fbpx
ಸಣ್ಣ ಕಥೆ

ಮೈಸೂರು ದಸರಾ ಜಂಬೂಸವಾರಿ ಆನೆಗಳ ಇತಿಹಾಸದ ಬಗ್ಗೆ ಪ್ರತಿಯೊಬ್ಬರೂ ತಿಳ್ಕೊಳ್ಳೆಬೇಕು..

ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂಸವಾರಿ. ರಾಜ್ಯ, ಹೊರ ರಾಜ್ಯ ಹಾಗೂ ವಿದೇಶಗಳಿಂದಲೂ ಜನರು ಜಂಬೂಸವಾರಿ ವೀಕ್ಷಣೆಗಾಗಿ ಆಗಮಿಸುತ್ತಿದ್ದಾರೆ.

ಅಂಬಾರಿ

೭೫೦ ಕೆಜಿ ಚಿನ್ನದ ಅಂಬಾರಿಯಲ್ಲಿ ವಿರಾಜಮಾನರಾಗಿರುವ ತಾಯಿ ಚಾಮುಂಡೇಶ್ವರಿ ದೇವಿ ಮೆರವಣಿಗೆಗೆ ಪ್ರಮುಖ ಆಕರ್ಷಣೆ.ರಸ್ತೆಯ ಇಕ್ಕೆಲಗಳಲ್ಲೂ ಪ್ರವಾಹದೋಪಾದಿ ಜನಸಾಗರದ ನಡುವೆ ತಾಯಿ ಚಾಮುಂಡೇಶ್ವರಿ ಅಂಬಾರಿಯನ್ನು ಹೊತ್ತ ಬಲರಾಮ ಆನೆ ಗಂಭೀರವದನನಾಗಿ ಹೆಜ್ಜೆಗಳನ್ನು ಇಡುತ್ತ ಸಾಗುತ್ತದೆ. ೨೪ ಕುಶಾಲ ತೋಪುಗಳ ಸದ್ದಿನ ಹಿನ್ನೆಲೆಯಲ್ಲಿ ಕೆ.ಆರ್ ವೃತ್ತ, ಸಯ್ಯಾಜಿ ರಾವ್ ರಸ್ತೆ ಮೂಲಕ ಬನ್ನಿಮಂಟಪದತ್ತ ಬಲರಾಮ ಚಿನ್ನದ ಅಂಬಾರಿ ಹೊತ್ತು ನಡೆವ ದೃಶ್ಯ ಮನಸೂರೆಗೊಳಿಸುತ್ತದೆ.

ಅಂಬಾರಿ ಹೊತ್ತ ಆನೆಗಳ ಇತಿಹಾಸ:-

ಮೈಸೂರು ದಸರಾ ಅಂದರೆ ನೆನಪಾಗುವುದು ಅಂಬಾರಿ ಮತ್ತು ಆನೆ. ಕೃಷ್ಣದೇವರಾಯ ಒಡೆಯರ್ ಕಾಲದಲ್ಲಿ ಪಿರಿಯಾಪಟ್ಟಣದ ಬೆಟ್ಟದಪುರದ ಬಳಿ ಸೆರೆಸಿಕ್ಕ ಜಯಮಾರ್ತಾಂಡ ಆನೆ ಮೈಸೂರು ದಸರಾದಲ್ಲಿ ಮೊದಲು ಅಂಬಾರಿ ಹೊತ್ತ ಆನೆಯಾಗಿದೆ. ಒಡೆಯರ್ ಕಾಲದಲ್ಲಿ ಪ್ರಾರಂಭವಾದ ವಿಜಯದಶಮಿಯಿಂದ ಅಂದಾಜು 45 ವರ್ಷಗಳ ಕಾಲ ಚಿನ್ನದ ಅಂಬಾರಿಯನ್ನು ಹೊತ್ತ ಹಿನ್ನೆಲೆಯಲ್ಲಿ ಮಹಾರಾಜರ ಪ್ರೀತಿಗೆ ಪಾತ್ರವಾಗಿತ್ತು. ಅರಮನೆಯ ಮಹಾದ್ವಾರಗಳಲ್ಲೊಂದಾದ ಜಯಮಾರ್ತಾಂಡ ದ್ವಾರಕ್ಕೆ ಈ ಆನೆ ಹೆಸರು ಇಡಲಾಗಿದೆ.

