ತಿಂಡಿ ತೀರ್ಥ

ದಸರಾ ಹಬ್ಬದ ವಿಶೇಷ ಹಯಗ್ರೀವ ರೆಸಿಪಿ ಮಾಡುವ ವಿಧಾನ

👇 ನಮ್ಮ ಪುಟ ಲೈಕ್ 👍 ಮಾಡಿ 👇👇

👆ನಮ್ಮ ಪೇಜ್ ಲೈಕ್ 👍 ಮಾಡಲು ಮರಿಬೇಡಿ ಫ್ರೆಂಡ್ಸ್ 👆

ದಸರಾ ಹಬ್ಬದ ವಿಶೇಷ   ಹಯಗ್ರೀವ ರೆಸಿಪಿ ಮಾಡುವ ವಿಧಾನ

ಹಯಗ್ರೀವ ಮಾಡಲು ಬೇಕಾಗುವ ಸಾಮಗ್ರಿಗಳು:

*ಕಡಲೇ ಬೇಳೆ -1 ಕಪ್.

*ನೀರು -3 ಕಪ್.

*ಬೆಲ್ಲ -2 ಕಪ್ .

*ಗಸಗಸೆ -1, 1/2 ಟೇಬಲ್ ಚಮಚ.

*ತುಪ್ಪ – 9 ಟೇಬಲ್ ಚಮಚ.

*ಒಣದ್ರಾಕ್ಷಿ -2 ಟೇಬಲ್ ಚಮಚ.

*ತುರಿದ ಒಣ ಕೊಬ್ಬರಿ -3/4 ಬೌಲ್.

*ಕತ್ತರಿಸಿಕೊಂಡ ಗೋಡಂಬಿ- 2 ಟೇಬಲ್ ಚಮಚ.

*ಲವಂಗ – 4-5

*ಏಲಕ್ಕಿ ಪುಡಿ – 2,1/2ಟೀ ಚಮಚ

ಹಯಗ್ರೀವ ಮಾಡುವ ವಿಧಾನ :

1ಒಂದು ಬೌಲ್‍ನಲ್ಲಿ ಕಡಲೇ ಬೇಳೆಯನ್ನು ಹಾಕಿ. 2. ಅದಕ್ಕೆ 2 ಕಪ್ ನೀರನ್ನು ಸೇರಿಸಿ ಅರ್ಧ ಗಂಟೆ ನೆನೆಯಲು ಬಿಡಿ. 3. ನೆನೆಸಿಕೊಂಡ ಕಡಲೇ ಬೇಳೆಯನ್ನು ಕುಕ್ಕರ್‍ಗೆ ಹಾಕಿ. 4. ಅರ್ಧ ಕಪ್ ನೀರನ್ನು ಸೇರಿಸಿ. 5. 4-5 ಸೀಟಿ ಕೂಗಿಸಿ ಬೇಯಿಸಿ. ನಂತರ ಆರಲು ಬಿಡಿ. 6. ಮುಚ್ಚಳವನ್ನು ತೆರೆದು, ಲಘು ಪ್ರಮಾಣದಲ್ಲಿ ಬೇಳೆಯನ್ನು ಅರೆದು ಒಂದೆಡೆ ಇಡಿ. 7. ಒಂದು ಪಾತ್ರೆಯಲ್ಲಿ ಬೆಲ್ಲವನ್ನು ಸೇರಿಸಿ ಬಿಸಿ ಮಾಡಿ. 8. ತಕ್ಷಣವೇ ಅರ್ಧ ಕಪ್ ನೀರನ್ನು ಬೆರೆಸಿ. 9. ಬೆಲ್ಲ ಸಂಪೂರ್ಣವಾಗಿ ಕರಗಲು, ಮಧ್ಯಮ ಉರಿಯಲ್ಲಿ 5-7 ನಿಮಿಷಗಳ ಕಾಲ ಕುದಿಸಿ. 10. ಬೆಲ್ಲದ ಪಾಕಕ್ಕೆ ಬೇಯಿಸಿಕೊಂಡ ಬೇಳೆಯನ್ನು ಸೇರಿಸಿ. 11. ಚೆನ್ನಾಗಿ ಬೆರೆಸಿ. 12. ಗಸಗಸೆಯನ್ನು ಬೆರೆಸಿ, ಚೆನ್ನಾಗಿ ಮಿಶ್ರಗೊಳಿಸಿ. 13. 3 ಟೇಬಲ್ ಚಮಚ ತುಪ್ಪವನ್ನು ಸೇರಿಸಿ. 14. ಇವೆಲ್ಲವನ್ನು 15 ನಿಮಿಷಗಳ ಕಾಲ ಚೆನ್ನಾಗಿ ಬೇಯಿಸಿ. 15. ಒಣದ್ರಾಕ್ಷಿ ಮತ್ತು ಒಣ ತೆಂಗಿನ ತುರಿಯನ್ನು ಸೇರಿಸಿ. 16. ಪುನಃ 5 ಟೇಬಲ್ ಚಮಚ ತುಪ್ಪವನ್ನು ಸೇರಿಸಿ, ಚೆನ್ನಾಗಿ ಮಿಶ್ರಗೊಳಿಸಿ. 17. ಇದನ್ನು 2 ನಿಮಿಷ ಬೇಯಿಸಲು ಬಿಡಿ. 18. ಈ ಮಧ್ಯೆ, ಒಂದು ಚಿಕ್ಕ ಪಾತ್ರೆಯಲ್ಲಿ ಒಂದು ಟೇಬಲ್ ಚಮಚ ತುಪ್ಪವನ್ನು ಸೇರಿಸಿ ಬಿಸಿ ಮಾಡಿ. 19. ಕತ್ತರಿಸಿಕೊಂಡ ಗೋಡಂಬಿಯನ್ನು ಹಾಕಿ 2 ನಿಮಿಷ ಹುರಿಯಿರಿ. ಅವು ಹುರಿದು ಹೊಂಬಣ್ಣಕ್ಕೆ ತಿರುಗಬೇಕು. 20. ನಂತರ ಲವಂಗವನ್ನು ಸೇರಿಸಿ. 21. ಬೇಯಿಸಿದ ಗೋಡಂಬಿ ಮಿಶ್ರಣವನ್ನು ಬೆಲ್ಲ ಮತ್ತು ಬೇಳೆಯ ಮಿಶ್ರಣಕ್ಕೆ ಸೇರಿಸಿ. 22. ಏಲಕ್ಕಿ ಪುಡಿಯನ್ನು ಸೇರಿಸಿ, ಚೆನ್ನಾಗಿ ಬೆರೆಸಿ. 23. ಬಿಸಿ ಇರುವಾಗಲೇ ಸವಿಯಲು ನೀಡಿ.

 

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

👇 ನಮ್ಮ ಪುಟ ಲೈಕ್ 👍 ಮಾಡಿ 👇👇

👆ನಮ್ಮ ಪೇಜ್ ಲೈಕ್ 👍 ಮಾಡಲು ಮರಿಬೇಡಿ ಫ್ರೆಂಡ್ಸ್ 👆

Comments

comments

Click to comment

Leave a Reply

Your email address will not be published. Required fields are marked *

To Top