fbpx
ಸಮಾಚಾರ

ಸಂಸದ ಪ್ರತಾಪ್‌ ಸಿಂಹ ವಿರುದ್ಧ ಎಫ್‌ಐಆರ್‌ ದಾಖಲು..

ಸಂಸದ ಪ್ರತಾಪ್‌ ಸಿಂಹ ವಿರುದ್ಧ ಎಫ್‌ಐಆರ್‌ ದಾಖಲು..

 

 

ಸಂಸದ ಪ್ರತಾಪ್‌ ಸಿಂಹ ಅವರು ಯಾವುದೇ ಆಧಾರವಿಲ್ಲದ ಪ್ರಚೋದನಕಾರಿ ಹೇಳಿಕೆ ಹಾಗೂ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್‌ ಮಾಡಿ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಮೂಲಕ ಸಮಾಜದಲ್ಲಿ ಶಾಂತಿ, ಸ್ವಾಸ್ಥ್ಯ ಹಾಳು ಮಾಡುತ್ತಿದ್ದಾರೆ ಎಂಬ ಆರೋಪದ ಮೇಲೆ ಪ್ರತಾಪ್ ಸಿಂಹ ಮೇಲೆ ಬೆಂಗಳೂರು ನಗರ ಸೈಬರ್‌ ಕ್ರೈಂ ಪೊಲೀಸ್‌ ಸ್ಟೇಷನ್ ನಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ.

 

 

ಅಂತರ್ಜಲ ಸಂರಕ್ಷಣಾ ಪ್ರಾಧಿಕಾರದ ಸದಸ್ಯ ಎ.ಆನಂದ್‌ ಎಂಬುವರು “ಕರ್ತವ್ಯನಿರತ ಪೊಲೀಸರು ಹಾಗೂ ಸರ್ಕಾರಿ ಅಧಿಕಾರಿಗಳ ಪ್ರಾಮಾಣಿಕತೆಗೆ ಅಡ್ಡಿಪಡಿಸುವ ರೀತಿಯಲ್ಲಿ ಪ್ರತಾಪ ಸಿಂಹ ಹೇಳಿಕೆ ನೀಡುತ್ತಿದ್ದಾರೆ. ಬಿಜೆಪಿ ರಾಷ್ಟ್ರಾಧ್ಯಕ್ಷರು ನೀಡಿರುವ ‘ರಾಜ್ಯದಲ್ಲಿ ಟೈರ್ ಗೆ ಬೆಂಕಿ ಹಚ್ಚಿ, ಲಾಠಿ ಚಾರ್ಜ್ ಆಗುವ ರೀತಿ ಉಗ್ರ ಪ್ರತಿಭಟನೆ ನಡೆಸಬೇಕು’ ಎಂಬ ಸೂಚನೆ ಕೊಟ್ಟಿದ್ದಾರೆ ಎಂದು ಹೇಳಿರುವ ಪ್ರತಾಪ್ ಸಿಂಹ ಅವರು ಹೇಳಿಕೆ ನೀಡಿರುವ ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿದೆ.”

 

 

” ತಮ್ಮ ಫೇಸ್‌ಬುಕ್‌ ಪೇಜ್‌ನಲ್ಲಿ ಯಾವುದೇ ಆಧಾರವಿಲ್ಲದ ಸುಳ್ಳು ಪೊಳ್ಳು ಸುದ್ದಿಗಳನ್ನು ಅಪ್‌ಲೋಡ್‌ ಮಾಡಿ ಸಮಾಜದಲ್ಲಿ ಕೋಮು ಗಲಭೆ ಸೃಷ್ಟಿಸಲು ನಿರಂತರ ಪ್ರಯತ್ನ ನಡೆಸುತ್ತಿದ್ದಾರೆ. ಸಮಾಜದಲ್ಲಿ ಪಂಗಡಗಳ ನಡುವಿನ ಸಾಮರಸ್ಯ ಕೆಡಿಸಿ ಅಪರಾಧ ಕೃತ್ಯಗಳಿಗೆ ಪ್ರಚೋದನೆ ನೀಡುತ್ತಿದ್ದಾರೆ,. ನಾಡಿನ ವೀರವನಿತೆಯರ ಚಾರಿತ್ರ್ಯಹರಣ ಮಾಡುವ ಪೋಸ್ಟ್‌ಗಳನ್ನು ಸೋಷಿಯಲ್ ಮೀಡಿಯಾಗಳಲ್ಲಿ ಅಪ್‌ಲೋಡ್‌ ಮಾಡುತ್ತಿದ್ದಾರೆ” ಎಂದು ಆನಂದ್ ದೂರು ನೀಡಿದ್ದರು.

ದೂರನ್ನು ಪಡೆಡಿರುವ ಸೈಬರ್ ಕ್ರೈಮ್ ಪೊಲೀಸರು ಸಂಸದ ಪ್ರತಾಪ್‌ ಸಿಂಹ ವಿರುದ್ಧ ಸಮಾಜದ ಸಾಮರಸ್ಯ ಹಾಳು ಮಾಡಿದ (ಐಪಿಸಿ 153ಎ), ಕೋಮು ಸೌಹಾರ್ದಕ್ಕೆ ಧಕ್ಕೆ (ಐಪಿಸಿ 295ಎ), ಜೀವ ಬೆದರಿಕೆ (ಐಪಿಸಿ 506) ಅನ್ವಯ ಎಫ್‌ಐಆರ್‌ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top