ಸಮಾಚಾರ

ಸಂಸದ ಪ್ರತಾಪ್​ ಸಿಂಹ ಬಂಧನ: ನಾಳೆ ಹುಣಸೂರು ಬಂದ್​ ಸಾಧ್ಯತೆ

ಸಂಸದ ಪ್ರತಾಪ್​ ಸಿಂಹ ಬಂಧನ

 

ನಿಗದಿತ ಮಾರ್ಗ ಬಿಟ್ಟು ಬೇರೆ ಮಾರ್ಗದಲ್ಲಿ ಹನುಮ ಮೆರವಣಿಗೆ ನಡೆಸುತ್ತಿದ್ದರು. ಹುಣಸೂರು ಪ್ರವೇಶಿಸುವ ವೇಳೆ ಪ್ರತಾಪ್ ಸಿಂಹ ಹಾಗೂ ಹಲವು ಕಾರ್ಯಕರ್ತರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಹನುಮಂತ ಜಯಂತ್ಯುತ್ಸವದ ಮೆರವಣಿಗೆಯನ್ನು ಪೊಲೀಸರು ತಡೆದ ಪರಿಣಾಮ ಹನುಮ ಮಾಲಾಧಾರಿಗಳು ಪ್ರತಿಭಟನೆ ನಡೆಸಿದ್ದು, ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿತ್ತು.

ಪೊಲೀಸ್‌ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆಯೂ ನಡೆದಿದ್ದು, 150 ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದಿರುವ ವರದಿಯಾಗಿದೆ. ಹನುಮಂತ ಜಯಂತ್ಯುತ್ಸವಕ್ಕಾಗಿ ತೆರಳುತ್ತಿದ್ದ ಪ್ರತಾಪ್ ಸಿಂಹ ಅವರಿಗೆ ಬಿಳಿಕೆರೆ ಬಳಿ ಬ್ಯಾರಿಕೇಡ್‌ ಹಾಕಲಾಯಿತು ಇದಕ್ಕೆ ಸಂಸದ ಪ್ರತಾಪ್‌ ಸಿಂಹ ತೀವ್ರ ಅಸಮಾಧಾನ ವ್ಯಕ್ತಪಡಿಸಿ ತಾವೇ ಕಾರು ಚಲಾಯಿಸಿ ಬ್ಯಾರಿಕೇಡ್‌ ತಳ್ಳಿಕೊಂಡು ಮುಂದಕ್ಕೆ ಸಾಗಿದ್ದಾರೆ.

 

 

ಸಿಂಹ ಬ್ಯಾರಿಕೇಡ್ ಮೇಲೆ ಕಾರು ಹತ್ತಿಸುತ್ತಿರುವ ಸಂದರ್ಭದಲ್ಲಿ ಅಲ್ಲಿಯೇ ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಅಧಿಕಾರಿ ಸ್ವಲ್ಪದರಲ್ಲಿಯೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್​. ಯಡಿಯೂರಪ್ಪ ಅವರು ರಾಜ್ಯದಲ್ಲಿ ತುಘಲಕ್​ ದರ್ಬಾರ್​ ನಡೀತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಜತೆಗೆ ಹುಣಸೂರು ಘಟನೆಯನ್ನು ಖಂಡಿಸಿ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿದೆ ಎಂದು ತಿಳಿಸಿದರು.

ಹುಣಸೂರಿನಲ್ಲಿ ಹನುಮ ಭಕ್ತರ ಮೇಲೆ ಲಾಠಿಚಾರ್ಜ್​ ನಡೆಸಿದ ಘಟನೆಯನ್ನು ಖಂಡಿಸಿರುವ ಕೇಂದ್ರ ಸಚಿವ ಅನಂತ್​ ಕುಮಾರ್​ ಹೆಗಡೆ ಗಲಭೆ ಹಿಂದೆ ರಾಜ್ಯ ಸರ್ಕಾರದ ವ್ಯವಸ್ಥಿತ ಸಂಚಿದೆ ಎಂದು ಆರೋಪಿಸಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top