fbpx
ಸಮಾಚಾರ

ಕ್ರಿಕೆಟಿಗ ಅಜಿಂಕ್ಯ ರಹಾನೆ ತಂದೆಯನ್ನು ಅರೆಸ್ಟ್ ಮಾಡಿದ ಪೊಲೀಸರು.

ಕ್ರಿಕೆಟಿಗ ಅಜಿಂಕ್ಯ ರಹಾನೆ ತಂದೆಯನ್ನು ಅರೆಸ್ಟ್ ಮಾಡಿದ ಪೊಲೀಸರು.

 

 

ಟೀಂ ಇಂಡಿಯಾದ ಟೆಸ್ಟ್ ಕ್ರಿಕೆಟರ್ ಅಜಿಂಕ್ಯ ರಹಾನೆ ಅವರ ತಂದೆ ಮಧುಕರ್ ಬಾಬು ರಾವ್ ರಹಾನೆ ನವದೆಹಲಿಯಲ್ಲಿ ಬಂಧಿಸಿದ್ದಾರೆ. ಮಹಿಳೆಯ ಮೇಲೆ ಕಾರು ಹರಿಸಿ ಆಕೆಯ ಸಾವಿಗೆ ಕಾರಣರಾದ ಆರೋಪದ ಮೇಲೆ ಕೊಲ್ಹಾಪುರ ಪೊಲೀಸ ಬಾಬು ರಾವ್ ಅವರನ್ನು ಬಂಧಿಸಿದ್ದಾರೆ.

ಇಂದು ಮಧುಕರ್ ಅವರು ಚಲಾಯಿಸುತ್ತಿದ್ದ ಹ್ಯೂಂಡೈ ಐ20 ಕಾರ್ ಕಂಗಲ್‌ ಎಂಬ ಪ್ರದೇಶದಲ್ಲಿ 67 ವರ್ಷದ ಅಷಾತಾಯಿ ಕಾಂಬ್ಳೆ ಎಂಬ ಮಹಿಳೆಯ ಮೇಲೆ ಹರಿದಿತ್ತು. ತೀವ್ರವಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಈ ಹಿನ್ನಲೆಯಲ್ಲಿ ಅಪಘಾತ ಎಸಗಿದ ರಹಾನೆ ಅವರ ತಂದೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

 

 

ಅಪಘಾತಕ್ಕೆ ಸಂಬಂಧಿಸಿದಂತೆ ಕೊಲ್ಹಾಪುರ ಪೊಲೀಸರು ಐಪಿಸಿ ಸೆಕ್ಷನ್ 304ಎ, 337, 338, 279 ಹಾಗೂ 184ರ ಪ್ರಕಾರ ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top