ಕನ್ನಡ

ಸಾಮಾನ್ಯ ಕನ್ನಡಿಗನಿಂದ ಅನಕೃ ನೆನಪಿನಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ.

👇 ನಮ್ಮ ಪುಟ ಲೈಕ್ 👍 ಮಾಡಿ 👇👇

👆ನಮ್ಮ ಪೇಜ್ ಲೈಕ್ 👍 ಮಾಡಲು ಮರಿಬೇಡಿ ಫ್ರೆಂಡ್ಸ್ 👆

ಸಾಮಾನ್ಯ ಕನ್ನಡಿಗನಿಂದ ಅನಕೃ ನೆನಪಿನಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ.

ನವೆಂಬರ್ ಬರುತ್ತಿದೆ ಎಲ್ಲೆಡೆ ಕರ್ನಾಟಕದಾದ್ಯಂತ ರಾಜ್ಯೋತ್ಸವವನ್ನು ವಿವಿಧ ರೀತಿಯಲ್ಲಿ ಆಚರಣೆ ಮಾಡಲಾಗುತ್ತದೆ ಅದೇ ರೀತಿ ‘ ಸಾಮಾನ್ಯ ಕನ್ನಡಿಗ ಪ್ರತಿಷ್ಠಾನ ಟ್ರಸ್ಟ್ ” ವತಿಯಿಂದ ಈ ಭಾರಿ ಬಹಳ ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವವನ್ನು ಆಚರಣೆ ಮಾಡಲಾಗುತ್ತಿದೆ..ಸಜ್ಜನ್ ರಾವ್ ಸರ್ಕಲ್, ವಿವಿ ಪುರದಲ್ಲಿರುವ ಕರುನಾಡಿನ ಸಾಂಸ್ಕೃತಿಕ ಸೇನಾನಿಯಾದ ಅ.ನ.ಕೃ ಪ್ರತಿಮೆಯ ಬಳಿ ಈ ಭಾರಿ ಕರ್ನಾಟಕ ರಾಜ್ಯೋತ್ಸವ ಆಚರಣೆ ಮಾಡಲಾಗುತ್ತಿದೆ..

ಅ.ನ.ಕೃಷ್ಣರಾಯರು ಮಹಾನ್ ಕನ್ನಡಾಭಿಮಾನಿಯಾಗಿದ್ದರು. ಕರ್ನಾಟಕದಲ್ಲಿ ಕನ್ನಡವನ್ನೂ ಸೇರಿ ಎಲ್ಲಾ ಭಾಷೆಯನ್ನು ಮಾತನಾಡುವ ಜನರೂ ಇರಲಿ,,ಆದರೆ ಅವರು ನಮ್ಮೊಂದಿಗೆ ಹೊಂದಿಕೊಂಡು ಹೋಗಬೇಕು, ಅವರ ಮಾತೃ ಭಾಷೆಯನ್ನು ಮೆಟ್ಟಿ, ಮುನ್ನುಗ್ಗುವುದು ಸರಿಯಲ್ಲ ಎಂಬುದು ಅವರ ಮೂಲತತ್ವವಾಗಿತ್ತು. ತಮ್ಮ ಜೀವಮಾನದುದ್ದಕ್ಕೂ ಕರ್ನಾಟಕಕ್ಕೆ ಮತ್ತು ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಹೋರಾಟ ಮಾಡಿದರು. ಕರ್ನಾಟಕದಲ್ಲೆಲ್ಲಾ ಸುತ್ತಾಡಿ ತಮ್ಮ ಚಳುವಳಿ, ಭಾಷಣಗಳ ಮೂಲಕ ಕನ್ನಡಿಗರನ್ನು ಹುರಿದುಂಬಿಸಿ ಕನ್ನಡಿಗರಲ್ಲಿ ಸ್ವಾಭಿಮಾನವನ್ನು ಜಾಗೃತಗೊಳಿಸಿದರು..

ನವೆಂಬರ್ 01ನೇ ತಾರೀಕು ಕರ್ನಾಟಕ ರಾಜ್ಯೋತ್ಸವ ಮತ್ತು ಕನ್ನಡ ಬೆಳೆಸುವ ಅಭಿಯಾನವನ್ನು ಆ.ನ.ಕೃ ಪ್ರತಿಮೆ ಬಳಿ ಸಜ್ಜನ್ ರಾವ್ ಸರ್ಕಲ್, ವಿವಿ ಪುರದಲ್ಲಿ ಬೆಳಗೆ 9 : 30 ಕ್ಕೆ ‘ ಸಾಮಾನ್ಯ ಕನ್ನಡಿಗ ಪ್ರತಿಷ್ಠಾನ ಟ್ರಸ್ಟ್ ” ಹಮ್ಮಿಕೊಂಡಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

👇 ನಮ್ಮ ಪುಟ ಲೈಕ್ 👍 ಮಾಡಿ 👇👇

👆ನಮ್ಮ ಪೇಜ್ ಲೈಕ್ 👍 ಮಾಡಲು ಮರಿಬೇಡಿ ಫ್ರೆಂಡ್ಸ್ 👆

Comments

comments

Click to comment

Leave a Reply

Your email address will not be published. Required fields are marked *

To Top