ಸಮಾಚಾರ

ನೂತನ ನಾಡಧ್ವಜದ ಬಣ್ಣಗಳ ಕುರಿತು ಸಿಎಂ ಗೆ ಪ್ರತಾಪ್ ಸಿಂಹ ಟಾಂಗ್

ನೂತನ ನಾಡಧ್ವಜದ ಬಣ್ಣಗಳ ಕುರಿತು ಸಿಎಂ ಸಿದ್ದರಾಮಯ್ಯ ಅವರಿಗೆ ಸಂಸದ ಪ್ರತಾಪ್ ಸಿಂಹ ಟಾಂಗ್ ನೀಡಿದ್ದಾರೆ.

 

 

ಇತ್ತೀಚೆಗೆ ಗೃಹ ಕಚೇರಿ ಕೃಷ್ಣದಲ್ಲಿ ಕನ್ನಡಪರ ಸಂಘಟನೆಗಳ ಜೊತೆ ಸಿಎಂ ಸಿದ್ದರಾಮಯ್ಯ ಮಾತುಕತೆ ನಡೆಸಿ ನಾಡಧ್ವಜ ಸಮಿತಿ ನೀಡಿದ್ದ ನಾಡಧ್ವಜವನ್ನೆ ಸರ್ವಾನುಮತದಿಂದ ಅಂಗೀಕಾರ ಮಾಡಲಾಗಿತ್ತು.ಬಳಿಕ ಸುದ್ದಿಗೋಷ್ಠಿ ನಡೆಸಿದ ಸಿಎಂ ಸಿದ್ದರಾಮಯ್ಯ ನೂತನ ನಾಡಧ್ವಜವನ್ನ ಅನಾವರಣಗೊಳಿಸಿದ್ದರು. ಹಳದಿ, ಬಿಳಿ ಮಧ್ಯೆ ಕರ್ನಾಟಕ ಸರ್ಕಾರದ ಲಾಂಛನ ಕೆಂಪು ಬಣ್ಣದ ತ್ರಿವರ್ಣ ನಾಡಧ್ವಜವನ್ನ ಸಿಎಂ ಪ್ರದರ್ಶನ ಮಾಡಿದ್ದರು. ಹಳದಿ ಸಮೃದ್ಧಿಯ ಸಂಕೇತ, ಬಿಳಿ ಶಾಂತಿಯ ಸಂಕೇತ, ಕೆಂಪು ಸ್ವಾಭಿಮಾನ ಹಾಗೂ ಧೈರ್ಯದ ಸಂಕೇತವಾಗಿದೆ. ನಾಡಧ್ವಜ ರಚಿಸಲು ಸರ್ಕಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿತ್ತು.

 

 

ನಾಡಧ್ವಜದ ಬಣ್ಣಗಳ ಅರ್ಥದ ಬಗ್ಗೆ ಸಿಎಂ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣ ಟ್ವೀಟರ್ ನಲ್ಲಿ ಸಿಎಂ ಟ್ವೀಟ್ ಗೆ ಕಾಲೆಳೆದ ಪ್ರತಾಪ್ ಸಿಂಹ ಅವರು, ಸಿದ್ದರಾಮಯ್ಯನವರೇ ನಮ್ಮ ಕನ್ನಡ ಬಾವುಟದ ಬಣ್ಣಗಳು ಅರಿಶಿಣ ಮತ್ತು ಕುಂಕುಮದ ಸಂಕೇತ. ನೀವು ಆ ಬಣ್ಣಗಳಿಗೆ ಬೇರೆ ವಿಕೃತ ಅರ್ಥ ಕಲ್ಪಿಸಬೇಡಿ. ಕೆಂಪು ಡೇಂಜರ್ ಎನ್ನುತ್ತಾರೆ. ನೀವು ಸಹ ಈ ರಾಜ್ಯಕ್ಕೆ ಡೇಂಜರ್ ಅಗಿದ್ದೀರಿ ಎಂದು ಹೇಳಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top