fbpx
ಮನೋರಂಜನೆ

ಮಂಡ್ಯದಲ್ಲಿ ಮತ್ತೆ ಶುರುವಾಗುತ್ತಾ ರಮ್ಯಾ ದರ್ಬಾರ್..? ಸುದ್ದಿ ಬೆನ್ನಲ್ಲೇ ಅಂಬಿ-ಮಾದೇಗೌಡ ರಹಸ್ಯ ಚರ್ಚೆ..!

ಮಂಡ್ಯದಲ್ಲಿ ಮತ್ತೆ ಶುರುವಾಗುತ್ತಾ ರಮ್ಯಾ ದರ್ಬಾರ್..? ಸುದ್ದಿ ಬೆನ್ನಲ್ಲೇ ಅಂಬಿ-ಮಾದೇಗೌಡ ರಹಸ್ಯ ಚರ್ಚೆ..!

 

 

ಮಾಜಿ ಸಂಸದೆ ರಮ್ಯಾ ಮತ್ತೆ ಮಂಡ್ಯ ಜಿಲ್ಲೆಗೆ ಎಂಟ್ರಿ ಕೊಡಲು ಸಿದ್ಧತೆ ನಡೆಸಿದ್ದಾರೆ ಎಂಬ ಸುದ್ದಿಯೊಂದು ಈಗ ಎಲ್ಲೆಡೆ ಹರಿದಾಡುತ್ತಿದೆ. ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಎಐಸಿಸಿ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ರಮ್ಯಾ ನಗರದಲ್ಲಿ ಮನೆ ಖರೀದಿಸಿದ್ದಾರೆ. ಇದೇ ತಿಂಗಳು 29ನೇ ತಾರೀಕಿನಂದು ಮಂಡ್ಯಕ್ಕೆ ಬರುತಿದ್ದಾರೆ ಎಂಬ ಸುದ್ದಿ ಕಾಂಗ್ರೆಸ್‌ ಕಾರ್ಯಕರ್ತರಲ್ಲಿ ಕುತೂಹಲ ಕೆರಳಿಸಿದೆ.

 

 

ಮಾಜಿ ಸಚಿವ ಅಂಬರೀಶ್ ಮಂಡ್ಯ ಜಿಲ್ಲೆಯ ರಾಜಕಾರಣದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿಲ್ಲ ಹಾಗಾಗಿ ರಮ್ಯಾ ಅವರು ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಿದರೆ ಕ್ಷೇತ್ರದಲ್ಲಿ ಗೆಲುವು ಸಾದಿಸಬಹುದು ಎಂಬುದು ಕಾಂಗ್ರೆಸ್ ಲೆಕ್ಕಾಚಾರವಾಗಿದೆ. ಮೂಲಗಳ ಪ್ರಕಾರ ಮದ್ದೂರು ಅಥವಾ ಮೇಲುಕೋಟೆ ಕ್ಷೇತ್ರದಿಂದ ಸ್ಪರ್ಧಿಸುವಂತೆ ರಮ್ಯಾ ಅವರ ಮನವೊಲಿಸಲಾಗುತ್ತಿದೆ ಎಂಬ ಸುದ್ದಿ ಇದೆ.

 

 

ಈ ಸುದ್ದಿಯನ್ನು ಕೇಳಿದ ತಕ್ಷಣ ಕ್ಷೇತ್ರಕ್ಕೆ ಆಗಮಿಸಿದ ಅಂಬಿ ಕಾಂಗ್ರೆಸ್ ಹಿರಿಯ ನಾಯಕ ಮಾದೇಗೌಡರನ್ನು ತಮ್ಮ ಸ್ನೇಹಿತರ ಮನೆಗೆ ಕರೆಸಿಕೊಂಡು ರಹಸ್ಯವಾಗಿ ಮಾತುಕತೆ ನಡೆಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅಂಬರೀಶ್ ನಾನು ಮತ್ತು ಮಾದೇಗೌಡರು ರಾಜಕೀಯ ಚರ್ಚೆ ನಡೆಸಿಲ್ಲ, ನನಗೆ ಟಿಕೆಟ್ ಕೊಡೋದು ಬಿಡೋದು ಹೈಕಮಾಂಡ್ ಗೆ ಬಿಟ್ಟಿದ್ದು” ಎಂದು ಹೇಳಿದರು.

 

 

ಒಟ್ಟಾರೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ಮಂಡ್ಯ ಜಿಲ್ಲೆಯಲ್ಲಿ ರಾಜಕಾರಣ ಗರಿಗೆದರಿದ್ದು ಕಾಂಗ್ರೆಸ್ ಪಕ್ಷದಲ್ಲಿ ಯಾವೆಲ್ಲಾ ಬದಲಾವಣೆಗಳಾಗುತ್ತವೆ. ಪ್ರಸ್ತುತ ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣದ ಮುಖ್ಯಸ್ಥೆಯಾಗಿ ರಾಷ್ಟ್ರಮಟ್ಟದಲ್ಲಿ ಮಿಂಚುತ್ತಿರುವ ರಮ್ಯಾ ಅವರು ರಾಜ್ಯ ರಾಜಕಾರಣಕ್ಕೆ ವಾಪಾಸ್ಸಾಗುವ ಮನಸ್ಥಿತಿ ಅವರಿಗಿದೆಯೇ ಮತ್ತು ರಾಜ್ಯದ ಕಾಂಗ್ರೆಸ್ ನಾಯಕರು ಅವರ ಮನವೊಲಿಸಲು ಯಶಸ್ವಿಯಾಗುತ್ತಾರೆಯೇ ಎಂಬುದನ್ನು ಕಾದು ನೋಡಬೇಕು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top