fbpx
ಮನೋರಂಜನೆ

`ಅಂಬಿ ನಿಂಗ್ ವಯಸ್ಸಾಯ್ತೋ’ ಚಿತ್ರಕ್ಕೆ ಸಿಕ್ತು ಅದ್ದೂರಿ ಚಾಲನೆ.

`ಅಂಬಿ ನಿಂಗ್ ವಯಸ್ಸಾಯ್ತೋ’ ಚಿತ್ರಕ್ಕೆ ಸಿಕ್ತು ಅದ್ದೂರಿ ಚಾಲನೆ.

 

 

 

ರೆಬೆಲ್‌ ಸ್ಟಾರ್‌ ಅಂಬರೀಶ್‌ ಅಭಿನಯದ ಚಿತ್ರವೊಂದನ್ನು ಕಿಚ್ಚ ಸುದೀಪ್‌ ನಿರ್ಮಾಣ ಮಾಡುತ್ತಿದ್ದಾರೆ ಮತ್ತು ಆ ಚಿತ್ರದಲ್ಲಿ ವಿಶೇಷ ಪಾತ್ರವೊಂದರಲ್ಲಿ ಸುದೀಪ್ ಅಭಿನಯಿಸುತ್ತಿದ್ದಾರೆ ಆ ಚಿತ್ರಕ್ಕೆ ‘ಅಂಬಿ ನಿಂಗೆ ವಯಸ್ಸಾಯ್ತೋ’ ಎಂಬ ಟೈಟಲ್‌ ಇಟ್ಟಿರುವುದು ಎನ್ನುವ ವಿಷಯ ಈಗ ಎಲ್ಲರಿಗೂ ಗೊತ್ತು? ಇಂದು ಆ ಚಿತ್ರದ ಮುಹೂರ್ತ ನಡೆದಿದೆ.

 

 

ವೆಸ್ಟ್ ಆಫ್ ಕಾರ್ಡ್ ರಸ್ತೆಯಲ್ಲಿರುವ ಗಣೇಶ ದೇವಾಲಯದಲ್ಲಿ ಇಂದು ಬೆಳಿಗ್ಗೆ ಈ ಚಿತ್ರದ ಮುಹೂರ್ತ ನೆರವೇರಿದೆ. ಕಿಚ್ಚ ಕ್ರಿಯೇಶನ್ಸ್ ಅರ್ಪಿಸಿ, ಕೆ.ಎಸ್.ಕೆ. ಶೋ ರೀಲ್ ಪ್ರೊಡಕ್ಷನ್ ಅಡಿಯಲ್ಲಿ ತಯಾರಾಗುತ್ತಿರುವ `ಅಂಬಿ ನಿಂಗ್ ವಯಸ್ಸಾಯ್ತೋ’ ಚಿತ್ರದ ಆರಂಭಿಕ ದೃಶ್ಯಕ್ಕೆ ಕಿಚ್ಚ ಸುದೀಪ್ ಅವರ ತಾಯಿ ಸರೋಜ ಮತ್ತು ಸುದೀಪ್ ಅವರ ಸಹೋದರಿ ಸುಜಾತಾ ಅವರು ಕ್ಲಾಪ್ ಮಾಡಿ, ಕ್ಯಾಮೆರಾ ಚಾಲನೆ ಮಾಡಿದ್ದಾರೆ.

 

 

ಗುರುದತ್ತ ಗಾಣಿಗ ನಿರ್ದೇಶನದ ಈ ಚಿತ್ರವನ್ನು ಕಿಚ್ಚ ಸುದೀಪ್ ಮತ್ತು ಮಂಜುನಾಥ್ ಗೌಡ ಜಂಟಿಯಾಗಿ ನಿರ್ಮಿಸುತ್ತಿದ್ದಾರೆ.ಅರ್ಜುನ್ಯ ಜನ್ಯ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಚಿತ್ರದಲ್ಲಿ ಅಂಬರೀಷ್ ಅವರ ಫ್ಲಾಷ್ ಬ್ಯಾಕ್ ಪಾತ್ರದಲ್ಲಿ ಸುದೀಪ್ ನಟಿಸುತ್ತಿದ್ದಾರೆ. ಈ ಚಿತ್ರದ ಕುರಿತ ಇನ್ನಷ್ಟು ಮಾಹಿತಿಗಳು ಶೀಘ್ರದಲ್ಲೇ ಹೊರಬೀಳಲಿವೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top