1902 ರಿಂದ ಅಂಬಾರಿ ಹೊತ್ತ ಆನೆಗಳೆಂದರೆ

*ವಿಜಯಬಹದ್ದೂರ್

*ನಂಜುಂಡ

*ರಾಮಪ್ರಸಾದ್

*ಮೋತಿಲಾಲ್

*ಸುಂದರ್ ರಾಜ್

*ಐರಾವತ

1935ರಲ್ಲಿ ಐರಾವತ ಆನೆಯನ್ನು ಹಾಲಿವುಡ್ ಚಿತ್ರ ‘ದಿ ಎಲಿಫೆಂಟ್ ಬಾಯ್’ಗೆ ಬಳಸಿಕೊಳ್ಳಲಾಯಿತು ಆನೆಯ ಮಾವುತನೆ ಚಿತ್ರದ ನಾಯಕ,ಚಿತ್ರ ಜಗತ್ತಿನಾದ್ಯಂತ ಪ್ರದರ್ಶನಗೊಂಡಿತು. ಆ ಮಾವುತ ಮತ್ಯಾರು ಅಲ್ಲ 7 ವರ್ಷದ ಹುಡುಗ ಮೈಸೂರು ಸಾಬು.

*ಗಜೇಂದ್ರ*

*ಬಿಳಿಗಿರಿ*

ಇದು ಅಂಬಾರಿ ಹೊತ್ತ ಆನೆಗಳಲ್ಲಿ ಅತ್ಯಂತ ದೈತ್ಯ ಆನೆಯಾಗಿದ್ದು ಇದರ ಎತ್ತರ 10.5 ಅಡಿ. ಸುಮಾರು 7 ಸಾವಿರ ಕೆ.ಜಿ. ಇತ್ತಂತೆ. 1975ರಲ್ಲಿ ಇದು ಮರಣ ಹೊಂದಿತ್ತು. ಇದರ ಮಾವುತ ಗೌಸ್ ಅಂತ. ಬಿಳಿಗಿರಿ ಹೆಗ್ಗಳಿಕೆ ಏನೆಂದರೆ ಇದೇ ಮಹಾರಾಜರನ್ನು ಹೊತ್ತೂಯ್ದು ಕೊನೇ ಆನೆ.

*ರಾಜೇಂದ್ರ*

ಗಂಧದ ಗುಡಿ’ ಚಿತ್ರದಲ್ಲಿ ಡಾ. ರಾಜ್ ಆನೆಯ ದಂತದ ಮೇಲೆ ಕುಳಿತು ಹಾಡುವ ಹಾಡುವ ಹಾಡು ಯಾರಿಗೆ ತಾನೆ ನೆನಪಿಲ್ಲ.ಈ ಆನೆಯ ಹೆಸರು ರಾಜೇಂದ್ರ. ಚಿತ್ರದುದ್ದಕ್ಕೂ ಇದು ಭಾಗವಹಿಸಿದೆ. ಡಾ. ರಾಜ್ಗೆ ಅಚ್ಚುಮೆಚ್ಚಿನ ಆನೆ ಕೂಡ.

*ದ್ರೋಣ*

ದ್ರೋಣ 10.25 ಎತ್ತರದ ಆನೆ ದ್ರೋಣ. ಅದು ಸುಮಾರು 6,400 ಕೆ.ಜಿ ತೂಕ ಇತ್ತು.ದ್ರೋಣ ಆನೆ 18 ವರ್ಷ ಸತತವಾಗಿ ಅಂಬಾರಿಗೆ ಬೆನ್ನುಕೊಟ್ಟ ಖ್ಯಾತಿ, ಕಿರುತೆರೆಯಲ್ಲಿ ಪ್ರಸಾರವಾಗುತ್ತಿದ್ದ ಜನಪ್ರಿಯ ಧಾರಾವಾಹಿ ‘ದಿ ಸೋರ್ಡ್ ಆಫ್ ಟಿಪ್ಪುಸುಲ್ತಾನ್’ನ ಟಿಪ್ಪು ಪಾತ್ರಧಾರಿಯನ್ನು ಹೊತ್ತೂಯ್ದದ್ದೂ ಇದೇ ದ್ರೋಣ, 1998ರಲ್ಲಿ ಹೈ ಟೆನ್ಶನ್ ವಿದ್ಯುತ್ ತಗುಲಿ ದ್ರೋಣ ಸಾವನ್ನಪ್ಪಿತು.

*ಅರ್ಜುನ*

ದ್ರೋಣ ನ ನಂತರ ಅರ್ಜುನ ಒಮ್ಮೆ ಅಂಬಾರಿ ಹೊತ್ತಿದ್ದ ಆದರೆ ನಂತರದ ದಿನಗಳಲ್ಲಿ ಮಾವುತನನ್ನು ಕೊಂದ ಆರೋಪದಲ್ಲಿ ಅರ್ಜುನನನ್ನು ಉತ್ಸವದಿಂದ ಹೊರಗುಳಿಸಲಾಯಿತು.

