ಹೆಚ್ಚಿನ

ಅಥಣಿ ಬಿಜೆಪಿ ಮುಖಂಡನಿಂದ ಯುವಕನ ಮೇಲೆ ಹಲ್ಲೆ: ಮರುಕಳಿಸಿದ ನಲಪಾಡ್ ರೀತಿಯ ಪ್ರಕರಣ

ಕೇವಲ ಒಂದು ದಿನ ಕೆಲಸಕ್ಕೆ ಬರಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಕೆಲಸಗಾರನಿಗೆ ಹೋಟೆಲ್ ಮಾಲೀಕನೇ ತೀವ್ರವಾಗಿ ಹಲ್ಲೆ ಮಾಡಿರುವ ಆಘಾತಕಾರಿ ಘಟನೆ ಬೆಳಗಾವಿ ಜಿಲ್ಲೆ ಅಥಣಿಯಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ. ತನ್ನ ಹೋಟೆಲ್ ಕಾರ್ಮಿಕನ ಮೇಲೆ ಬಿಜೆಪಿ ಮುಂಖಡ ಹಲ್ಲೆ ಮಾಡಿರುವ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಸೇರಿದಂತೆ ನಾಲ್ಕು ಜನರನ್ನು ಪೊಲೀಸರು ಬಂಧಿಸಿದ್ದಾರೆ.

 

 

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಹೋಟೆಲ್ ವೊಂದರಲ್ಲಿ ರವಿವಾರ ಕಾರ್ಮಿಕನ ಮೇಲೆ ಹಲ್ಲೆ ನಡೆದಿತ್ತು. ಈ ಪ್ರಕರಣ ಸಂಬಂಧ ಬಿಜೆಪಿ ಮಾಜಿ ಪುರಸಭೆ ಅಧ್ಯಕ್ಷ, ಹೋಟೆಲ್ ಮಾಲೀಕ ಉಮೇಶ್ ಬಂಟೋಡ್ಕರ್ ಮತ್ತು ಈತನ ಸಹಚರರಾದ ಹನುಮಂತ, ಸತೀಶ, ರಾವಸಾಬ್ ಎಂಬವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.

 

 

ರಮೇಶ್ ಆಜೂರನ ಮೇಲೆ ಹಲ್ಲೆ ಕಬ್ಬಿಣ ರಾಡಿನಿಂದ ಹಲ್ಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಗಾಯಾಳು ರಮೇಶ್ ಆಜೂರ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯ ಬಗ್ಗೆ ರಾಜ್ಯಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

 

 

ಹಲ್ಲೆಗೊಳಗಾದ ವ್ಯಕ್ತಿಯು ರಮೇಶ ಆಜೂರ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ತೇರದಾಳ ಪಟ್ಟಣದವರಾಗಿದ್ದರೆ, ಹಲ್ಲೆಗೊಳಗಾದ ವ್ಯಕ್ತಿಯನ್ನು ಸ್ಥಳೀಯರು ಸಾರ್ವಜನಿಕರ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಥಣಿ ಪೋಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top