fbpx
ಸಮಾಚಾರ

ಐದೇ ತಿಂಗಳಲ್ಲಿ ಬಿಜೆಪಿ ಬೊಕ್ಕಸಕ್ಕೆ 80 ಸಾವಿರ ಕೋಟಿ: ಮೋದಿ ನೇತೃತ್ವದ ಸರ್ಕಾರದ ವಿರುದ್ಧ ಗುಡುಗಿದ ಅಣ್ಣಾ ಹಜಾರೆ.

ಐದೇ ತಿಂಗಳಲ್ಲಿ ಬಿಜೆಪಿ ಬೊಕ್ಕಸಕ್ಕೆ 80 ಸಾವಿರ ಕೋಟಿ: ಮೋದಿ ನೇತೃತ್ವದ ಸರ್ಕಾರದ ವಿರುದ್ಧ ಗುಡುಗಿದ ಅಣ್ಣಾ ಹಜಾರೆ.

 

 

ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಭ್ರಷ್ಟಾಚಾರ ನಿಗ್ರಹ ಸೇರಿದಂತೆ ಇನ್ನೂ ಹಲವು ವಿಷಯಗಳನ್ನು ಕುರಿತು ಕೇಂದ್ರ ಸರ್ಕಾರ ನಿರ್ಲಕ್ಷ್ಯ ಮಾಡುತ್ತಿರುವುದಾಗಿ ಪ್ರಧಾನಿ ನರೇಂದ್ರ ಮೋದಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.ಅಲ್ಲದೆ ಕಳೆದ ಐದು ತಿಂಗಳಲ್ಲಿ ಬಿಜೆಪಿ ಬೊಕ್ಕಸಕ್ಕೆ ದೇಣಿಗೆ ರೂಪದಲ್ಲಿ 80 ಸಾವಿರ ಕೋಟಿ ರುಪಾಯಿ ಹರಿದು ಬಂದಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

 

 

“ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್’ಡಿಎ ಸರ್ಕಾರ ಅಧಿಕಾರ ಹಿಡಿದ ಮೂರು ವರ್ಷಗಳಲ್ಲಿ ಭ್ರಷ್ಟಾಚಾರ ಹೆಚ್ಚಾಗಿದ್ದು ಅತಿ ಹೆಚ್ಚು ಭ್ರಷ್ಟಾಚಾರ ಮಾಡುತ್ತಿರುವ ಏಷ್ಯಾ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ ಮೊದಲ ಸ್ಥಾನದಲ್ಲಿದೆ. ಇದನ್ನು ನಾನು ಹೇಳುತ್ತಿಲ್ಲ. ಏಷ್ಯಾದಲ್ಲಿ ನಡೆಸಿದ ಸಮೀಕ್ಷೆಯಿಂದ ತಿಳಿದುಬಂದಿದೆ ಎಂದು ಫೋರ್ಬ್ಸ್ ನಿಯತಕಾಲಿಕೆ ವರದಿ ಮಾಡಿದೆ” ಎಂದು ಹಜಾರೆ ತಿಳಿಸಿದ್ದಾರೆ.

“ಕಳೆದ ಐದು ತಿಂಗಳಲ್ಲಿ ಬಿಜೆಪಿ ಪಕ್ಷಕ್ಕೆ ದೇಣಿಗೆಯ ರೂಪದಲ್ಲಿ ಬರೋಬ್ಬರಿ ಎಂಬತ್ತು ಸಾವಿರ ಕೋಟಿ ರೂಪಾಯಿ ಹರಿದು ಬಂದಿದೆ. ಆದರೆ ದೇಶದ ಜನರು ಮಾತ್ರ ಕಷ್ಟದಲ್ಲೇ ಕೈತೊಳೆಯುತ್ತಿದ್ದಾರೆ, ರೈತರ ಸಾಲ ಮನ್ನಾ ಮಾಡಿಲ್ಲ, ತಾವು ಬೆಳದ ಬೆಳೆಗೆ ಸರಿಯಾದ ಬೆಲೆ ಸಿಗದೇ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದಮೇಲೆ ಸ್ವಲ್ಪ ಕಾಲಾವಕಾಶ ನೀಡಬೇಕು ಎಂದು ಕಳೆದ ಮೂರು ವರ್ಷಗಳಿಂದ ಸುಮ್ಮನಿದ್ದೆ ಆದರೆ ಈಗ ಸರ್ಕಾರದ ಪ್ರಶ್ನಿಸುವ ಸಮಯ ಬಂದಿದೆ ಸರ್ಕಾರ ಸ್ಪಾಡಿಸದೆ ಇದ್ದಲ್ಲಿ ಅವರ ವಿರುದ್ಧ 2018 ಮಾರ್ಚ್ 23 ರಂದು ದೇಶದ ರೈತರ ಪರವಾಗಿ ಬೃಹತ್ ಹೋರಾಟ ಮಾಡುತ್ತೇನೆ” ಎಂದು ತಿಳಿಸಿದ್ದಾರೆ.

 

 

 

“ಅಧಿಕಾರಕ್ಕೆ ಬಂದು ಮೂರು ವರ್ಷವಾದ್ರೂ ಲೋಕಪಾಲ್ ನೇಮಕ ವಿಚಾರದಲ್ಲಿ ನಿರಾಸಕ್ತಿ ತೋರಿರುವ ಮೋದಿ ಸರ್ಕಾರದ ವಿರುದ್ಧ ನನ್ನ ಹೋರಾಟವಿರುತ್ತದೆ. ಕಳೆದ ಮೂರು ವರ್ಷಗಳಿಂದ ಈ ಕುರಿತು ನಾನು 32 ಬಾರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದೇನೆ. ಆದರೆ, ಈ ವಿಷಯಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಕಚೇರಿಯಿಂದ ಒಂದೇ ಒಂದು ಪ್ರತಿಕ್ರಿಯೆ ಬಂದಿಲ್ಲ.,, ಬಿಜೆಪಿ ಸರಕಾರ ಚುನಾವಣೆಗೆ ಮೊದಲು ದೇಶದ ಜನರಿಗೆ ಸರಕಾರ ರಚನೆಯಾದ 100 ದಿನಗಳ ಒಳಗೆ ಕಪ್ಪುಹಣವನ್ನು ಮರಳಿಸುವುದಾಗಿ ಆಶ್ವಾಸನೆ ನೀಡಿತ್ತು. ಆದರೆ ಸರಕಾರ ರಚನೆಯಾದ ಬಳಿಕ ಪ್ರಧಾನಿ ನರೇಂದ್ರ ಮೋದಿ ತಮ್ಮ ಆಶ್ವಾಸನೆಗಳನ್ನು ಮರೆತ್ತಿದ್ದಾರೆ” ಎಂದು ಅವರು ಕಿಡಿ ಕಾರಿದ್ದಾರೆ.

 

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top