*ಬಲರಾಮ*

ಅರ್ಜುನನ ನಂತರ ಬಲರಾಮನಿಗೆ ಅಂಬಾರಿ ಹೊರಿಸಲಾಯಿತು,ಬಲರಾಮ ಶಾಂತ ಸ್ವಭಾವದ ಆನೆ ಆಗಿದ್ದು 1987ರಲ್ಲಿ ಕಟ್ಟೆಪುರದಲ್ಲಿಬಲರಾಮ, ಗಜೇಂದ್ರ, ವಿಕ್ರಮ, ಹರ್ಷ, ಪ್ರಶಾಂತ ಈ ಐದೂ ಆನೆಗಳನ್ನು ಹಿಡಿದಿದ್ದರು. ಹನ್ನೊಂದು ವರ್ಷಗಳ ಕಾಲ ಅಂಬಾರಿ ಹೊತ್ತ ಬಲರಾಮನಿಗೆ ಕಳೆದ ವರ್ಷ ನಿವೃತ್ತಿ ದೊರೆತಿದೆ.

*ಅರ್ಜುನ*

ದ್ರೋಣನ ಮರಣದ ನಂತರ ಒಮ್ಮೆ ಅಂಬಾರಿ ಹೊತ್ತಿದ್ದ ಅರ್ಜುನನ ಗುಣದಲ್ಲಿ ಸ್ವಲ್ಪ ಕೀಟಲೆ ಸ್ವಭಾವವಿರುವ ಅರ್ಜುನನ ಮೇಲೆ ಸಾಕಷ್ಟು ಟೀಕೆಗಳು ಬಂದಿತ್ತು ಆದರೂ ಬಲರಾಮನಿಗೆ ವಯಸ್ಸಾದ ಕಾರಣ ಕಳೆದವರ್ಷದಿಂದ ಅಂಬಾರಿ ಹೊರುವ ಜವಾಬ್ದಾರಿ ಅರ್ಜುನನಿಗೆ ನೀಡಲಾಗಿದೆ. ಅರ್ಜನ ಬರೋಬ್ಬರಿ 5,535 ಕೆಜಿ ತೂಕವನ್ನು ಹೊಂದುವ ಮೂಲಕ ತಂಡದ ಎಲ್ಲಾ ಆನೆಗಳಿಗಿಂತಲೂ ಬಲಿಷ್ಠನಾಗಿದ್ದಾನೆ.

ಆನೆಗಳ ಭೋಜನ

ದಸರಾಕ್ಕೆ ಸುಮಾರು ಒಂದೂವರೆ ತಿಂಗಳಿರುವಾಗಲೇ ನಾಗರಹೊಳೆಯ ವೀರನಹೊಸಹಳ್ಳಿಯಿಂದ ಆರು ಆನೆಗಳ ಮೊದಲ ತಂಡದ ಗಜಪಯಣ ಮೈಸೂರಿಗೆ ಆಗಮಿಸಿದರೆ, ಆ ನಂತರ ದಸರಾಕ್ಕೆ ಕೆಲವೇ ದಿನಗಳ ಅಂತರದಲ್ಲಿ ಉಳಿದ ಆರು ಆನೆಗಳ ಎರಡನೆಯ ತಂಡ ಬರುತ್ತದೆ. ಈ ಗಜಪಡೆಗೆ ಮೈಸೂರಿನ ಅರಮನೆ ಆವರಣದಲ್ಲಿ ದಿನನಿತ್ಯ ವಿವಿಧ ಬಗೆಯ ಭೂರೀ ಭೋಜನ. ಅದರಲ್ಲೂ ಜಂಬೂ ಸವಾರಿಯಲ್ಲಿ ೭೫೦ ಕೆ.ಜಿ. ತೂಕದ ಚಿನ್ನದ ಅಂಬಾರಿ ಹೊತ್ತು ಸಾಗುವ ಅರ್ಜುನನಿಗೆ ವಿಶೇಷ ಸತ್ಕಾರಗಳು ನಡೆಯುತ್ತವೆ. ಉದ್ದು. ಗೋಧಿ, ಕುಸುಲಕ್ಕಿ, ಈರುಳ್ಳಿ, ಹಸಿ ತರಕಾರಿಗಳ ದೊಡ್ಡ ಉಂಡೆ, ಜೊತೆಗೆ ಬೆಣ್ಣೆ, ಭತ್ತ, ತೆಂಗಿನಕಾಯಿ, ಹಿಂಡಿ, ಕಬ್ಬು, ಬೆಲ್ಲ, ಉಚ್ಚೆಳ್ಳು ಮೊದಲಾದವುಗಳು ಐಟಂಗಳೂ ಇರುತ್ತವೆ. ಇದಲ್ಲದೆ, ಹಸಿರು ಮೇವುಗಳಾಗಿ ಆಲದ ಮರದ ಸೊಪ್ಪು, ಹುಲ್ಲನ್ನು ಆಗಾಗ್ಗೆ ನೀಡಲಾಗುತ್ತದೆ. ದಿನಕ್ಕೆರಡು ಬಾರಿ ಅರಮನೆ ಆವರಣದ ತೊಟ್ಟಿಯಲ್ಲಿ ಮಜ್ಜನದ ವೈಭೋಗ ನಡೆಯುತ್ತದೆ.

