೆಮ್ಮದಿಯ ಬದುಕು ಸಾಗಿಸಲು ಬಿಡಿ ಎಂದು ಬಿಜೆಪಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೇ ಇದೆ ವೇಳೆ ಜಾತ್ಯಾತೀತ ಶಕ್ತಿಗಳು ಒಂದಾಗಬೇಕು ಎಂದು ಕರೆ ನೀಡಿದ್ದಾರೆ.

 

 

ಕೇಂದ್ರ ಸಚಿವ ಅನಂತ ಕುಮಾರ್ ಹೆಗಡೆ ಅವರ ಹೆಸರನ್ನು ನೇರವಾಗಿ ಹೇಳದೆ ತಿರುಗೇಟು ನೀಡಿದ ದೇವೇಗೌಡರು ಕಾರವಾರದ ವ್ಯಕ್ತಿಯೊಬ್ಬರು ಇತ್ತೀಚೆಗೆ ಕನ್ನಡ ಖಾಸಗಿ ನ್ಯೂಸ್ ಚಾನೆಲ್ ಗೆ ನೀಡಿದ ಸಂದರ್ಶನದಲ್ಲಿ ಬೇರೆ ಧರ್ಮದ ಕುರಿತು ದ್ವೇಷದ ಮಾತುಗಳನ್ನು ಹೇಳಿದ್ದಾರೆ. ಅಂದರೆ ಪ್ರಧಾನಿ ಮೋದಿ ಅವರು ಭಾರತ ದೇಶವನ್ನು ಹಿಂದೂ ರಾಷ್ಟ್ರವನ್ನಾಗಿಸಲು ಹೊರಟಿದ್ದಾರೆಯೇ? ಎಂದು ಪ್ರಶ್ನಿಸಿ,, ನಾನು ಬದುಕಿರುವವರೆಗೂ ಹಿಂದೂ ರಾಷ್ಟ್ರವಾಗಲು ಬಿಡುವುದಿಲ್ಲ ಭಾರತ ಎಲ್ಲಾ ಧರ್ಮದ ಸಮುದಾಯಗಳಿಗೆ ಸೇರಿದ ದೇಶವಾಗಿದೆ. ಇಲ್ಲಿ ಎಲ್ಲರೂ ಶಾಂತಿ ಮತ್ತು ಸೌಹಾರ್ದತೆಯಿಂದ ಬಾಳ್ವೆ ನಾಡಿಸಬೇಕು ಎಂದು ಹೇಳಿದ್ದಾರೆ..

 

 

ದೇಶದಲ್ಲಿ ಸಾವಿರಾರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೂ ರೈತರ ಸಾಲವನ್ನುಮನ್ನಾ ಮಾಡಲು ಕೇಂದ್ರ ಸರ್ಕಾರ ಮನಸ್ಸು ಮಾಡುತ್ತಿಲ್ಲ ನಾನು ಪ್ರಧಾನಿಯಾಗಿದ್ದ ಅವಧಿಯಲ್ಲಿ ಒಬ್ಬ ರೈತನೂ ಕೂಡ ಆತ್ಮಹತ್ಯೆ ಮಾಡಿಕೊಂಡಿರಲಿಲ್ಲ. ಈ ಸರ್ಕಾರಗಳಿಗೆ ನಾಚಿಕೆಯಾಗಬೇಕು ಎಂದು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top