ಹೆಚ್ಚಿನ

ಮುಂದುವರೆದ ಪ್ರತಿಮೆ ಧ್ವಂಸ ಪ್ರಕರಣಗಳು: ಗಾಂಧೀಜಿ ಹಾಗು ಬಾಬಾಸಾಹೇಬರ ಪ್ರತಿಮೆಗೆ ಹಾನಿ

ಉತ್ತರ ಪ್ರದೇಶ ರಾಜ್ಯದ ಅಲಿಘಡ್, ಮೀರತ್ ಸೇರಿದಂತೆ ದೇಶದ ವಿವಿದೆಡೆ ನಾಲ್ಕು ಕಡೆಗೆ ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಗೆ ಹಾನಿ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಘಟನೆಗೆ ದೇಶ್ಯಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ದಲಿತಪರ ಸಂಘಟನೆಗಳು ಪ್ರತಿಭಟನೆ ಮಾಡುತ್ತಿದ್ದಾರೆ. ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು ತನಿಖೆ ಮಾಡುತ್ತಿದ್ದಾರೆ.

 

 

ಕೇರಳದ ರಾಜ್ಯದ ಕನ್ನೂರು ಜಿಲ್ಲೆಯಲ್ಲಿ ಮಹಾತ್ಮಾ ಗಾಂಧಿಜಿ ಅವರ ಪ್ರತಿಮೆಯನ್ನು ಹಾಗು ತಮಿಳುನಾಡು ರಾಜ್ಯದಲ್ಲಿ ಅಂಬೇಡ್ಕರ್ ರವರ ಪ್ರತಿಮೆಯನ್ನು ಧ್ವಂಸ ಮಾಡಲಾಗಿದೆ ಎಂದು ತಿಳಿದು ಬಂದಿದೆ.

 

 

ತ್ರಿಪುರ ಚುನಾವಣಾ ಫಲಿತಾಂಶ ಬಂದ ನಂತರ ಕಮ್ಯುನಿಸ್ಟ್ ಐಕಾನ್ ಲೆನಿನ್ ಪ್ರತಿಮೆ ಕೆಲವರು ಧ್ವಂಸ ಮಾಡಿದ್ದರು. ಇದಾದ ನಂತರ ತಮಿಳುನಾಡಿನಲ್ಲಿ ಪೆರಿಯಾರ್ ಪ್ರತಿಮೆ ಧ್ವಂಸ ಮಾಡಿದ್ದರು. ದೇಶದಲ್ಲಿ ಮಹಾನ ನಾಯಕರ ಪ್ರತಿಮೆಗಳನ್ನು ಧ್ವಂಸ ಮಾಡುತ್ತಿರುವುದು ಕಳವಳಕಾರಿ ಸಂಗತಿ.

 

 

ದೇಶದಲ್ಲಿ ಪ್ರತಿಮೆಗಳ ಧ್ವಂಸ ಮಾಡುತ್ತಿರುವ ಪ್ರಕರಣಗಳನ್ನು ಗಂಭೀರವಾಗಿ ತೆಗೆದುಕೊಂಡಿರುವ ಕೇಂದ್ರ ಗೃಹ ಇಲಾಖೆ, ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸುತ್ತೋಲೆಗಳನ್ನು ಕಳುಹಿಸಿದೆ ಎಂದು ತಿಳಿದು ಬಂದಿದೆ. ಅಗತ್ಯ ಮುಂಜಾಗೃತಾ ಕ್ರಮವನ್ನು ಕೈಗೊಳ್ಳಬೇಕು ಎಂದು ಸೂಚನೆ ನೀಡಿದೆ. ಎಲ್ಲಾದರೂ ಪ್ರಕರಣ ನಡೆದರೆ ಅವರ ವಿರುದ್ಧ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಲಾಗಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top