ಮನೋರಂಜನೆ

ಪುನೀತ್ ‘ಅಂಜನಿಪುತ್ರ’ ಎಂಟ್ರಿಗೆ ಮುಹೂರ್ತ ಫಿಕ್ಸ್.

ಪುನೀತ್ ‘ಅಂಜನಿಪುತ್ರ’ ಎಂಟ್ರಿಗೆ ಮುಹೂರ್ತ ಫಿಕ್ಸ್.

 

 

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ತಮ್ಮ ಅಭಿಮಾನಿಗಳಿಗೆ ಸಿಹಿ ಸಮಾಚಾರವೊಂದನ್ನ ನೀಡಿದ್ದಾರೆ ಅದೇನೆಂದರೆ ಅವರ ಮುಂದಿನ ಚಿತ್ರ ಅಂಜನೀಪುತ್ರದ ರಿಲೀಸ್ ಡೇಟ್’ನ್ನು ಅಧಿಕೃತವಾಗಿ ಅನೌನ್ಸ್ ಮಾಡಲಾಗಿದೆ. ಚಿತ್ರದ ಇದೇ ಡಿಸೆಂಬರ್ 21ರಂದು ಬಿಡುಗಡೆಗೊಳ್ಳುತ್ತಿದೆ. ಈಗಾಗಲೇ ಹಾಡುಗಳು ಮತ್ತು ಟ್ರೇಲರ್ ಈಗಾಗಲೇ ರಿಲೀಸ್ ಆಗಿ ಎಲ್ಲರ ಮೆಚ್ಚುಗೆ ಗಳಿಸಿದ್ದು ಚಿತ್ರದ ಮೇಲೆ ಭಾರಿ ನಿರೀಕ್ಷೆ ಹುಟ್ಟುಕೊಂಡಿದೆ.

 

 

ಅಂಜನಿಪುತ್ರ ಚಿತ್ರದಲ್ಲಿ ಪುನೀತ್ ಗೆ ನಾಯಕಿಯಾಗಿ ಇದೇ ಮೊದಲ ಬಾರಿಗೆ ಕಿರಿಕ್ ಹುಡುಗಿ “ರಶ್ಮಿಕಾ ಮಂದಣ್ಣ” ಅಭಿನಯಿಸುತ್ತಿದ್ದಾರೆ.. ಅಲ್ಲದೆ ವಿಶೇಷ ಪಾತ್ರದಲ್ಲಿ ರಮ್ಯಾ ಕೃಷ್ಣಾ ಕೂಡ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಸಾಧು ಕೋಕಿಲ, ಚಿಕ್ಕಣ್ಣ, ಮುಕೇಶ್‌ ರಿಷಿ, ರವಿಶಂಕರ್‌ ಸೇರಿದಂತೆ ಹಲವರು ಅಂಜನಿಪುತ್ರ ಚಿತ್ರದಲ್ಲಿ ನಟಿಸಿದ್ದಾರೆ.. ನಟಿ ಹರಿಪ್ರಿಯಾ ರವರು ಕೂಡ ಪುನೀತ್ ಜೊತೆ ಹಾಡೊಂದರಲ್ಲಿ ಕಾಣಿಸಿಕೊಂಡಿದ್ದಾರೆ..

 

 

ಭಜರಂಗಿ ಖ್ಯಾತಿಯ ಎ.ಹರ್ಷ ಈ ಚಿತ್ರವನ್ನ ನಿರ್ದೇಶನ ಮಾಡುತ್ತಿದ್ದು, ಎಂ.ಎನ್ ಕುಮಾರ್ ನಿರ್ಮಾಣ ಮಾಡುತ್ತಿದ್ದಾರೆ…ಚಿತ್ರಕ್ಕೆ ರವಿ ಬಸ್ರೂರು ಅವರ ಸಂಗೀತ ನಿರ್ದೇಶನ ಮತ್ತು ಸ್ವಾಮಿ ಅವರ ಛಾಯಾಗ್ರಹಣವಿದೆ.ಇದು ತಮಿಳಿನ ತಮಿಳಿನ “ಪೂಜೈ’ ಚಿತ್ರದ ರೀಮೇಕ್‌ ಆಗಿದ್ದು, ಕನ್ನಡದ ನೇಟಿವಿಟಿಗೆ ತಕ್ಕಂತೆ ಬದಲಾವಣೆ ಮಾಡಿಕೊಳ್ಳಲಾಗಿದೆ ಎಂದು ಚಿತ್ರತಂಡ ಹೇಳುತ್ತದೆ.

 

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top