ಮನೋರಂಜನೆ

ಸಂಕ್ರಾಂತಿ ಹಬ್ಬಕ್ಕೆ ಅಭಿಮಾನಿಗಳಿಗೆ ಭರ್ಜರಿ ಗಿಫ್ಟ್ ನೀಡಿದ ‘ಅಂಜನೀಪುತ್ರ’ ತಂಡ.

👇 ನಮ್ಮ ಪುಟ ಲೈಕ್ 👍 ಮಾಡಿ 👇👇

👆ನಮ್ಮ ಪೇಜ್ ಲೈಕ್ 👍 ಮಾಡಲು ಮರಿಬೇಡಿ ಫ್ರೆಂಡ್ಸ್ 👆

ಸಂಕ್ರಾಂತಿ ಹಬ್ಬಕ್ಕೆ ಅಭಿಮಾನಿಗಳಿಗೆ ಭರ್ಜರಿ ಗಿಫ್ಟ್ ನೀಡಿದ ‘ಅಂಜನೀಪುತ್ರ’ ತಂಡ.

 

 

ಬಾಕ್ಸ್ ಆಫೀಸ್’ನಲ್ಲಿ ಕಮಾಲ್ ಮಾಡುತ್ತಿರುವ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ಅಂಜನೀಪುತ್ರ ಚಿತ್ರ ತಂಡದಿಂದ ಅಪು ಅಭಿಮಾನಿಗಳಿಗೆ ಸಂಕ್ರಾಂತಿ ಹಬ್ಬಕ್ಕೆ ಭರ್ಜರಿ ಗಿಫ್ಟ್ ಸಿಕ್ಕಿದೆ. ಅದೇನೆಂದರೆ ಒಂದು ಭರ್ಜರಿ ಫೈಟ್ ಹಾಗೂ ನಾಲ್ಕು ದೃಶ್ಯಗಳನ್ನು ಅಳವಡಿಸಿದ್ದು ಸುಮಾರು 8 ನಿಮಿಷಗಳ ಕಾಲ ಚಿತ್ರವನ್ನು ವಿಸ್ತರಿಸಲಾಗಿದೆ. ಹೀಗಂತ ಸ್ವತಃ ನಿರ್ಮಾಪಕರೇ ಹೇಳಿದ್ದಾರೆ.

 

 

ಯಶಸ್ವಿ 25 ದಿನಗಳನ್ನು ಪೂರೈಸಿ ಮುನ್ನುಗುತ್ತಿರುವ ಅಂಜನೀಪುತ್ರ ಚಿತ್ರ ತಂಡದಿಂದ ಇಂದು ಸಕ್ಸಸ್ ಮೀಟ್ ಅನ್ನು ಕೈಗೊಳ್ಳಲಾಗಿತ್ತು ಆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಿರ್ಮಾಪಕ ಎಂ.ಎನ್.ಕುಮಾರ್ ಚಿತ್ರೀಕರಣದ ಸಮಯದಲ್ಲಿ ಚಿತ್ರೀಕರಿಸಿ ಕೊನೆಯಲ್ಲಿ ಎಡಿಟ್ ಮಾಡಲಾಗಿದ್ದ ಈ ದೃಶ್ಯಗಳನ್ನು ಈಗ 25 ನೇ ದಿನಕ್ಕೆ ಸೇರ್ಪಡೆ ಮಾಡಿದ್ದೇವೆ. ಈ ದೃಶ್ಯಗಳ ಸೇರ್ಪಡೆಗೆ 70 ಲಕ್ಷ ರೂಪಾಯಿ ಖರ್ಚು ಮಾಡಲಾಗಿದ್ದು ನಾಳೆಯಿಂದ ಸುಮಾರು 125 ಥಿಯೇಟರ್’ಗಳಲ್ಲಿ ನೋಡಬಹುದು ಎಂದು ಹೇಳಿದರು. ಹಾಗೆಯೇ ಚಿತ್ರಕ್ಕೆ ಪ್ರೋತ್ಸಾಹ ನೀಡಿದ ಎಲ್ಲ ಅಭಿಮಾನಿಗಳಿಗೆ ಮತ್ತು ಮಾದ್ಯಮದವರಿಗೆ ಧನ್ಯವಾದಗಳನ್ನು ಅರ್ಪಿಸಿದರು.

 

 

ಅಂದಹಾಗೆ ಚಿತ್ರದ ಬಗ್ಗೆ ಹೇಳಬೇಕೇ ಅಂದರೆ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ಪುನೀತ್ ನಾಯಕಿಯಾಗಿದ್ದಾರೆ. ಭಜರಂಗಿ ಖ್ಯಾತಿಯ ಎ.ಹರ್ಷ ಈ ಚಿತ್ರವನ್ನ ನಿರ್ದೇಶನ ಮಾಡುತ್ತಿದ್ದು, ಎಂ.ಎನ್ ಕುಮಾರ್ ನಿರ್ಮಾಣ ಮಾಡಿದ್ದಾರೆ.…ಚಿತ್ರಕ್ಕೆ ರವಿ ಬಸ್ರೂರು ಅವರ ಸಂಗೀತ ನಿರ್ದೇಶನ ಮತ್ತು ಸ್ವಾಮಿ ಅವರ ಛಾಯಾಗ್ರಹಣವಿದೆ.ಇದು ತಮಿಳಿನ ತಮಿಳಿನ “ಪೂಜೈ’ ಚಿತ್ರದ ರೀಮೇಕ್‌ ಆಗಿದ್ದು, ಕನ್ನಡದ ನೇಟಿವಿಟಿಗೆ ತಕ್ಕಂತೆ ಬದಲಾವಣೆ ಮಾಡಿಕೊಳ್ಳಲಾಗಿದೆ. ಡಿಸೆಂಬರ್ 21 ರಂದು ರಾಜ್ಯಾದ್ಯಂತ ತೆರೆಕಂಡ ಈ ಚಿತ್ರ ಎಲ್ಲೆಡೆ ಉತ್ತಮ ಪ್ರದರ್ಶನ ಕಾಣುತ್ತಿದೆ.

 

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Comments

comments

Click to comment

Leave a Reply

Your email address will not be published. Required fields are marked *

To Top