fbpx
ಹೆಚ್ಚಿನ

ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ಕಡ್ಡಾಯ ಮಾಡದಿರಲು ಕೇಂದ್ರ ಸರ್ಕಾರ ತೀರ್ಮಾನ.

ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ಕಡ್ಡಾಯ ಮಾಡದಿರಲು ಕೇಂದ್ರ ಸರ್ಕಾರ ತೀರ್ಮಾನ.

ಸೋಮವಾರ ಕೇಂದ್ರವು ಚಲನಚಿತ್ರಗಳ ಪ್ರದರ್ಶನಗಳ ಮೊದಲು ಕಡ್ಡಾಯವಾಗಿ ರಾಷ್ಟ್ರ ಪ್ರಸಾರ ಮಾಡಬೇಕು ಎಂಬ ಆದೇಶವನ್ನು ಹಿಂತೆಗೆದುಕೊಳ್ಳುತ್ತೇವೆ ಎಂದು ಸುಪ್ರೀಂ ಕೋರ್ಟ್ ಗೆ ತಿಳಿಸಿದೆ.

 

 

ಕೇಂದ್ರ ಸರ್ಕಾರವು ಕಳೆದ ನವೆಂಬರ್ 30 ರಂದು ಚಿತ್ರಮಂದಿರಗಳಲ್ಲಿ ಹಾಗು ಶಾಲೆಗಳಲ್ಲಿ ಕಡ್ಡಾಯವಾಗಿ ರಾಷ್ಟ್ರ ಗೀತೆ ಪ್ರಸಾರ ಮಾಡಬೇಕು ಎಂದು ಆದೇಶಿಸಿತ್ತು. ಈಗ ಚಿತ್ರ ಮಂದಿರಗಳಲ್ಲಿ ಮಡಿದ ಈ ಆದೇಶವನ್ನು ಹಿಂತೆದುಕೊಳ್ಳುವದಾಗಿ ತಿಳಿಸಿದೆ. ಜನರು ದೇಶಪ್ರೇಮದ ಹೆಸರಿನಲ್ಲಿ ಮಾಡುವ ಅನೈತಿಕ ಪೊಲೀಸ್‌ಗಿರಿಗೆ ಕಡಿವಾಣ ಹಾಕಲು ರಾಷ್ಟ್ರಗೀತೆ ಕಡ್ಡಾಯ ಆದೇಶ ರದ್ದು ಮಾಡುವ ಬಗ್ಗೆ ಸುಪ್ರೀಂ ಕೋರ್ಟ್ ಹಿಂದಿನ ವಿಚಾರಣೆ ಸಂದರ್ಭದಲ್ಲಿ ಸುಳಿವು ನೀಡಿತ್ತು.

 

 

ಪ್ರಸ್ತುತ ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆಯನ್ನು ಕಡ್ಡಾಯಗೊಳಿಸದಂತೆ ಸೋಮವಾರ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಹೇಳಿದ್ದು, ಈ ಸಂಬಂಧ ಮಾರ್ಗದರ್ಶಕ ಸೂಚನೆಗಳ ಸಿದ್ಧಪಡಿಸಲು ಸಚಿವರ ಸಮಿತಿ ರಚನೆ ಮಾಡುವುದಾಗಿ ಹೇಳಿಕೆ ನೀಡಿದೆ.

ಈ ಬಗ್ಗೆ ಕೇಂದ್ರ ಗೃಹ ಇಲಾಖೆ ಸಚಿವಾಲಯು ಸುಪ್ರೀಂ ಕೋರ್ಟ್ ಗೆ ಅಫಿಡವಿಟ್ ಸಲ್ಲಿಕೆ ಮಾಡಿದೆ, ಚಿತ್ರಮಂದಿರದಲ್ಲಿ ರಾಷ್ಟ್ರಗೀತೆ ಕಡ್ಡಾಯಗೊಳಿಸಿರುವ ಆದೇಶವನ್ನು ಮರು ಮಾಡಲು ಮನವಿ ಮಾಡಿಕೊಂಡಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top