fbpx
ದೇವರು

ಮಹಾಮಸ್ತಕಾಭಿಷೇಕ ಮಹೋತ್ಸವಕ್ಕೆ ಚಾಲನೆ ನೀಡಿದ ರಾಷ್ಟ್ರಪತಿ ರಾಮನಾಥ ಕೋವಿಂದ್

ಮಹಾಮಸ್ತಕಾಭಿಷೇಕ ಮಹೋತ್ಸವಕ್ಕೆ ಚಾಲನೆ ನೀಡಿದ ರಾಷ್ಟ್ರಪತಿ ರಾಮನಾಥ ಕೋವಿಂದ್

 

ಶ್ರವಣಬೆಳಗೊಳ ಕ್ಷೇತ್ರದ ಗೊಮ್ಮಟೇಶ್ವರ ಭಗವಾನ್‌ ಬಾಹುಬಲಿ ಸ್ವಾಮಿಯ ೮೮ ನೆಯ ಮಹಾ ಮಸ್ತಕಾಭಿಷೇಕ ಮಹೋತ್ಸವಕ್ಕೆ ಮಾನ್ಯ ರಾಷ್ಟ್ರಪತಿ ಶ್ರೀ ರಾಮನಾಥ ಕೋವಿಂದ್‌ ಅವರು ಇಂದು ಚಾಲನೆ ನೀಡಿದರು.

 

 

ಮಹಾಮಸ್ತಕಾಭಿಷೇಕವು ಶ್ರೀಮಠದ ಪೀಠಾಧ್ಯಕ್ಷ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರ ಸಾರಥ್ಯದಲ್ಲಿ ನಡೆಯುತ್ತಿದ್ದು, ಶ್ರವಣಬೆಳಗೊಳದ ಚಾವುಂಡರಾಯ ಮಂಟಪದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್‌, ಮುಖ್ಯಮಂತ್ರಿ ಸಿದ್ದರಾಮಯ್ಯ,ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ರಾಜ್ಯಪಾಲ ವಜುಭಾಯ್ ವಾಲಾ, ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ, ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಇನ್ನು ಅನೇಕ ಮಹನೀಯರು ಹಾಜರಿದ್ದರು.

 

 

ಭಗವಾನ್ ಬಾಹುಬಲಿ ಖ್ಯಾತಿ ಸಾರುವ ಹಾಡಿನೊಂದಿಗೆ ಪ್ರಾರಂಭವಾದ ಈ ಐತಿಹಾಸಿಕ ಕ್ಷಣಕ್ಕೆ ದೇಶದ ನಾನಾ ಭಾಗದಿಂದ ಮುನಿಗಳು, ತ್ಯಾಗಿಗಳು, ಮಾತಾಜಿಗಳು ಮತ್ತು ಅಪಾರ ಭಕ್ತರು ಹಾಜರಾಗಿದ್ದರು. ಫೆ.26ರವರೆಗೆ ಮಸ್ತಕಾಭಿಷೇಕ ಕಾರ್ಯಕ್ರಮ ನಡೆಯಲಿದೆ.

 

 

ಶ್ರವಣಬೆಳಗೊಳದಲ್ಲಿ ಗೊಮ್ಮಟೇಶ್ವರ ಮೂರ್ತಿಗೆ ಅಭಿಷೇಕಕ್ಕೆ ಜರ್ಮನ್‌ ತಂತ್ರಜ್ಞಾನದಲ್ಲಿ 12 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಅಟ್ಟಣಿಗೆ ಈ ಬಾರಿಯ ಆಕರ್ಷಣೆಗಳಲ್ಲಿ ಒಂದಾಗಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top