ಸಮಾಚಾರ

“ಕಾಂಗ್ರೆಸ್‌ಗೆ ರಾಹುಲ್‌ ಗಾಂಧಿ ಹೈಕಮಾಂಡ್‌ ಆದರೆ ನಮಗೆ 125 ಕೋಟಿ ಭಾರತೀಯರೇ ಹೈಕಮಾಂಡ್‌”-ಪ್ರಧಾನಿ ಮೋದಿ

ಕಾಂಗ್ರೆಸ್ ಅಧ್ಯಕ್ಷನಾಗಿ ರಾಹುಲ್ ಗಾಂಧಿ ಆಯ್ಕೆ ಸಾಧ್ಯತೆ: ಮೊಘಲ್ ಉದಾಹರಣೆ ನೀಡಿ ಔರಂಗಜೇಬ್‌ಗೆ ಹೋಲಿಕೆ ಮಾಡಿದ ಮೋದಿ.

 

 

132 ವರ್ಷದ ಇತಿಹಾಸವಿರುವ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ರಾಹುಲ್‌ ಗಾಂಧಿ ನಾಮಪತ್ರ ಸಲ್ಲಿಸಿದ್ದು, ಅಧ್ಯಕ್ಷರಾಗಿ 47 ವರ್ಷದ ರಾಹುಲ್‌ ಗಾಂಧಿ ಅವರು ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ಅಧ್ಯಕ್ಷ ಸ್ಥಾನಕ್ಕೆ ರಾಹುಲ್‌ ಗಾಂಧಿ ನಾಮಪತ್ರ ಸಲ್ಲಿಸಿರುವುದಕ್ಕೆ ಪ್ರಧಾನಿ ಮೋದಿ ಅಭಿನಂದಿಸಿದ್ದು, ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ ‘ಔರಂಗಜೇಬ್ ರಾಜ್ಯ’ದಂತೆ ಎಂದು ಟೀಕಿಸಿದ್ದಾರೆ.

 

 

ಗುಜರಾತ್‌ನ ಧರಮ್‌ಪುರದ ಚುನಾವಣಾ ಪ್ರಚಾರ ರ‍್ಯಾಲಿಯಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಮಣಿ ಶಂಕರ್ ಅಯ್ಯರ್ ಅವರ ಹೇಳಿಕೆಯೊಂದಕ್ಕೆ ತಿರುಗೇಟು ನೀಡಿದ ಮೋದಿ ಕಾಂಗ್ರೆಸ್‌ ಆಂತರಿಕ ಚುನಾವಣೆಯನ್ನು ತಮ್ಮದೇ ತಮ್ಮದೇ ಶೈಲಿಯಲ್ಲಿ ಟೀಕೆ ಮಾಡಿದ್ದಾರೆ. “ದೇಶದ ಅತ್ಯಂತ ಪುರಾತನ ಪಕ್ಷದೊಳಗೆ ಆಂತರಿಕ ಪ್ರಜಾಪ್ರಭುತ್ವವೇ ಇಲ್ಲ, ಮೊಘಲ್ ರಾಜ್ಯವನ್ನಾಳಿದ ಔರಂಗಜೇಬ್‌ ಆಡಳಿತದಂತೆ ಕಾಂಗ್ರೆಸ್‌ನ ಆಂತರಿಕ ಚುನಾವಣೆ” ಎಂದು ಮೋದಿ ಲೇವಡಿ ಮಾಡಿದ್ದಾರೆ.

 

 

“ಮೊಘಲ್‌ ಸಾಮ್ರಾಜ್ಯದಲ್ಲಿ ಜಹಾಂಗೀರ್, ಶಹಜಹಾನ್ ನಂತರ ಉತ್ತರಾಧಿಕಾರಿ ಯಾರು ಎಂಬುದು ಗೊತ್ತಿತ್ತು. ಅದೇ ರೀತಿ ಕಾಂಗ್ರೆಸ್ ವಂಶಪಾರಂಪರ್ಯ ಆಡಳಿತದಲ್ಲೂ ಕೂಡ ಉತ್ತರಾಧಿಕಾರಿ ಯಾರು ಎನ್ನುವುದು ಮೊದಲೇ ಎಲ್ಲರಿಗೂ ತಿಳಿದಿತ್ತು. ಜಹಾಂಗೀರ್‌ ನಂತರ ಶಾಜಹಾನ್‌, ಶಾಜಹಾನ್‌ ನಂತರ ಔರಂಗಜೇಬ್‌ ಅಧಿಕಾರಕ್ಕೆ ಬಂದಂತೆ ಕಾಂಗ್ರೆಸ್‌ನಲ್ಲಿ ರಾಹುಲ್‌ ಅಧ್ಯಕ್ಷರಾಗುತ್ತಾರೆ ಎಂದು ಎಲ್ಲರಿಗೂ ಗೊತ್ತು.” ಎಂದು ಮೋದಿ ಲೇವಡಿ ಮಾಡಿದ್ದಾರೆ.

“ಕಾಂಗ್ರೆಸ್‌ಗೆ ರಾಹುಲ್‌ ಗಾಂಧಿ ಹೈಕಮಾಂಡ್‌ ಆದರೆ ನಮಗೆ 125 ಕೋಟಿ ಭಾರತೀಯರೇ ಹೈಕಮಾಂಡ್‌. ಕಾಂಗ್ರೆಸ್‌ನ ಔರಂಗಜೇಬ್‌ ಆಡಳಿತಕ್ಕೆ ನನ್ನ ಶುಭಾಶಯಗಳು” ಎಂದು ಪ್ರಧಾನಿ ಮೋದಿ ತಮ್ಮ ಭಾಷಣದ ವೇಳೆ ಹೇಳಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top