fbpx
ಹೆಚ್ಚಿನ

ಕಾರು ಅಪಘಾತದಲ್ಲಿ ಕೂದಲೆಳೆ ಅಂತರದಲ್ಲಿ ಪಾರಾದ ಪ್ರಧಾನಿ ಮೋದಿ ಪತ್ನಿ ಜಶೋದಾಬೆನ್

ಕಾರು ಅಪಘಾತದಲ್ಲಿ ಕೂದಲೆಳೆ ಅಂತರದಲ್ಲಿ ಪಾರಾದ ಪ್ರಧಾನಿ ಮೋದಿ ಪತ್ನಿ ಜಶೋದಾಬೆನ್

 

ರಾಜಸ್ತಾನ ರಾಜ್ಯದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಪತ್ನಿ ಜಶೋದಾಬೆನ್ ಅವರ ತಲೆಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.

 

 

ರಸ್ತೆ ಅಪಘಾತ ನಡೆದ ತಕ್ಷಣ ಜಶೋದಾ ಬೆನ್ ಅವರನ್ನು ಪ್ರಾಥಮಿಕ ಆರೋಗ್ಯ ತಪಾಸಣೆ ಮಾಡಿದ್ದಾರೆ. ಅವರು ಅಪಾಯದಿಂದ ಪಾರಾಗಿದ್ದಾರೆ, ಆರೋಗ್ಯವಾಗಿದ್ದರೆ ಎಂದು ಚಿತ್ತೋರ್ ಗಢ್ ನ ಉಪವಿಭಾಗೀಯ ಮ್ಯಾಜಿಸ್ಟ್ರೇಟರ್ ಸುರೇಶ್ ಕಾರ್ತಿಕ್ ಅವರು ಮಾಧ್ಯಮಕ್ಕೆ ತಿಳಿಸಿದ್ದಾರೆ. ಕಾರಿನಲ್ಲಿ ಒಟ್ಟು 7 ಜನರು ಪ್ರಾಣ ಮಾಡುತ್ತಿದ್ದರು , ಅವರೆಲ್ಲ ಜಶೋದಾ ಬೆನ್ ಸಂಬಂಧಿಕರೆಂದು ತಿಳಿದುಬಂದಿದೆ. ಅಪಘಾತದಲ್ಲಿ ಓರ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚಾಲಕ ಜಯೇಂದ್ರ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ.

 

 

ಜಶೋದಾ ಬೆನ್ ಅವರು ಸಂಬಂಧಿಕರ ಮಾಡುವೆ ಸಮಾರಂಭಕ್ಕೆ ಹೋಗಿ ಗುಜರಾತ್ ರಾಜ್ಯಕ್ಕೆ ಮರಳುತ್ತಿರುವಾಗ ಈ ಅಪಘಾತ ನಡೆದಿದೆ. ಅಪಘಾತದಲ್ಲಿ ಜಶೋದಾ ಬೆನ್ ಅವರ ಸಂಬಂಧಿಕರೊಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಜಶೋದಾ ಬೆನ್‌ಗೆ ಯಾವ ರೀತಿಯ ಗಂಭೀರ ಗಾಯಗಳು ಆಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

 

 

ದೇಶ್ಯಾದ್ಯಂತ ಜನರು ಜಶೋದಾಬೆನ್ ರವರು ಬೇಗ ಗುಣಮುಖರಾಗಲಿ ಎಂದು ಆಶಿಸುತ್ತಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top