ಹೆಚ್ಚಿನ

ಕಾಂಗ್ರೆಸ್ ಹೈಕಮಾಂಡ್ ಗೆ ಸೆಡ್ಡು ಹೊಡೆದು ರಾಜ್ಯ ಸಭೆಗೆ ಕರ್ನಾಟಕದವರೇ ಇರಲಿ ಸಿದ್ದರಾಮಯ್ಯ

ಬೇರೆ ರಾಜ್ಯದ, ಕನ್ನಡ ಮಾತನಾಡಲು ಬಾರದ ವ್ಯಕ್ತಿಗಳನ್ನು ಕರ್ನಾಟಕದಿಂದ ರಾಜ್ಯ ಸಭೆಗೆ ಆರಿಸುವುದು ಬೇಡ ಎಂದು ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಆರಂಭವಾಗಿದೆ. ಕಳೆದ ಬಾರಿ ಕರ್ನಾಟಕದಿಂದ ಆಯ್ಕೆ ಆಗಿದ್ದ ರಾಜೀವ್ ಚಂದ್ರಶೇಖರ್ ಅವರನ್ನು ಕರ್ನಾಟಕದಿಂದ ಆಯ್ಕೆ ಮಾಡಬಾರದು ಎಂಬ ಕೂಗು ಕೇಳಿ ಬರುತ್ತಿದೆ. #RajeevBeda ಎಂಬ ಹ್ಯಾಷ್ ಟ್ಯಾಗ್ ನೊಂದಿಗೆ ಈ ಅಭಿಯಾನ ಈಗ ಟ್ವಿಟ್ಟರ್ ನಲ್ಲಿ ಟ್ರೆಂಡ್ ಆಗುತ್ತಿದೆ.

 

 

ಇನ್ನು ಸ್ಯಾಮ್ ಪಿತ್ರೊಡಾ ಹಾಗು ಜನಾರ್ಧನ ದ್ವಿವೇದಿಯವರನ್ನು ಕರ್ನಾಟಕದಿಂದ ರಾಜ್ಯಸಭೆ ಆಯ್ಕೆ ಮಾಡಬೇಕು ಎನ್ನುವ ಹೈಕಮಾಂಡ್ ಮನವಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರಸ್ಕಾರ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಈ ಮುಖೇನ ಕರ್ನಾಟಕ ರಾಜ್ಯದಲ್ಲಿ ಕನ್ನಡಿಗರಿಗೆ ಪ್ರಥಮ ಆಧ್ಯತೆ ಕೊಡಬೇಕು ಎಂದು ಹೈಕಮಾಂಡ್ ಗೆ ಸ್ಪಷ್ಟ ಸಂದೇಶ ನೀಡಿದಂತಾಗಿದೆ.

 

 

ದೆಹಲಿಯಲ್ಲಿ ರಾಷ್ಟೀಯ ಕಾಂಗ್ರೆಸ್ ಅಧ್ಯಕ್ಷರಾದ ರಾಹುಲ್ ಗಾಂಧಿ ಅವರನ್ನು ಭೇಟಿ ಆಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸ್ಯಾಮ್ ಪಿತ್ರೊಡಾ ಮತ್ತು ಜನಾರ್ಧನ ದ್ವಿವೇದಿಯವರ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆ ಮಾಡಲು ತಿಳಿಸಿದ್ದರು. ಆದರೆ ಸಿದ್ದರಾಮಯ್ಯ ನಯವಾಗಿ ಈ ಕೋರಿಕೆಯನ್ನು ತಿರಸ್ಕಾರ ಮಾಡಿದ್ದಾರೆ.

 

 

ವಿಧಾನಸಭಾ ಚುನಾವಣೆ ಸಮೀಪವಾಗುತ್ತಿರುವ ಹಿನ್ನಲೆಯಲ್ಲಿ ರಾಜ್ಯದಿಂದ ಬೇರೆ ರಾಜ್ಯದವರ ಆಯ್ಕೆ ಮಾಡುವುದು ಬೇಡ ಎಂದು ಸಿದ್ದರಾಮಯ್ಯ ರಾಹುಲ್ ಗಾಂಧಿ ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಇದೆ ಮಾರ್ಚ 23 ರಂದು ರಾಜ್ಯಸಭಾ ಚುನಾವಣೆ ನಡೆಯಲಿದೆ ಎಂದು ತಿಳಿದು ಬಂದಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top