ಜಂಬೂ ಸವಾರಿ ತಾಲೀಮ

ಜಂಬೂ ಸವಾರಿಯಲ್ಲಿ ಯಾವುದೇ ಅಡೆತಡೆಗೆ ಬಗ್ಗದೆ ಮುನ್ನಡೆಯಲು ಸಿದ್ಧವಾಗಿರಲು ಅರ್ಜುನಮನಿಗೆ ಸುಮಾರು ೭೫೦ ಕೆ.ಜಿ. ತೂಕದ ಮರದ ಅಂಬಾರಿಯನ್ನು, ಉಳಿದ ಆನೆಗಳಿಗೆ ಮರಳಿನ ಮೂಟೆಯನ್ನು ಕಟ್ಟಿ ದಿನಕ್ಕೊಮ್ಮೆ ಅರಮನೆಯಿಂದ ಸಯ್ಯಾಜಿರಾವ್ ರಸ್ತೆಯಲ್ಲಿ ಬನ್ನಿ ಮಂಟಪದವರೆಗೆ ಕಡ್ಡಾಯ ಮಾರ್ಚ್‌ಫಾಸ್ಟ್ ನಡೆಯುತ್ತದೆ. ಈ ಗಜಪಡೆಯ ಉಸ್ತುವಾರಿಗೆ ಮಾವುತರು, ಕಾವಡಿಗರು ಇರುವುದರೊಂದಿಗೆ ಪಶುವೈದ್ಯಾಧಿಕಾರಿಗಳಿಂದ ಆಗಾಗ್ಗೆ ತಪಾಸಣೆಯೂ ನಡೆಯುತ್ತಿರುತ್ತದೆ. ಈ ಗಜಪಡೆಯನ್ನು ಜತನದಿಂದ ನೋಡಿಕೊಳ್ಳಲು ಮಾವುತರ ಕುಟುಂಬಗಳಿಗೆ ಅರಮನೆಯ ಆವರಣದಲ್ಲಿಯೇ ಶೆಡ್ ಹಾಕಿ ವಾಸ್ತವ್ಯದ ವ್ಯವಸ್ಥೆ ಮಾಡಲಾಗುತ್ತದೆ.

ಸುಮಾರು ಒಂದೂವರೆ ತಿಂಗಳಿಗೂ ಹೆಚ್ಚು ಕಾಲ ದಿನನಿತ್ಯ ಕಠಿಣ ತಾಲೀಮು ನಡೆಸಿ ದಸರಾ ದಿನದಂದು ಕಣ್ಣು ಕುಕ್ಕಿಸುವಂತಹ ವೇಷಭೂಷಣಗಳಿಂದ ಕಂಗೊಳಿಸುತ್ತಾ ಗಾಂಭೀರ್ಯದ ಹೆಜ್ಜೆಯನ್ನಿಡುತ್ತಾ ಮೆರವಣಿಗೆಯಲ್ಲಿ ಸಾಗುವ ಗಜಪಡೆಗಳ ಬಗ್ಗೆ ತಿಳಿಯುವ ಕುತೂಹಲ ಪ್ರತಿಯೊಬ್ಬರಿಗೂ ಇದ್ದೇ ಇರುತ್ತದೆ.

ಮೈಸೂರು ದಸರಾ ಅಂದರೆ ನೆನಪಾಗುವುದು ಅಂಬಾರಿ ಮತ್ತು ಆನೆ. ಹಾಗೆ ಮೊದಲಿನಿಂದಲೂ ಈ ಆನೆಗಳ ಇತಿಹಾಸ ಬಹಳ ರೋಚಕವಾಗಿದೆ. ಆ ಇತಿಹಾಸದ ಕಿರು ಪರಿಚಯ ಇಲ್ಲಿದೆ ನೋಡಿ..

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top